Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:16 - ಪರಿಶುದ್ದ ಬೈಬಲ್‌

16 ಉಷ್ಟ್ರಪಕ್ಷಿಯು ತನ್ನ ಮರಿಗಳನ್ನು ಕಡೆಗಣಿಸಿ ತನ್ನ ಮರಿಗಳಲ್ಲವೆಂಬಂತೆ ವರ್ತಿಸುತ್ತದೆ; ಮರಿಗಳು ಸತ್ತುಹೋದರೆ ತನ್ನ ಪ್ರಯಾಸವು ವ್ಯರ್ಥವಾಯಿತೆಂಬ ಚಿಂತೆಯೂ ಅದಕ್ಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವುದು, ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತನ್ನ ಮರಿ ತನ್ನದೇ ಅಲ್ಲ ಎಂಬಷ್ಟು ಕ್ರೂರತೆ ಅದರದು ತನ್ನ ಹೆರಿಗೆ ನಿಷ್ಫಲವಾಯಿತೆಂಬ ಸಂಕಟ ಅದಕ್ಕಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವದು, ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ತನ್ನ ಮರಿಗಳನ್ನು ತನ್ನವುಗಳಲ್ಲ ಎಂಬಂತೆ ಕ್ರೂರವಾಗಿ ನಡೆಸುತ್ತದೆ; ಉಷ್ಟ್ರಪಕ್ಷಿಯು ತನ್ನ ಹೆರಿಗೆ ವ್ಯರ್ಥವಾದರೂ ಅದಕ್ಕೆ ಚಿಂತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:16
10 ತಿಳಿವುಗಳ ಹೋಲಿಕೆ  

ಕಾಡುನಾಯಿಯು ಸಹ ತನ್ನ ಮರಿಗಳಿಗೆ ಹಾಲನ್ನು ಕುಡಿಸುತ್ತದೆ. ನರಿಯು ಸಹ ತನ್ನ ಮರಿಗಳಿಗೆ ಮೊಲೆಗಳಿಂದ ಹಾಲನ್ನು ಕೊಡುತ್ತದೆ. ಆದರೆ ನನ್ನ ಜನರಾದರೋ, ಮರುಭೂಮಿಯಲ್ಲಿ ಜೀವಿಸುವ ಉಷ್ಟ್ರಪಕ್ಷಿಯಂತೆ ಕ್ರೂರಿಗಳಾಗಿದ್ದಾರೆ.


ಅವರು ತಾವು ಕೊಟ್ಟ ಮಾತನ್ನು ನೆರವೇರಿಸದವರೂ ಬೇರೆಯವರಿಗೆ ಮಮತೆಯನ್ನಾಗಲಿ ಕರುಣೆಯನ್ನಾಗಲಿ ತೋರದವರೂ ಆಗಿದ್ದಾರೆ.


ಆ ಜನರು ಕಟ್ಟುವ ಪ್ರತಿಯೊಂದನ್ನೂ ಸರ್ವಶಕ್ತನಾದ ಯೆಹೋವನು ಬೆಂಕಿಯಿಂದ ನಾಶಮಾಡುವ ತೀರ್ಮಾನವನ್ನು ಮಾಡಿರುತ್ತಾನೆ. ಅವರು ಮಾಡಿದ ಕೆಲಸವೆಲ್ಲವೂ ವ್ಯರ್ಥವಾಗುವದು.


ನನ್ನ ಕಡೆಗೆ ನೋಡು. ನೀನು ಇಷ್ಟೆಲ್ಲ ಮಾಡಿದ್ದು ಯಾರಿಗೆ ಎಂಬುದನ್ನು ನೋಡು. ನಾನು ನಿನಗೆ ಈ ಪ್ರಶ್ನೆಗಳನ್ನು ಕೇಳಬಯಸುತ್ತೇನೆ. ಏನು, ಸ್ತ್ರೀಯರು ತಾವು ಹೆತ್ತ ಮಕ್ಕಳನ್ನೇ ತಿನ್ನಬೇಕೇ? ಸ್ತ್ರೀಯರು ತಾವು ಲಾಲನೆಪಾಲನೆ ಮಾಡಿದ ಮಕ್ಕಳನ್ನೇ ತಿನ್ನಬೇಕೇ? ಯೆಹೋವನ ಪವಿತ್ರ ಆಲಯದಲ್ಲಿಯೇ ಯಾಜಕನನ್ನು ಮತ್ತು ಪ್ರವಾದಿಯನ್ನು ಕೊಲ್ಲಬೇಕೇ?


ಮೂಢನು ತನ್ನ ಮನೆದಾರಿಯನ್ನು ತಿಳಿದುಕೊಳ್ಳುವಷ್ಟು ಜಾಣನಲ್ಲ, ಆದ್ದರಿಂದ ಅವನು ತನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಕೆಲಸ ಮಾಡಬೇಕು.


ಆ ಮೊಟ್ಟೆಗಳನ್ನು ಮನುಷ್ಯರಾಗಲಿ ಪ್ರಾಣಿಗಳಾಗಲಿ ತುಳಿಯಬಹುದೆಂಬುದನ್ನು ಆ ಉಷ್ಟ್ರಪಕ್ಷಿಯು ಮರೆತುಬಿಡುತ್ತದೆ.


ಯಾಕೆಂದರೆ ನಾನು ಉಷ್ಟ್ರಪಕ್ಷಿಗೆ ಜ್ಞಾನವನ್ನು ಕೊಡಲಿಲ್ಲ. ಉಷ್ಟ್ರಪಕ್ಷಿಯು ಮೂಢಪಕ್ಷಿಯಾಗಿದೆ, ಅದನ್ನು ಈ ರೀತಿ ನಿರ್ಮಿಸಿದವನು ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು