Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:19 - ಪರಿಶುದ್ದ ಬೈಬಲ್‌

19 “ಯೋಬನೇ, ನೀನು ಕುದುರೆಗೆ ಶಕ್ತಿಯನ್ನು ಕೊಟ್ಟೆಯಾ? ಅದರ ಕೊರಳಿನ ಮೇಲಿನ ಕೇಸರವನ್ನು ಕೊಟ್ಟೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀನು ಕುದುರೆಗೆ ಶಕ್ತಿಯನ್ನು ಕೊಟ್ಟು, ಅದರ ಕೊರಳಿಗೆ ಗುಡುಗನ್ನು ಕಟ್ಟಿದವನು ನಿನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕುದುರೆಗೆ ಶಕ್ತಿಕೊಟ್ಟವನು ನೀನೋ? ಅದರ ಕೊರಳಿಗೆ ಜುಟ್ಟುಗುಡುಗನ್ನು ಕಟ್ಟಿದವನು ನೀನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀನು ಕುದುರೆಗೆ ಶಕ್ತಿಯನ್ನು ಕೊಟ್ಟು ಅದರ ಕೊರಳಿಗೆ ಅದರಾಟವನ್ನು ಸುತ್ತಿಸಿದಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಯೋಬನೇ, ಕುದುರೆಗೆ ಶಕ್ತಿ ಕೊಟ್ಟವನು ನೀನೋ? ಅದರ ಕೊರಳಿಗೆ ಜುಟ್ಟುಗುಡುಗನ್ನು ಹೊದಿಸಿದವನು ನೀನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:19
11 ತಿಳಿವುಗಳ ಹೋಲಿಕೆ  

ಯುದ್ಧದ ಕದುರೆಗಳಾಗಲಿ ಶಕ್ತಿಯುತರಾದ ಸೈನಿಕರಾಗಲಿ ಆತನನ್ನು ಮೆಚ್ಚಿಸಲಾರವು.


ಜಿಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನ (ಯೇಸು ಅವರಿಗೆ ಬೊವನೆರ್ಗೆಸ್ ಎಂಬ ಹೆಸರನ್ನಿತ್ತನು. ಈ ಹೆಸರಿಗೆ “ಸಿಡಿಲಿನ ಜನರು” ಎಂದರ್ಥ.)


ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಯೆಹೋವನೇ, ನನ್ನ ದೇವರೇ, ನೀನು ಬಹಳ ದೊಡ್ಡವನು! ನೀನು ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಂಡಿರುವೆ.


ಯೆಹೋವನೇ ರಾಜನು. ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ. ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. ಅದು ಕದಲುವುದೇ ಇಲ್ಲ.


ತುತ್ತೂರಿಯ ಧ್ವನಿಗೆ ಕುದುರೆಯು, “ಆಹಾ!” ಎಂದು ಹೇಳುತ್ತದೆ. ಅದು ದೂರದಿಂದಲೇ ಯುದ್ಧವನ್ನು ಮೂಸಿ ನೋಡಿ ತಿಳಿಯುವುದು. ಸೇನಾಧಿಪತಿಗಳು ಗಟ್ಟಿಯಾಗಿ ಅಪ್ಪಣೆಕೊಡುವುದನ್ನೂ ಯುದ್ಧದ ಎಲ್ಲಾ ಕೂಗಾಟವನ್ನೂ ಅದು ಕೇಳಿಸಿಕೊಳ್ಳುತ್ತದೆ.


ಬಳಿಕ ಮೋಶೆ ಮತ್ತು ಇಸ್ರೇಲರು ಯೆಹೋವನಿಗೆ ಈ ಗೀತೆಯನ್ನು ಹಾಡತೊಡಗಿದರು: “ನಾನು ಯೆಹೋವನಿಗೆ ಹಾಡುವೆನು. ಆತನು ಮಹಾಕಾರ್ಯಗಳನ್ನು ಮಾಡಿದ್ದಾನೆ. ಆತನು ಕುದುರೆಗಳನ್ನೂ ಸವಾರರನ್ನೂ ಸಮುದ್ರದೊಳಗೆ ಮುಳುಗಿಸಿದನು.


ಸೀಸೆರನ ಬಲಿಷ್ಠವಾದ ಕುದುರೆಗಳು ಭರದಿಂದ ಓಡಿದವು. ಆ ಕುದುರೆಗಳ ಕಾಲುಗಳು ನೆಲಕ್ಕೆ ಅಪ್ಪಳಿಸಿದವು.


ಆದರೆ ಉಷ್ಟ್ರಪಕ್ಷಿಯು ಓಡಲು ಎದ್ದೇಳುವಾಗ, ಕುದುರೆಯನ್ನೂ ಅದರ ಸವಾರನನ್ನೂ ಕಂಡು ನಗುತ್ತದೆ. ಅದು ಕುದುರೆಗಿಂತಲೂ ವೇಗವಾಗಿ ಓಡಬಲ್ಲದು.


ಮಿಡತೆಯು ಕುಪ್ಪಳಿಸುವಂತೆ ನೀನು ಕುದುರೆಯನ್ನೂ ಕುಪ್ಪಳಿಸಬಲ್ಲೆಯಾ? ಅದರ ಗಟ್ಟಿಯಾದ ಕೆನೆತ ಜನರನ್ನು ಭಯಗೊಳಿಸುತ್ತದೆ.


ಅದರ ಕುತ್ತಿಗೆ ಬಹು ಶಕ್ತಿಯುತವಾಗಿದೆ; ಜನರು ಭಯಗೊಂಡು ಅದರ ಬಳಿಯಿಂದ ಓಡಿಹೋಗುವರು.


ಯುದ್ಧದಲ್ಲಿ ದೊರೆಯುವ ಜಯ ಕುದುರೆಗಳಿಂದಲ್ಲ. ಅವುಗಳ ಬಲವು ನಿನ್ನನ್ನು ರಕ್ಷಿಸಲಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು