ಯೋಬ 39:7 - ಪರಿಶುದ್ದ ಬೈಬಲ್7 ಕಾಡುಕತ್ತೆಯು ಗದ್ದಲವಿರುವ ಊರುಗಳ ಸಮೀಪಕ್ಕೂ ಹೋಗುವುದಿಲ್ಲ, ಯಾರೂ ಅವುಗಳನ್ನು ಪಳಗಿಸಿ ದುಡಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದು ಊರುಗದ್ದಲವನ್ನು ಧಿಕ್ಕರಿಸಿ, ಹೊಡೆಯುವವನ ಕೂಗಾಟವನ್ನು ಕೇಳಿದ್ದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದು ಧಿಕ್ಕರಿಸುತ್ತದೆ ಊರಗದ್ದಲವನು ಅದು ಕೇಳಿದ್ದಿಲ್ಲ ಓಡಿಸುವವನ ಕೂಗನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದು ಊರಗದ್ದಲವನ್ನು ಧಿಕ್ಕರಿಸಿ ಹೊಡೆಯುವವನ ಕೂಗಾಟವನ್ನು ಕೇಳಿದ್ದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಪಟ್ಟಣದ ಗದ್ದಲವನ್ನು ಕಾಡುಕತ್ತೆಯು ಧಿಕ್ಕರಿಸುತ್ತದೆ; ಅದು ಓಡಿಸುವವನ ಕೂಗನ್ನು ಲಕ್ಷಿಸುವುದಿಲ್ಲ. ಅಧ್ಯಾಯವನ್ನು ನೋಡಿ |
ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.
ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಆ ಸಮಯದಲ್ಲಿ ಯಾವುದೂ ಆ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು.