Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:13 - ಪರಿಶುದ್ದ ಬೈಬಲ್‌

13 ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ ರಾತ್ರಿಯ ಕನಸುಗಳಿಂದ ಯೋಚನೆಯಲ್ಲಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ, ರಾತ್ರಿಯ ಕನಸುಗಳಿಂದ ಯೋಚನೆಗಳಲ್ಲಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜನರಿಗೆ ಗಾಢನಿದ್ರೆ ಹತ್ತುವ ಹೊತ್ತಿನಲಿ ರಾತ್ರಿಕಾಲದ ಸ್ವಪ್ನಯೋಚನೆಗಳ ಸುಳಿಯಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ ರಾತ್ರಿಯ ಕನಸುಗಳಿಂದ ಯೋಚನೆಗಳಲ್ಲಿರುವಾಗ ನನಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ರಾತ್ರಿ ಕನಸಿನ ಆಲೋಚನೆಗಳಲ್ಲಿಯೂ ಗಾಢನಿದ್ರೆಯು ಜನರಿಗೆ ಹತ್ತುವಾಗಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:13
15 ತಿಳಿವುಗಳ ಹೋಲಿಕೆ  

ಸಾಯಂಕಾಲವಾಯಿತು, ಸೂರ್ಯ ಮುಳುಗತೊಡಗಿದಾಗ ಅಬ್ರಾಮನಿಗೆ ಗಾಢ ನಿದ್ರೆ ಬಂದಿತು. ಅವನು ನಿದ್ರೆ ಮಾಡುತ್ತಿರುವಾಗ ಕಾರ್ಗತ್ತಲಾಯಿತು.


ಆದ್ದರಿಂದ ದೇವರಾದ ಯೆಹೋವನು ಮನುಷ್ಯನಿಗೆ ಗಾಢವಾದ ನಿದ್ರೆಯನ್ನು ಬರಮಾಡಿ ಅವನ ದೇಹದ ಪಕ್ಕೆಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಆ ಪಕ್ಕೆಲುಬಿನ ಸ್ಥಳವನ್ನು ಮಾಂಸದಿಂದ ಮುಚ್ಚಿದನು.


ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು ಮಾತನಾಡುವದನ್ನು ನಾನು ಕೇಳಿದೆ. ಅವನ ಧ್ವನಿಯನ್ನು ಕೇಳಿದ ಕೂಡಲೇ ನಾನು ಬೋರಲುಬಿದ್ದು ಗಾಢವಾದ ನಿದ್ರೆಯಲ್ಲಿ ಮುಳುಗಿದೆ.


ಗಬ್ರಿಯೇಲನು ನನ್ನೊಂದಿಗೆ ಮಾತನಾಡುತ್ತಿದ್ದಾಗ ನಾನು ನಿದ್ರಾವಶನಾದೆನು. ಅದು ಬಹಳ ಗಾಢವಾದ ನಿದ್ರೆಯಾಗಿತ್ತು. ನನ್ನ ಮುಖವು ನೆಲದ ಮೇಲೆ ಇತ್ತು. ಆಗ ಗಬ್ರಿಯೇಲನು ನನ್ನನ್ನು ಮುಟ್ಟಿ ಎಬ್ಬಿಸಿ,


ಆಗ ನನಗೊಂದು ಕನಸು ಬಿತ್ತು. ಅದು ನನ್ನಲ್ಲಿ ಭಯವನ್ನುಂಟುಮಾಡಿತು. ನಾನು ನನ್ನ ಹಾಸಿಗೆಯ ಮೇಲೆ ಮಲಗಿದ್ದೆ. ಅನೇಕ ಚಿತ್ರಗಳನ್ನು ಮತ್ತು ದೃಶ್ಯಗಳನ್ನು ಕಂಡೆ. ಅವುಗಳು ನನ್ನಲ್ಲಿ ಹೆಚ್ಚಿನ ಭಯವನ್ನುಂಟುಮಾಡಿದವು.


ಅಂದು ರಾತ್ರಿ ದಾನಿಯೇಲನಿಗೆ ದೇವದರ್ಶನವಾಯಿತು. ಆಗ ದಾನಿಯೇಲನು ಪರಲೋಕದ ದೇವರನ್ನು ಹೀಗೆ ಸ್ತುತಿಸಿದನು:


ದೇವರು, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ, ನಾನು ಅವನಿಗೆ ನನ್ನನ್ನು ದರ್ಶನದಲ್ಲಿ ಗೊತ್ತುಪಡಿಸಿಕೊಳ್ಳುವೆನು ಅಥವಾ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ಆ ರಾತ್ರಿ ದೇವರು ಕನಸಿನಲ್ಲಿ ಅವನೊಂದಿಗೆ ಮಾತನಾಡಿದನು. ದೇವರು ಅವನನ್ನು, “ಯಾಕೋಬನೇ, ಯಾಕೋಬನೇ” ಎಂದು ಕರೆದನು. ಅದಕ್ಕೆ ಇಸ್ರೇಲನು, “ಇಗೋ, ಇದ್ದೇನೆ” ಎಂದು ಉತ್ತರಕೊಟ್ಟನು.


ಆ ರಾತ್ರಿ ದೇವರು ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆಯಾಗಿರು; ನೀನು ಯಾಕೋಬನಿಗೆ ಹೇಳುವ ಪ್ರತಿಯೊಂದು ಮಾತಿನ ಬಗ್ಗೆ ಎಚ್ಚರಿಕೆಯಾಗಿರು” ಎಂದು ಹೇಳಿದನು.


ಯಾಕೋಬನಿಗೆ ಒಂದು ಕನಸಾಯಿತು. ಆ ಕನಸಿನಲ್ಲಿ ಒಂದು ಏಣಿ ನೆಲದ ಮೇಲೆ ನಿಂತಿತ್ತು, ಅದರ ತುದಿ ಆಕಾಶವನ್ನು ಮುಟ್ಟಿತ್ತು. ದೇವದೂತರು ಅದರಲ್ಲಿ ಮೇಲೆರುತ್ತಾ ಕೆಳಗಿಳಿಯುತ್ತಾ ಇರುವುದನ್ನು ಯಾಕೋಬನು ಕಂಡನು.


ಆದರೆ ಅಂದು ರಾತ್ರಿ ದೇವರು ಅಬೀಮೆಲೆಕನೊಡನೆ ಕನಸಿನಲ್ಲಿ ಮಾತಾಡಿ, “ನೀನು ಸಾಯುವೆ. ನೀನು ತೆಗೆದುಕೊಂಡಿರುವ ಆ ಸ್ತ್ರೀಗೆ ಮದುವೆಯಾಗಿದೆ” ಎಂದು ಹೇಳಿದನು.


ನನಗೆ ಎಲುಬುಗಳೆಲ್ಲಾ ನಡುಗುವಷ್ಟು ಭಯಂಕರವಾದ ಭಯ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು