Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:14 - ಪರಿಶುದ್ದ ಬೈಬಲ್‌

14 ನನಗೆ ಎಲುಬುಗಳೆಲ್ಲಾ ನಡುಗುವಷ್ಟು ಭಯಂಕರವಾದ ಭಯ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನಗೆ ಎಲುಬುಗಳೆಲ್ಲಾ ನಡುಗುವಷ್ಟು, ಭಯಂಕರವಾದ ದಿಗಿಲು ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಭೀಕರ ದಿಗಿಲು ಉಂಟಾಯಿತು ನನ್ನೆಲುಬುಗಳೆಲ್ಲವನ್ನು ನಡುಗಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಎಲುಬುಗಳೆಲ್ಲಾ ನಡುಗುವಷ್ಟು ಭಯಂಕರವಾದ ದಿಗಿಲು ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಭಯವೂ ನಡುಕವೂ ನನ್ನನ್ನು ಹಿಡಿದು, ನನ್ನ ಎಲ್ಲಾ ಎಲುಬುಗಳನ್ನು ನಡುಗಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:14
11 ತಿಳಿವುಗಳ ಹೋಲಿಕೆ  

ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.


“ಇದಲ್ಲದೆ ಒಬ್ಬನು ದೇವರ ಶಿಕ್ಷೆಯಿಂದ ಹಾಸಿಗೆಹಿಡಿದು ಸಂಕಟಪಡುತ್ತಿರುವಾಗ ದೇವರ ಸ್ವರಕ್ಕೆ ಕಿವಿಗೊಟ್ಟರೂ ಕೊಡಬಹುದು. ದೇವರು ಅವನನ್ನು ಎಲುಬುಗಳೆಲ್ಲಾ ಬಾಧಿಸುವಂಥ ನೋವಿನಿಂದ ಎಚ್ಚರಿಸುತ್ತಾನೆ.


ದೇವದೂತನ ಮಾತನ್ನು ಕೇಳಿ ಬಹು ಗಲಿಬಿಲಿಗೊಂಡ ಮರಿಯಳು, “ಇದರ ಅರ್ಥವೇನಿರಬಹುದು?” ಎಂದು ಆಶ್ಚರ್ಯಪಟ್ಟಳು.


ಅವನು ದೇವದೂತನನ್ನು ನೋಡಿ ಗಲಿಬಿಲಿಗೊಂಡು ಬಹು ಭಯಪಟ್ಟನು.


ಆ ವಿಷಯವನ್ನು ಕೇಳಿದಾಗ ನನ್ನ ಶರೀರವೆಲ್ಲಾ ನಡುಗಿತು. ಆಶ್ಟರ್ಯದಿಂದ ನಾನು ಸಿಳ್ಳುಹಾಕಿದೆ. ನನ್ನ ಎಲುಬುಗಳ ಬಲಹೀನತೆಯಿಂದ ನಾನು ನಡುಗುವವನಾಗಿ ನಿಂತೆನು. ಅವರು ಜನರ ಮೇಲೆ ಬೀಳಲು ಬರುವಾಗ ನಾನು ಅವರ ನಾಶನದ ದಿವಸವನ್ನು ಎದುರುನೋಡುತ್ತಿದ್ದೇನೆ.


ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು ನನಗೆ, “ದಾನಿಯೇಲನೇ, ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನಾನು ನಿನಗೆ ಈ ಮುಂದೆ ಹೇಳುವ ಮಾತುಗಳ ಬಗ್ಗೆ ಚೆನ್ನಾಗಿ ವಿಚಾರಮಾಡು. ಎದ್ದುನಿಲ್ಲು, ನನ್ನನ್ನು ನಿನ್ನ ಬಳಿಗೆ ಕಳುಹಿಸಲಾಗಿದೆ” ಎಂದು ಹೇಳಿದನು. ಆಗ ನಾನು ಎದ್ದುನಿಂತೆ. ನಾನು ಭಯದಿಂದ ಇನ್ನೂ ನಡುಗುತ್ತಿದ್ದೆ.


ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.


ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. ನಾನು ನಿನ್ನ ತೀರ್ಪುಗಳಿಗೆ ಅಂಜಿಕೊಂಡಿದ್ದೇನೆ.


ನೀನು ಕನಸುಗಳಿಂದ ನನ್ನನ್ನು ಹೆದರಿಸುವೆ; ದರ್ಶನಗಳಿಂದ ನನ್ನನ್ನು ಭಯಗೊಳಿಸುವೆ.


ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ ರಾತ್ರಿಯ ಕನಸುಗಳಿಂದ ಯೋಚನೆಯಲ್ಲಿರುವಾಗ


ಯಾವುದೋ ಒಂದು ಉಸಿರು ನನ್ನ ಮುಖಕ್ಕೆ ಸುಳಿಯಲು ಮೈಯೆಲ್ಲಾ ರೋಮಾಂಚನಗೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು