Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:7 - ಪರಿಶುದ್ದ ಬೈಬಲ್‌

7 ಯೋಬನೇ, ಆಲೋಚಿಸು: ಎಂದಾದರೂ ನಿರಪರಾಧಿಯು ನಾಶವಾಗಿರುವನೇ? ಎಂದಾದರೂ ಯಥಾರ್ಥವಂತರು ನಾಶವಾಗಿರುವರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನೇ ಆಲೋಚನೆಮಾಡು, ನಿರಪರಾಧಿಯು ಎಂದಾದರೂ ನಾಶವಾದದ್ದುಂಟೇ? ಯಥಾರ್ಥರು ಅಳಿದು ಹೋದದ್ದೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಲೋಚಿಸಿ ನೋಡು, ನಿರಪರಾಧಿ ಎಂದಾದರೂ ನಾಶವಾದುದುಂಟೆ ಸತ್ಯ-ಸಂಧರು ಎಲ್ಲಿಯಾದರೂ ನಿರ್ಮೂಲವಾದುದುಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನೇ ಆಲೋಚನೆಮಾಡು, ನಿರಪರಾಧಿಯು ಎಂದಾದರೂ ನಾಶವಾದದ್ದುಂಟೇ, ಯಥಾರ್ಥರು ಅಳಿದುಹೋದದ್ದೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿವಂತರು ಅಳಿದು ಹೋದದ್ದು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:7
9 ತಿಳಿವುಗಳ ಹೋಲಿಕೆ  

ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ. ನೀತಿವಂತರನ್ನು ದೇವರು ತೊರೆದುಬಿಟ್ಟದ್ದನ್ನಾಗಲಿ ಅವನ ಮಕ್ಕಳು ಆಹಾರಕ್ಕಾಗಿ ಬೇಡುವುದನ್ನಾಗಲಿ ನಾನೆಂದೂ ಕಾಣಲಿಲ್ಲ.


ಹೌದು, ಪ್ರಭುವಾದ ದೇವರು ತನ್ನ ಭಕ್ತರನ್ನು ತೊಂದರೆಗಳಿಂದ ಯಾವಾಗಲೂ ರಕ್ಷಿಸುತ್ತಾನೆ. ಆತನು ದುಷ್ಟಜನರನ್ನು ನ್ಯಾಯತೀರ್ಪಿನ ದಿನ ಬರುವತನಕ ದಂಡಿಸುತ್ತಾನೆ.


ನೀತಿವಂತರನ್ನು ದೇವರು ಪರಿಪಾಲಿಸುವನು; ಆತನು ಒಳ್ಳೆಯವರನ್ನು ಅಧಿಪತಿಗಳನ್ನಾಗಿ ನೇಮಿಸುವನು; ಅವರಿಗೆ ಸದಾಕಾಲ ಗೌರವ ದೊರೆಯುವಂತೆ ಮಾಡುವನು.


ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ ಇಷ್ಟವಿಲ್ಲ” ಎಂದು ಹೇಳಿದರು.


ಆದರೆ ದೇವರು ಒಬ್ಬ ನಿರಪರಾಧಿಯನ್ನೂ ಕೈಬಿಡುವುದಿಲ್ಲ. ಆತನು ದುಷ್ಟರಿಗೆ ಸಹಾಯ ಮಾಡುವುದಿಲ್ಲ.


ನನ್ನ ಅಲ್ಪಕಾಲದ ಜೀವನದಲ್ಲಿ ನಾನು ಪ್ರತಿಯೊಂದನ್ನೂ ನೋಡಿದ್ದೇನೆ. ನೀತಿವಂತರು ಯೌವನ ಪ್ರಾಯದಲ್ಲಿ ಸಾಯುವುದನ್ನೂ ನೋಡಿದ್ದೇನೆ. ದುಷ್ಟರು ಬಹುಕಾಲ ಬದುಕುವುದನ್ನೂ ನೋಡಿದ್ದೇನೆ.


ದೇವರು ದುಷ್ಟರನ್ನು ಜೀವಿಸಲು ಅವಕಾಶ ಕೊಡುವುದಿಲ್ಲ. ಆತನು ಬಡಜನರಿಗೆ ಯಾವಾಗಲೂ ನ್ಯಾಯದೊರಕಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು