Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:21 - ಪರಿಶುದ್ದ ಬೈಬಲ್‌

21 ಅದು ತಾವರೆ ಗಿಡಗಳ ಕೆಳಗೆ ಮಲಗಿಕೊಳ್ಳುತ್ತದೆ; ಕೊಳಚೆಯಲ್ಲಿರುವ ಅವುಗಳ ನಡುವೆ ಅಡಗಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತಾವರೆಯ ಗಿಡಗಳ ಕೆಳಗೂ, ಆಪಿನ ಮರೆಯಲ್ಲಿಯೂ, ಜವುಗು ಭೂಮಿಯಲ್ಲಿಯೂ ಮಲಗಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದು ಮಲಗುತ್ತದೆ ತಾವರೆ ಗಿಡಗಳಡಿಯಲಿ ವಿಶ್ರಮಿಸುತ್ತದೆ ಆಪಿನ ಮರೆಯಲಿ, ಕೆಸರು ಭೂಮಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಎಲಚಿ ಗಿಡಗಳ ಕೆಳಗೂ ಆಪಿನ ಮರೆಯಲ್ಲಿಯೂ ಜವುಗು ಭೂವಿುಯಲ್ಲಿಯೂ ಮಲಗಿಕೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀರಾನೆಯು ತಾವರೆ ಗಿಡಗಳಡಿಯಲ್ಲಿಯೂ ಆಪಿನ ಮರೆಯಲ್ಲಿಯೂ, ಜವುಗು ಭೂಮಿಯಲ್ಲಿಯೂ ವಿಶ್ರಮಿಸಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:21
6 ತಿಳಿವುಗಳ ಹೋಲಿಕೆ  

ಆಗ ಜನರು ಬಿಸುಲ್ಗುದುರೆಯನ್ನು ನೋಡಿ ನೀರು ಎಂದು ಭಾವಿಸುವರು. ಆದರೆ ಆಗ ನೀರಿನ ಕೊಳಗಳೇ ಇರುವವು. ಬೆಂಗಾಡಿನಲ್ಲಿ ಬಾವಿಗಳಿರುವವು. ನೆಲದೊಳಗಿಂದ ನೀರು ಉಕ್ಕುವುದು. ಒಂದು ಕಾಲದಲ್ಲಿ ಕಾಡುಪ್ರಾಣಿಗಳು ವಾಸವಾಗಿದ್ದ ಸ್ಥಳದಲ್ಲಿ ಎತ್ತರವಾದ ನೀರವಂಜಿಗಳು ಬೆಳೆಯುವವು.


ಆಗ ಕೊಬ್ಬಿದ ಮತ್ತು ಲಕ್ಷಣವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಹುಲ್ಲನ್ನು ಮೇಯುತ್ತಿದ್ದವು.


ಕಾಡುಪ್ರಾಣಿಗಳು ಆಟವಾಡುವ ಬೆಟ್ಟಗಳ ಮೇಲೆ ಬೆಳೆಯುವ ಹುಲ್ಲನ್ನು ಅದು ತಿನ್ನುತ್ತದೆ.


ತಾವರೆಗಿಡಗಳು ತಮ್ಮ ನೆರಳಿನಿಂದ ಅದನ್ನು ಮರೆಮಾಡುತ್ತವೆ; ನದಿಯ ಸಮೀಪದಲ್ಲಿ ಬೆಳೆಯುವ ನೀರವಂಜಿ ಮರಗಳ ಕೆಳಗೆ ಅದು ವಾಸಿಸುತ್ತದೆ.


ಕೋಲಿನಿಂದ ಬಡಿದು ನಿನಗೆ ಬೇಕಾದದ್ದನ್ನೆಲ್ಲಾ ಆ ಪ್ರಾಣಿಗಳಿಂದ ಮಾಡಿಸು. ಆ ಜನಾಂಗಗಳಲ್ಲಿರುವ “ಹೋರಿಗಳು” ಮತ್ತು “ಹಸುಗಳು” ನಿನಗೆ ವಿಧೇಯವಾಗಿರುವಂತೆ ಮಾಡು. ನೀನು ಆ ಜನಾಂಗಗಳನ್ನು ಯುದ್ಧದಲ್ಲಿ ಸೋಲಿಸಿರುವುದರಿಂದ ಅವರು ನಿನಗೆ ಬೆಳ್ಳಿಯನ್ನು ತಂದುಕೊಡುವಂತೆ ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು