Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:23 - ಪರಿಶುದ್ದ ಬೈಬಲ್‌

23 ನದಿಯು ತುಂಬಿಹರಿದರೂ ಅದು ಓಡಿಹೋಗುವುದಿಲ್ಲ. ಜೋರ್ಡನ್ ನದಿಯು ಅದರ ಮುಖಕ್ಕೆ ರಭಸದಿಂದ ಬಡಿದರೂ ಅದಕ್ಕೆ ಭಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಓಹೋ, ಹೊಳೆಯು ಉಕ್ಕಿ ಬಂದರೂ ಅದು ಹೆದರುವುದಿಲ್ಲ. ಪ್ರವಾಹವು ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೊಳೆ ಉಕ್ಕಿಬಂದರೂ ಅದು ಹೆದರುವುದಿಲ್ಲ ನೋಡು ಜೋರ್ಡನ್ ನದಿ ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಓಹೋ, ಹೊಳೆಯು ಹೊಡೆದರೂ ಅದು ಹೆದರುವದಿಲ್ಲ. ಪ್ರವಾಹವು ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೊಳೆ ಉಕ್ಕಿ ಬಂದರೂ ನೀರಾನೆಯು ಹೆದರುವುದಿಲ್ಲ. ಯೊರ್ದನ್ ನದಿ ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:23
7 ತಿಳಿವುಗಳ ಹೋಲಿಕೆ  

ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)


ನಾನು ಬಾವಿಗಳನ್ನು ತೋಡಿ ಹೊಸಹೊಸ ಸ್ಥಳದ ನೀರು ಕುಡಿದಿರುವೆನು. ಈಜಿಪ್ಟಿನ ನದಿಗಳನ್ನು ಬತ್ತಿಸಿ ದೇಶದಲ್ಲೆಲ್ಲಾ ಸಂಚರಿಸಿದೆನು” ಎಂದು ನೀನು ಹೇಳಿದೆ.’


ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವುದಿಲ್ಲ.


ನಾನು ಓಡಿಹೋಗಿ ಹಾನಿಕರವಾದ ಈ ಬಿರುಗಾಳಿಯಿಂದ ತಪ್ಪಿಸಿಕೊಳ್ಳುತ್ತಿದ್ದೆನು.


(ಆಗ ಸುಗ್ಗಿಕಾಲವಾದ್ದರಿಂದ ಜೋರ್ಡನ್ ನದಿಯು ದಡಮೀರಿ ಹರಿಯುತ್ತಿತ್ತು.) ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ನದಿಯ ತೀರಕ್ಕೆ ಬಂದರು. ಅವರು ನೀರಿನಲ್ಲಿ ಹೆಜ್ಜೆ ಇಟ್ಟರು.


ತಾವರೆಗಿಡಗಳು ತಮ್ಮ ನೆರಳಿನಿಂದ ಅದನ್ನು ಮರೆಮಾಡುತ್ತವೆ; ನದಿಯ ಸಮೀಪದಲ್ಲಿ ಬೆಳೆಯುವ ನೀರವಂಜಿ ಮರಗಳ ಕೆಳಗೆ ಅದು ವಾಸಿಸುತ್ತದೆ.


ಅದರ ಕಣ್ಣುಗಳನ್ನು ಕುರುಡುಮಾಡಿ ಅದನ್ನು ಬಂಧಿಸುವುದಕ್ಕಾಗಲಿ ಕೊಂಡಿಗಳಿಂದ ಅದರ ಮೂಗಿಗೆ ಚುಚ್ಚುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು