ಯೋಬ 40:4 - ಪರಿಶುದ್ದ ಬೈಬಲ್4 “ನಾನು ಅಲ್ಪನೇ ಸರಿ! ನಾನು ನಿನಗೆ ಉತ್ತರ ಕೊಡಲಾರೆನು! ನನ್ನ ಕೈಯನ್ನು ಬಾಯಿಯ ಮೇಲೆ ಇಟ್ಟುಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಅಯ್ಯೋ, ನಾನು ಅಲ್ಪನೇ ಸರಿ ತಮಗೇನು ಪ್ರತ್ಯುತ್ತರ ಹೇಳಲಿ? ಬಾಯ ಮೇಲೆ ಕೈಯಿಡುವೆ ಮೌನತಾಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯ ಮೇಲೆ ಕೈಯಿಟ್ಟುಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಅಯ್ಯೋ, ನಾನು ಅಯೋಗ್ಯ, ತಮಗೆ ಏನು ಉತ್ತರಕೊಡಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿ |
“ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕೃತ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.