Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:5 - ಪರಿಶುದ್ದ ಬೈಬಲ್‌

5 ನಾನು ಒಂದು ಸಲ ಮಾತಾಡಿದ್ದೇನೆ; ಆದರೆ ಪ್ರತಿವಾದ ಮಾಡಲಾರೆನು. ನಾನು ಎರಡು ಸಲ ಮಾತಾಡಿದ್ದೇನೆ; ಆದರೆ ನಾನು ಹೆಚ್ಚಿಗೆ ಏನೂ ಹೇಳಲಾರೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಒಂದು ಸಾರಿ ಮಾತನಾಡಿದ್ದೇನೆ, ಪ್ರತಿವಾದ ಮಾಡಲಾರೆನು; ಎರಡು ಸಲ ಹೌದು, ಇನ್ನೇನೂ ನುಡಿಯಲಾರೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಒಮ್ಮೆ ಮಾತಾಡಿದೆ, ಮತ್ತೆ ಮಾತಾಡೆನು ಹೌದು, ಇನ್ನೊಮ್ಮೆ ಮಾತಾಡಿದೆ, ಹೆಚ್ಚು ಮಾತಾಡೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಒಂದು ಸಾರಿ ಮಾತಾಡಿದ್ದೇನೆ, ಪ್ರತಿವಾದ ಮಾಡಲಾರೆನು; ಎರಡು ಸಲ ಹೌದು, ಇನ್ನೇನೂ ನುಡಿಯಲೊಲ್ಲೆನು ಎಂದು ಯೆಹೋವನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಒಂದು ಸಾರಿ ಮಾತಾಡಿದೆ, ಈಗ ನನಗೆ ಕೊಡುವುದಕ್ಕೆ ಉತ್ತರ ಇಲ್ಲ; ಮತ್ತೆ ಮಾತಾಡುತ್ತಿದ್ದೇನೆ, ಆದರೆ ಮಾತಾಡಲು ನನಗೆ ಇನ್ನೇನೂ ಇಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:5
8 ತಿಳಿವುಗಳ ಹೋಲಿಕೆ  

“ಶಕ್ತಿಯೂ ದೇವರಿಂದಲೇ” ಎಂದು ದೇವರು ನುಡಿದಿದ್ದಾನೆ.


ಒಂದುವೇಳೆ ದೇವರು ತನ್ನ ಕಾರ್ಯದ ಕುರಿತಾಗಿ ವಿವರಿಸಬಹುದು. ಒಂದುವೇಳೆ ನಮಗೆ ಅರ್ಥವಾಗದ ರೀತಿಯಲ್ಲಿ ಆತನು ಮಾತಾಡಬಹುದು.


ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.


ಯೋಬನಾದ ನಾನು ನಿರಪರಾಧಿಯಾಗಿದ್ದರೂ ಆತನಿಗೆ ಉತ್ತರವನ್ನು ಕೊಡಲಾರೆ. ನನಗೆ ಕರುಣೆ ತೋರುವಂತೆ ನ್ಯಾಯಾಧಿಪತಿಯಾದ ದೇವರನ್ನು ಬೇಡಿಕೊಳ್ಳುವೆನು.


ಒಬ್ಬನು ದೇವರೊಂದಿಗೆ ವಾದಿಸಬಯಸಿದರೆ, ದೇವರ ಸಾವಿರ ಪ್ರಶ್ನೆಗಳಲ್ಲಿ ಮನುಷ್ಯನು ಒಂದಕ್ಕೂ ಉತ್ತರ ಕೊಡಲಾರನು.


ಇಸ್ರೇಲಿನ ರಾಜನು ತನ್ನ ಜನರಿಗೆ ಸಂದೇಶವೊಂದನ್ನು ಕಳುಹಿಸಿ, ದೇವಮನುಷ್ಯನು ಎಚ್ಚರವಾಗಿರಲು ತಿಳಿಸಿದ ಸ್ಥಳದಲ್ಲಿ ತಿರುಗಾಡದಿರುವಂತೆ ಸೂಚಿಸಿ ಕೆಲವು ಜನರನ್ನು ರಕ್ಷಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು