Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:15 - ಪರಿಶುದ್ದ ಬೈಬಲ್‌

15 ಅದರ ಹಿಂಬದಿಯಲ್ಲಿ ಗುರಾಣಿಗಳ ಸಾಲುಗಳು ಒಂದಕ್ಕೊಂದು ಬಿಗಿಯಲ್ಪಟ್ಟು ಮುದ್ರಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಗುರಾಣಿಗಳ ಸಾಲುಗಳು ಅದರ ಹೆಚ್ಚಳಕ್ಕೆ ಆಸ್ಪದವಾಗಿದೆ. ಅವು ಬಿಗಿದು ಮುದ್ರಿಸಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬೆನ್ನಿನ ಅಡ್ಡಣಗಳು ಅದಕ್ಕೆ ಕೊಟ್ಟಿವೆ ಕೆಚ್ಚನು ಒತ್ತಿದ ಮುದ್ರೆಯಂತೆ ಬಿಗಿದಿವೆ ಅದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಗುರಾಣಿಗಳ ಸಾಲುಗಳು ಅದರ ಹೆಚ್ಚಳಕ್ಕೆ ಆಸ್ಪದವಾಗಿವೆ. ಅವು ಬಿಗಿದು ಮುದ್ರಿಸಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಗುರಾಣಿಗಳ ಸಾಲುಗಳು ಅದರ ಬೆನ್ನಿಗೆ ಹೆಮ್ಮೆಯಾಗಿವೆ; ಅವು ಒಟ್ಟಿಗೆ ಬಿಗಿಯಾಗಿ ಮುದ್ರಿಸಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:15
6 ತಿಳಿವುಗಳ ಹೋಲಿಕೆ  

ಆದರೆ ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ಯೂದ ಕುಲದ ಸಿಂಹವಾಗಿರುವಾತನು (ಕ್ರಿಸ್ತ) ಜಯಗಳಿಸಿದನು. ಆತನು ದಾವೀದನ ಸಂತತಿಯವನು. ಆತನು ಸುರುಳಿಯನ್ನು ಮತ್ತು ಅದರ ಏಳು ಮುದ್ರೆಗಳನ್ನು ತೆರೆಯಲು ಸಮರ್ಥನಾಗಿದ್ದಾನೆ” ಎಂದು ಹೇಳಿದನು.


ಯೆಹೋವನು ಹೇಳುತ್ತಾನೆ, “ಜ್ಞಾನಿಗಳು ತಮ್ಮ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು. ಬಲಶಾಲಿಗಳು ತಮ್ಮ ಬಲದ ಬಗ್ಗೆ ಬಡಾಯಿಕೊಚ್ಚಿಕೊಳ್ಳಬಾರದು. ಶ್ರೀಮಂತರು ತಮ್ಮ ಸಂಪತ್ತಿನ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು.


ಅವರು ಹೋಗಿ, ಸಮಾಧಿಗೆ ಮುದ್ರೆ ಹಾಕಿ, ಸೈನಿಕರನ್ನು ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.


ಬಲವಂತದಿಂದ ಅದರ ದವಡೆಗಳನ್ನು ತೆರೆಸಲು ಯಾರಿಗೂ ಸಾಧ್ಯವಿಲ್ಲ. ಅದರ ದವಡೆಹಲ್ಲುಗಳು ಜನರನ್ನು ಭಯಗೊಳಿಸುತ್ತವೆ.


ಗಾಳಿಯೂ ಹಾದುಹೋಗದಂತೆ ಆ ಗುರಾಣಿಗಳು ಜೋಡಿಸಲ್ಪಟ್ಟಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು