Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:32 - ಪರಿಶುದ್ದ ಬೈಬಲ್‌

32 ಅದು ಈಜುವಾಗ ಅದರ ಹಿಂದೆ ಒಂದು ದಾರಿಯೇ ನಿರ್ಮಿತವಾಗುವುದು. ಅದು ನೀರನ್ನು ಕಲಕಿ ತನ್ನ ಹಿಂದೆ ಬಿಳಿ ನೊರೆಯನ್ನು ಉಂಟುಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಸಾಗರಕ್ಕೆ ನರೆ ಬಂತೋ ಎಂಬಂತೆ ತಾನು ಬಂದ ದಾರಿಯನ್ನು ಶುಭ್ರಗೊಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸಾಗರಕ್ಕೆ ನೆರೆಬಂತೋ ಎಂಬ ಹಾಗೆ ಶುಭ್ರಗೊಳಿಸುತ್ತದೆ ತಾನು ಬಂದ ಹಾದಿಯನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಸಾಗರಕ್ಕೆ ನರೆ ಬಂತೋ ಎಂದು ಊಹಿಸುವ ಹಾಗೆ ತಾನು ಬಂದ ದಾರಿಯನ್ನು ಶುಭ್ರಪಡಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಸಾಗರಕ್ಕೆ ನೆರೆ ಬಂತೋ ಎಂಬಂತೆ, ಅದು ತಾನು ಬಂದ ಹಾದಿಯನ್ನೇ ಬೆಳ್ಳಗಾಗುವಂತೆ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:32
12 ತಿಳಿವುಗಳ ಹೋಲಿಕೆ  

ಯುವಕನ ಶಕ್ತಿ ಪ್ರಶಂಸೆಗೆ ಯೋಗ್ಯ. ವೃದ್ಧನ ನರೆಕೂದಲು ಗೌರವಕ್ಕೆ ಪಾತ್ರ.


ಒಳ್ಳೆಯವರಿಗೆ ಅವರ ನರೆಕೂದಲೇ ವೈಭವದ ಕಿರೀಟ.


ನೀರು ಕಲ್ಲಿನಂತೆ ಗಟ್ಟಿಯಾದಾಗ, ಸಾಗರಗಳ ಮೇಲ್ಭಾಗವು ಹೆಪ್ಪುಗಟ್ಟಿದಾಗ ಆಕಾಶದ ಹಿಮಕ್ಕೆ ಜನನ ಕೊಡುವವರು ಯಾರು?


“ಯೋಬನೇ, ಸಮುದ್ರವು ಆರಂಭವಾಗುವ ಅತ್ಯಂತ ಆಳವಾದ ಭಾಗಗಳಿಗೆ ನೀನು ಎಂದಾದರೂ ಹೋಗಿರುವಿಯಾ? ಸಾಗರದ ತಳದ ಮೇಲೆ ನೀನು ಎಂದಾದರೂ ನಡೆದಿರುವಿಯಾ?


‘ಜ್ಞಾನವು ನನ್ನೊಂದಿಗಿಲ್ಲ’ ಎಂದು ಆಳವಾದ ಸಾಗರವು ಹೇಳುತ್ತದೆ. ‘ಜ್ಞಾನವು ನನ್ನೊಂದಿಗಿಲ್ಲ’ ಎಂದು ಸಮುದ್ರವು ಹೇಳುತ್ತದೆ.


ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಲಳಲ್ಲಿ ಹುಟ್ಟಿದ ಗಂಡುಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣವಾಗುವಿರಿ” ಎಂದು ಹೇಳಿದನು.


ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ವೃದ್ಧನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.


“ನೀನು ತುಂಬಾ ಮುದುಕನಾಗುವ ತನಕ ಜೀವಿಸಿ ಸಮಾಧಾನದಿಂದ ಸಾಯುವೆ; ನಿನ್ನನ್ನು ನಿನ್ನ ಕುಟುಂಬದವರೊಡನೆ ಸಮಾಧಿ ಮಾಡುವರು.


ಈ ಬೆಳಕುಗಳು ಆಕಾಶದಲ್ಲಿದ್ದು ಭೂಮಿಯ ಮೇಲೆ ಬೆಳಕನ್ನು ಪ್ರಕಾಶಿಸಲಿ” ಅಂದನು. ಹಾಗೆಯೇ ಆಯಿತು.


ಭೂಮಿಯು ಅಸ್ತವ್ಯಸ್ತವಾಗಿಯೂ ಬರಿದಾಗಿಯೂ ಇತ್ತು. ಭೂಮಿಯ ಮೇಲೆ ಏನೂ ಇರಲಿಲ್ಲ. ಸಾಗರದ ಮೇಲೆ ಕತ್ತಲು ಕವಿದಿತ್ತು. ದೇವರಾತ್ಮನು ಜಲಸಮೂಹಗಳ ಮೇಲೆ ಚಲಿಸುತ್ತಿದ್ದನು.


ಮಡಕೆಯಲ್ಲಿ ಕುದಿಯುತ್ತಿರುವ ನೀರಿನಂತೆಯೂ ಮಡಕೆಯಲ್ಲಿ ಕುದಿಯುತ್ತಿರುವ ಎಣ್ಣೆಯಂತೆಯೂ ಅದು ನೀರನ್ನು ಕುದಿಸುವುದು.


ಭೂಮಿಯ ಮೇಲಿರುವ ಯಾವ ಪ್ರಾಣಿಯೂ ಅದರಂತಿಲ್ಲ. ಈ ಪ್ರಾಣಿಯೊಂದೇ ಯಾವುದಕ್ಕೂ ಭಯಪಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು