Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:8 - ಪರಿಶುದ್ದ ಬೈಬಲ್‌

8 “ಯೋಬನೇ, ನೀನು ಅದರ ಮೇಲೆ ನಿನ್ನ ಕೈಯಿಟ್ಟು ನೋಡು. ಆ ಪ್ರಯಾಸದ ಹೋರಾಟವನ್ನು ನೆನಸಿಕೊಂಡರೆ ಅದನ್ನು ನೀನು ಮುಟ್ಟುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದರ ಮೇಲೆ ಕೈಹಾಕಿ ನೋಡು! ಆ ಜಗಳವನ್ನು ನೆನಸಿಕೊಂಡರೆ ನೀನು ಮತ್ತೆ ಅದನ್ನು ಮುಟ್ಟುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದರ ಮೇಲೆ ಒಮ್ಮೆ ಕೈಹಾಕಿ ನೋಡು! ಆಗ ನಡೆಯಬಹುದಾದ ಕದನವನು ನೆನೆಸಿಕೊಂಡರೆ ಸಾಕು! ನೀನು ಮತ್ತೆ ಮುಟ್ಟಹೋಗಲಾರೆ ಅದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದರ ಮೇಲೆ ಕೈಹಾಕಿ ನೋಡು! ಆ ಜಗಳವನ್ನು ನೆನಸಿಕೊಂಡರೆ ನೀನು ಮತ್ತೆ ಅದನ್ನು ಮುಟ್ಟುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದರ ಮೇಲೆ ನಿನ್ನ ಕೈಹಾಕಿ ನೋಡು! ಆ ಹೋರಾಟವನ್ನು ನೆನೆಸಿಕೊಂಡರೆ, ನೀನು ಮತ್ತೆ ಅದನ್ನು ಮುಟ್ಟುವುದೇ ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:8
5 ತಿಳಿವುಗಳ ಹೋಲಿಕೆ  

ಆದರೆ ಇಜ್ರೇಲಿನ ಅಧಿಕಾರಿಗಳು ಮತ್ತು ನಾಯಕರು ಬಹಳ ಭಯಗೊಂಡಿದ್ದರು. ಅವರು, “ಇಬ್ಬರು ರಾಜರು (ಯೋರಾವ್ ಮತ್ತು ಅಹಜ್ಯ) ಯೇಹುವನ್ನು ತಡೆಯಲಾಗಲಿಲ್ಲ. ನಾವು ಅವನನ್ನು ತಡೆಯಲಾಗುವುದಿಲ್ಲ” ಎಂದು ಹೇಳಿದರು.


ರಾಜನಾದ ಅಹಾಬನು, “ಯುದ್ಧಕ್ಕೆ ಹೋಗುವ ಸೈನಿಕನು ತನ್ನ ಆಯುಧಗಳನ್ನು ಧರಿಸಿಕೊಳ್ಳುವಾಗ ಹೆಚ್ಚಳಪಡದೆ, ಯುದ್ಧವಾದ ಮೇಲೆ ತನ್ನ ಆಯುಧಗಳನ್ನು ಬಿಚ್ಚಿಡುವಾಗ ಹೆಚ್ಚಳಪಡುತ್ತಾನೆಂಬುದನ್ನು ಬೆನ್ಹದದನಿಗೆ ಹೇಳಿ” ಎಂದು ಉತ್ತರಿಸಿದನು.


ನೀನು ಭರ್ಜಿಗಳನ್ನು ಎಸೆದು ಅದರ ಚರ್ಮಕ್ಕೂ ತಲೆಗೂ ನಾಟಿಸಬಲ್ಲೆಯಾ?


ನೀನು ಅದನ್ನು ಸೋಲಿಸಬಹುದೆಂದು ಯೋಚಿಸಿಕೊಂಡಿದ್ದರೆ, ಇನ್ನಾದರೂ ಅದನ್ನು ಮರೆತುಬಿಡು! ಅದನ್ನು ನೋಡಿದರೇ ನಿನಗೆ ಭಯವಾಗುತ್ತದೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು