Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 42:11 - ಪರಿಶುದ್ದ ಬೈಬಲ್‌

11 ಯೋಬನ ಸಹೋದರಸಹೋದರಿಯರೂ ಅವನ ಪರಿಚಯಸ್ಥರೂ ಅವನ ಮನೆಗೆ ಬಂದರು; ಅವನೊಂದಿಗೆ ಊಟ ಮಾಡಿದರು; ಯೆಹೋವನು ಅವನಿಗೆ ಬಹಳ ಕಷ್ಟವನ್ನು ಬರಮಾಡಿದ್ದರಿಂದ ಅವರು ಮರುಕದಿಂದ ಅವನನ್ನು ಸಂತೈಸಿದರು. ಪ್ರತಿಯೊಬ್ಬರು ಯೋಬನಿಗೆ ಒಂದು ಬೆಳ್ಳಿಯ ನಾಣ್ಯವನ್ನೂ ಒಂದು ಚಿನ್ನದ ಉಂಗುರವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ, ಎಲ್ಲಾ ಅಕ್ಕತಂಗಿಯರೂ, ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನ ಎಲ್ಲಾ ಅಣ್ಣತಮ್ಮಂದಿರು, ಅಕ್ಕತಂಗಿಯರು, ಹಿಂದಿನ ಪರಿಚಿತರು ಅವನನ್ನು ಕಾಣಬಂದು ಔತಣದಲ್ಲಿ ಭಾಗವಹಿಸಿದರು. ಅವನಿಗೆ ಸರ್ವೇಶ್ವರನಿಂದ ಒದಗಿದ್ದ ಆಪತ್ತಿಗಾಗಿ ಅನುತಾಪ ವ್ಯಕ್ತಪಡಿಸಿ, ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ ಎಲ್ಲಾ ಅಕ್ಕತಂಗಿಯರೂ ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯೋಬನ ಎಲ್ಲಾ ಸಹೋದರರು, ಸಹೋದರಿಯರು, ಹಿಂದಿನ ಪರಿಚಿತರೆಲ್ಲರೂ ಅವನ ಬಳಿಗೆ ಬಂದರು. ಅವರು ಯೋಬನ ಸಂಗಡ ಅವನ ಮನೆಯಲ್ಲಿ ಊಟಮಾಡಿ, ಯೆಹೋವ ದೇವರು ಅವನ ಮೇಲೆ ಬರಮಾಡಿದ ಎಲ್ಲಾ ಆಪತ್ತಿಗಾಗಿ ಸಂತಾಪ ವ್ಯಕ್ತಪಡಿಸಿ ಅವನನ್ನು ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಯೋಬನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 42:11
18 ತಿಳಿವುಗಳ ಹೋಲಿಕೆ  

ಯೋಬನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹದ ಬಿಲ್ದದನು ಮತ್ತು ನಾಮಾಥದ ಚೋಫರನು. ಯೋಬನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಈ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಬನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ಒಂಟೆಗಳು ನೀರನ್ನು ಕುಡಿದಾದ ಮೇಲೆ ಅವನು ರೆಬೆಕ್ಕಳಿಗೆ ಅರ್ಧತೊಲೆಯ ಒಂದು ಚಿನ್ನದ ಉಂಗುರವನ್ನು ಕೊಟ್ಟನು. ಇದಲ್ಲದೆ ಅವನು ಆಕೆಗೆ ಹತ್ತು ತೊಲೆಯ ಎರಡು ಚಿನ್ನದ ಬಳೆಗಳನ್ನು ಕೊಟ್ಟನು.


ನೀವು ದುರ್ಬಲರಾಗಿದ್ದೀರಿ. ಆದ್ದರಿಂದ ನಿಮ್ಮನ್ನು ಮತ್ತೆ ಬಲಪಡಿಸಿಕೊಳ್ಳಿರಿ.


ಸೆರೆಮನೆಯಲ್ಲಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸೆರೆಮನೆಯಲ್ಲಿದ್ದೀರೋ ಎಂಬಂತೆ ನೆನಪುಮಾಡಿಕೊಳ್ಳಿ ಮತ್ತು ಸಂಕಟಕ್ಕೊಳಗಾಗಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸಂಕಟಪಡುತ್ತಿರುವಿರೋ ಎಂಬಂತೆ ನೆನಪು ಮಾಡಿಕೊಳ್ಳಿ.


ಒಂದು ಅಂಗಕ್ಕೆ ನೋವಾದರೆ, ಉಳಿದೆಲ್ಲ ಅಂಗಗಳು ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ಸನ್ಮಾನ ದೊರೆತರೆ, ಉಳಿದೆಲ್ಲ ಅಂಗಗಳು ಅದರ ಸನ್ಮಾನದಲ್ಲಿ ಪಾಲುಗಾರರಾಗುತ್ತವೆ.


ಸಂತೋಷಪಡುವವರ ಸಂಗಡ ಸಂತೋಷಪಡಿರಿ. ದುಃಖಪಡುವವರೊಂದಿಗೆ ದುಃಖಪಡಿರಿ.


ಆದರೆ ನಾನು ನಿಮ್ಮನ್ನು ನನ್ನ ಮಾತುಗಳಿಂದ ಪ್ರೋತ್ಸಾಹಿಸಿ ನಿಮ್ಮಲ್ಲಿ ನಿರೀಕ್ಷೆಯನ್ನು ಹುಟ್ಟಿಸಬಹುದಾಗಿತ್ತು.


ಎಡವಿಬಿದ್ದವರನ್ನು ನಿನ್ನ ಮಾತುಗಳಿಂದ ಉದ್ಧರಿಸಿರುವೆ; ಬಲಹೀನವಾದ ಮೊಣಕಾಲುಗಳನ್ನು ಪ್ರೋತ್ಸಾಹದಿಂದ ಬಲಗೊಳಿಸಿರುವೆ.


ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.


ಇಸ್ರೇಲರು ಈಜಿಪ್ಟಿನಿಂದ ಹೊರಟಾಗ ತಮ್ಮೊಂದಿಗೆ ಯೋಸೇಫನ ಎಲುಬುಗಳನ್ನೂ ತೆಗೆದುಕೊಂಡು ಬಂದಿದ್ದರು. ಅವರು ಯೋಸೇಫನ ಎಲುಬುಗಳನ್ನು ಶೆಕೆಮಿನಲ್ಲಿ ಹೂಳಿಟ್ಟರು. ಯಾಕೋಬನು ಶೆಕೆಮನ ತಂದೆಯಾದ ಹಮೋರನ ಗಂಡುಮಕ್ಕಳಿಂದ ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಆ ಎಲುಬುಗಳನ್ನು ಹೂಳಿಟ್ಟರು. ಈ ಭೂಮಿಯ ಯೋಸೇಫನ ಮಕ್ಕಳದಾಗಿತ್ತು.


ಯಾಕೋಬನ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಎಷ್ಟೇ ಸಂತೈಸಿದರೂ ಯಾಕೋಬನಿಗೆ ಆದರಣೆಯಾಗಲಿಲ್ಲ. ಯಾಕೋಬನು ಅವರಿಗೆ, “ನಾನು ಸಾಯುವ ತನಕ ನನ್ನ ಮಗನಿಗಾಗಿ ದುಃಖಪಡುವೆ” ಎಂದು ಹೇಳಿ ದುಃಖಿಸುತ್ತಲೇ ಇದ್ದನು.


ಆಮೇಲೆ ಆ ಸೇವಕನು ತಾನು ತಂದಿದ್ದ ಉಡುಗೊರೆಗಳನ್ನು ರೆಬೆಕ್ಕಳಿಗೆ ಕೊಟ್ಟನು. ಅವನು ರೆಬೆಕ್ಕಳಿಗೆ ಬೆಳ್ಳಿಬಂಗಾರಗಳ ಒಡವೆಗಳನ್ನೂ ಶ್ರೇಷ್ಠವಾದ ಬಟ್ಟೆಗಳನ್ನೂ ಕೊಟ್ಟನು. ಇದಲ್ಲದೆ ಅವನು ಬೆಲೆಬಾಳುವ ಉಡುಗೊರೆಗಳನ್ನು ಆಕೆಯ ಅಣ್ಣನಿಗೂ ತಾಯಿಗೂ ಕೊಟ್ಟನು.


ಅನೇಕ ಯೆಹೂದ್ಯರು ಮಾರ್ಥ ಮತ್ತು ಮರಿಯಳ ಬಳಿಗೆ ಬಂದಿದ್ದರು. ಮಾರ್ಥ ಮತ್ತು ಮರಿಯಳನ್ನು ಅವರ ತಮ್ಮನಾದ ಲಾಜರನ ವಿಷಯದಲ್ಲಿ ಸಂತೈಸಲು ಯೆಹೂದ್ಯರು ಬಂದಿದ್ದರು.


ಬಡವನು ತನ್ನ ನೆರೆಯವನಿಂದಲೂ ತಿರಸ್ಕರಿಸಲ್ಪಡುವನು. ಐಶ್ವರ್ಯವಂತನಿಗಾದರೋ ಅನೇಕ ಮಂದಿ ಸ್ನೇಹಿತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು