ಯೋಬ 42:6 - ಪರಿಶುದ್ದ ಬೈಬಲ್6 ಯೆಹೋವನೇ, ನನ್ನ ವಿಷಯದಲ್ಲಿ ನನಗೇ ನಾಚಿಕೆಯಾಗಿದೆ. ನನಗೆ ಎಷ್ಟೋ ದುಃಖವಾಗಿದೆ. ನಾನು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಳ್ಳುತ್ತೇನೆ. ನನ್ನ ಹೃದಯವನ್ನೂ ಜೀವಿತವನ್ನೂ ಮಾರ್ಪಡಿಸಿಕೊಳ್ಳುವುದಾಗಿ ನಾನು ನಿನಗೆ ವಾಗ್ದಾನ ಮಾಡುತ್ತೇನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದಕಾರಣ [ನಾನು ಆಡಿದ್ದನ್ನು] ತಿರಸ್ಕರಿಸಿ ಧೂಳಿಯಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |
“ಕೊರಾಜಿನೇ, ಬೆತ್ಸಾಯಿದವೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.
ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.
ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆಶಿಸುತ್ತೇನೆ ಎಂದು ನೆನಸಿರುವಿರಾ? ಜನರು ತಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಕೆಂದು ನಾನು ಆಶಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆಶಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆಶಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆಶಿಸುವನೆಂದು ನಂಬುತ್ತೀರೋ?
ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.