ಯೋಬ 42:8 - ಪರಿಶುದ್ದ ಬೈಬಲ್8 ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈಗ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ; ನನ್ನ ದಾಸನಾದ ಯೋಬನು ನಿಮ್ಮ ಪಕ್ಷವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.
ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.
ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಆಡುಗಳನ್ನೂ ತಂದರು. ಈ ಪ್ರಾಣಿಗಳನ್ನೆಲ್ಲಾ ಇಡೀ ಯೆಹೂದ ಪ್ರಾಂತ್ಯದಲ್ಲಿರುವ ಪ್ರಜೆಯವರಿಗಾಗಿ, ದೇವಾಲಯದ ಶುದ್ಧೀಕರಣಕ್ಕಾಗಿ ಮತ್ತು ಯೆಹೂದ ರಾಜ್ಯಕ್ಕಾಗಿ ಪಾಪಪರಿಹಾರ ಯಜ್ಞವಾಗಿ ಅರ್ಪಿಸಿದರು. ಅರಸನಾದ ಹಿಜ್ಕೀಯನು ಆರೋನನ ಸಂತತಿಯವರಾದ ಯಾಜಕರಿಗೆ ಆ ಪಶುಗಳನ್ನು ಯೆಹೋವನ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಮಾಡಲು ಆಜ್ಞಾಪಿಸಿದನು.