ಯೋಬ 42:9 - ಪರಿಶುದ್ದ ಬೈಬಲ್9 ಆಗ ತೇಮಾನ್ ಪಟ್ಟಣದ ಎಲೀಫಜನೂ ಶೂಹ ದೇಶದ ಬಿಲ್ದದನೂ ನಾಮಾಥ್ಯ ದೇಶದ ಚೋಫರನೂ ಯೆಹೋವನಿಗೆ ವಿಧೇಯರಾದರು. ಯೆಹೋವನು ಯೋಬನ ಪ್ರಾರ್ಥನೆಗೆ ಉತ್ತರವನ್ನು ನೀಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ತೇಮಾನ್ಯನಾದ ಎಲೀಫಜನೂ, ಶೂಹ್ಯನಾದ ಬಿಲ್ದದನೂ, ನಾಮಾಥ್ಯನಾದ ಚೋಫರನೂ ಹೋಗಿ ಯೆಹೋವನು ತಮಗೆ ಆಜ್ಞಾಪಿಸಿದ ಪ್ರಕಾರ ಮಾಡಲು ಯೆಹೋವನು ಯೋಬನ ವಿಜ್ಞಾಪನೆಯನ್ನು ಲಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು ಮತ್ತು ನಾಮಾಥ್ಯನಾದ ಚೋಫರನು ಹೋಗಿ ಸರ್ವೇಶ್ವರ ತಮಗೆ ಆಜ್ಞಾಪಿಸಿದಂತೆ ಮಾಡಿದರು. ಸರ್ವೇಶ್ವರ ಯೋಬನ ವಿಜ್ಞಾಪನೆಯನ್ನು ಆಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ತೇಮಾನ್ಯನಾದ ಎಲೀಫಜನೂ ಶೂಹ್ಯನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಯೆಹೋವನು ತಮಗೆ ಆಜ್ಞಾಪಿಸಿದ ಪ್ರಕಾರ ಮಾಡಲು ಯೆಹೋವನು ಯೋಬನ ವಿಜ್ಞಾಪನೆಯನ್ನು ಲಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು ಮತ್ತು ನಾಮಾಥ್ಯನಾದ ಚೋಫರನು ಹೋಗಿ ಯೆಹೋವ ದೇವರು ತಮಗೆ ಹೇಳಿದಂತೆ ಮಾಡಿದರು. ಯೆಹೋವ ದೇವರು ಯೋಬನ ಪ್ರಾರ್ಥನೆಯನ್ನು ಸ್ವೀಕರಿಸಿದರು. ಅಧ್ಯಾಯವನ್ನು ನೋಡಿ |
ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.