ಯೋಬ 5:1 - ಪರಿಶುದ್ದ ಬೈಬಲ್1 “ಯೋಬನೇ, ನೀನು ಕೂಗಿಕೊಂಡರೂ ನಿನಗೆ ಉತ್ತರಿಸುವವರಿಲ್ಲ; ದೇವದೂತರುಗಳಲ್ಲಿ ಯಾರನ್ನು ಆಶ್ರಯಿಸಿಕೊಳ್ಳುವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ನೀನು ಕೂಗಿದರೆ, ನಿನಗೆ ಉತ್ತರಕೊಡುವವರುಂಟೋ? ಪರಿಶುದ್ಧ ದೇವದೂತರಲ್ಲಿ ಯಾರನ್ನು ಆಶ್ರಯಿಸುವಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಕೂಗಿ ನೋಡು, ಯಾರಿದ್ದಾರೆ ಉತ್ತರಕೊಡುವವರು ನಿನಗೆ? ಈಗ ಯಾರ ಕಡೆಗೆ, ಯಾವ ದೇವದೂತರ ಕಡೆಗೆ ತಿರುಗುವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನೀನು ಕೂಗಿದರೆ ನಿನಗೆ ಉತ್ತರಕೊಡುವವರುಂಟೋ? ದೇವದೂತರಲ್ಲಿ ಯಾರನ್ನು ಆಶ್ರಯಿಸುವಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಈಗ ನೀನು ಕರೆದರೆ, ನಿನಗೆ ಉತ್ತರ ಕೊಡುವವರು ಇದ್ದಾರೋ? ಪರಿಶುದ್ಧರಲ್ಲಿ ಯಾರ ಕಡೆಗೆ ನೀನು ತಿರುಗಿಕೊಳ್ಳುವೆ? ಅಧ್ಯಾಯವನ್ನು ನೋಡಿ |
ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.