Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:10 - ಪರಿಶುದ್ದ ಬೈಬಲ್‌

10 ದೇವರು ಭೂಮಿಯ ಮೇಲೆ ಮಳೆ ಸುರಿಸಿ ಹೊಲಗದ್ದೆಗಳಿಗೆ ನೀರನ್ನು ಒದಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಭೂಮಿಯ ಮೇಲೆ ಮಳೆಸುರಿಸಿ, ಹೊಲಗದ್ದೆಗಳಿಗೆ ನೀರನ್ನು ಒದಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮಳೆಗರೆಯುತ್ತಾನೆ ಭೂಮಿಯ ಮೇಲೆ ನೀರೊದಗಿಸುತ್ತಾನೆ ಹೊಲಗದ್ದೆಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಭೂವಿುಯ ಮೇಲೆ ಮಳೆಸುರಿಸಿ ಹೊಲಗದ್ದೆಗಳಿಗೆ ನೀರನ್ನು ಒದಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಭೂಮಿಯ ಮೇಲೆ ಮಳೆಯನ್ನು ಕೊಡುತ್ತಾರೆ; ಹೊಲಗಳ ಮೇಲೆ ನೀರನ್ನು ಸುರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:10
13 ತಿಳಿವುಗಳ ಹೋಲಿಕೆ  

ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.”


ಅನ್ಯರ ವಿಗ್ರಹಗಳಿಗೆ ಮಳೆ ಸುರಿಸುವ ಸಾಮರ್ಥ್ಯವಿಲ್ಲ. ಆಕಾಶಕ್ಕೆ ಮಳೆಯನ್ನು ಸುರಿಸುವ ಸಾಮರ್ಥ್ಯವಿಲ್ಲ. ನೀನೊಬ್ಬನೇ ನಮ್ಮ ಆಶಾಕೇಂದ್ರ. ನೀನೇ ಈ ಎಲ್ಲವುಗಳನ್ನು ಸೃಷ್ಟಿಸಿದವನು.


ಯೆಹೂದದ ಜನರು, ‘ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯಿಂದಿರಬೇಕು. ಆತನು ನಮಗೆ ಸರಿಸಮಯದಲ್ಲಿ ಮುಂಗಾರು ಮತ್ತು ಹಿಂಗಾರುಮಳೆ ಸುರಿಸುತ್ತಾನೆ. ಸರಿಸಮಯಕ್ಕೆ ಫಸಲನ್ನು ಬರಮಾಡುತ್ತಾನೆ’ ಎಂದು ತಮ್ಮ ಹೃದಯದಲ್ಲಿ ಅಂದುಕೊಳ್ಳುವದಿಲ್ಲ.


ಆತನು ಆಕಾಶವನ್ನು ಮೋಡಗಳಿಂದ ತುಂಬಿಸುವನು; ಭೂಮಿಗಾಗಿ ಮಳೆಯನ್ನು ಸುರಿಸುವನು; ಬೆಟ್ಟಗಳ ಮೇಲೆ ಹುಲ್ಲನ್ನು ಬೆಳೆಯಮಾಡುವನು.


“ನಾನು ಮಳೆಯನ್ನು ನಿಲ್ಲಿಸಿದೆನು. ಸುಗ್ಗಿಗೆ ಮೂರು ತಿಂಗಳು ಇರುವಾಗಲೇ ಮಳೆಗರೆಯುವುದನ್ನು ನಿಲ್ಲಿಸಿದೆನು. ಆದ್ದರಿಂದ ಪೈರು ಬೆಳೆಯಲಿಲ್ಲ. ಆಮೇಲೆ ನಾನು ಒಂದು ಪಟ್ಟಣದ ಮೇಲೆ ಮಳೆ ಬೀಳುವಂತೆ ಮಾಡಿದೆನು. ಬೇರೆ ಪಟ್ಟಣಗಳ ಮೇಲೆ ಬೀಳದಂತೆ ಮಾಡಿದೆನು. ದೇಶದ ಒಂದು ಭಾಗದಲ್ಲಿ ಮಳೆ ಸುರಿಯಿತು. ಇನ್ನೊಂದು ಭಾಗವು ಒಣಗಿ ಬೆಂಗಾಡಾಗಿತ್ತು.


ಯೆಹೋವನು ಗರ್ಜಿಸುವ ಗುಡುಗನ್ನು ಬರಮಾಡುತ್ತಾನೆ. ಆತನು ಆಕಾಶದಿಂದ ನೀರನ್ನು ಮಹಾಪ್ರವಾಹದಂತೆ ಸುರಿಸುತ್ತಾನೆ. ಆತನು ಭೂಮಿಯ ಎಲ್ಲೆಡೆಯಿಂದ ಮೇಘಗಳು ಆಕಾಶಕ್ಕೆ ಏರಿಹೋಗುವಂತೆ ಮಾಡುತ್ತಾನೆ. ಆತನು ಮಳೆಯೊಂದಿಗೆ ಸಿಡಿಲನ್ನು ಬೀಳಿಸುತ್ತಾನೆ. ತನ್ನ ಭಂಡಾರದಿಂದ ಹೊರಗೆ ಗಾಳಿ ಬೀಸುವಂತೆ ಮಾಡುತ್ತಾನೆ.


ಆದ್ದರಿಂದ ಮೋಡಗಳು ನೀರನ್ನು ಸುರಿಯಮಾಡುತ್ತವೆ; ಅನೇಕರ ಮೇಲೆ ಮಳೆಯು ಸುರಿಯುತ್ತದೆ.


ಮಳೆಯನ್ನೂ ಗುಡುಗುಸಿಡಿಲುಗಳ ಮಳೆಯನ್ನೂ ಎಲ್ಲಿಗೆ ಕಳುಹಿಸಬೇಕೆಂದು ನಿರ್ಧರಿಸಿದಾಗಲೂ


“ದೇವರು ಭೂಮಿಯ ನೀರನ್ನು ಹಬೆಯ ರೂಪದಲ್ಲಿ ಮೇಲಕ್ಕೆ ಕೊಂಡೊಯ್ದು ಅದನ್ನು ಮಂಜನ್ನಾಗಿಯೂ ಮಳೆಯನ್ನಾಗಿಯೂ ಪರಿವರ್ತಿಸುತ್ತಾನೆ.


ಆತನು ಹಿಮಕ್ಕೆ, ‘ಭೂಮಿಯ ಮೇಲೆ ಬೀಳು’ ಎಂತಲೂ ಮಳೆಗೆ, ‘ಭೂಮಿಯ ಮೇಲೆ ಸುರಿ’ ಎಂತಲೂ ಆಜ್ಞಾಪಿಸುವನು.


ದೇವರೇ, ನೀನು ಮಳೆ ಸುರಿಸಿ, ಒಣಗಿ ಕೃಶವಾಗಿದ್ದ ಭೂಮಿಯನ್ನು ಫಲವತ್ತು ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು