ಯೋಬ 5:17 - ಪರಿಶುದ್ದ ಬೈಬಲ್17 “ಇಗೋ ದೇವರು ಯಾವನನ್ನು ಶಿಕ್ಷಿಸುವನೋ ಅವನೇ ಭಾಗ್ಯವಂತನು. ಆದ್ದರಿಂದ ಸರ್ವಶಕ್ತನಾದ ದೇವರು ನಿನ್ನನ್ನು ಶಿಕ್ಷಿಸುವಾಗ ದೂರು ಹೇಳಬೇಡ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಗೋ, ದೇವರು ಯಾರನ್ನು ಶಿಕ್ಷಿಸುವನೋ ಅವನು ಧನ್ಯನು; ಸರ್ವಶಕ್ತನಾದ ದೇವರ ದಂಡನೆಯನ್ನು ತಾತ್ಸಾರಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವರು ಯಾರನ್ನು ತಿದ್ದುತ್ತಾನೋ ಅವನು ಧನ್ಯನು ಅಲಕ್ಷ್ಯಮಾಡಬೇಡ ನೋಡು, ಸರ್ವಶಕ್ತನ ದಂಡನೆಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಗೋ, ದೇವರು ಯಾವನನ್ನು ಶಿಕ್ಷಿಸುವನೋ ಅವನು ಧನ್ಯನು; ಸರ್ವಶಕ್ತನ ದಂಡನೆಯನ್ನು ತಾತ್ಸಾರಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಇಗೋ, ದೇವರು ಗದರಿಸುವ ಮನುಷ್ಯನು ಧನ್ಯನು; ಸರ್ವಶಕ್ತರ ಶಿಕ್ಷೆಯನ್ನು ತಿರಸ್ಕರಿಸಬೇಡ. ಅಧ್ಯಾಯವನ್ನು ನೋಡಿ |
“ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.