Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:24 - ಪರಿಶುದ್ದ ಬೈಬಲ್‌

24 ನಿನ್ನ ಗುಡಾರವು ಸುರಕ್ಷಿತವಾಗಿರುವುದರಿಂದ ನೀನು ಸಮಾಧಾನದಿಂದ ಜೀವಿಸುವೆ. ನೀನು ನಿನ್ನ ಆಸ್ತಿಯನ್ನು ಲೆಕ್ಕಿಸುವಾಗ ಯಾವುದೂ ಕಳೆದುಹೋಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿನ್ನ ಗುಡಾರಕ್ಕೆ ಅಪಾಯವಿಲ್ಲವೆಂದು ನಿನಗೆ ಗೊತ್ತೇ ಇರುವುದು; ನಿನ್ನ ಹಟ್ಟಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಿನ್ನ ಗುಡಾರಕ್ಕೆ ಗಂಡಾಂತರವಿಲ್ಲವೆಂಬ ನೆಮ್ಮದಿ ನಿನಗಿರುವುದು ನಿನ್ನ ಮಂದೆಯನು ನೀನು ನೋಡಬಂದಾಗ ಕೊರತೆ ಕಾಣಬರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿನ್ನ ಗುಡಾರಕ್ಕೆ ಅಪಾಯವಿಲ್ಲವೆಂದು ನಿನಗೆ ಗೊತ್ತೇ ಇರುವದು; ನಿನ್ನ ಹಟ್ಟಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ನೀನು ತಿಳಿದುಕೊಳ್ಳುವೆ, ನಿನ್ನ ಆಸ್ತಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:24
15 ತಿಳಿವುಗಳ ಹೋಲಿಕೆ  

ಯಾವ ಕೇಡೂ ನಿನಗೆ ಸಂಭವಿಸದು. ನಿನ್ನ ಮನೆಯಲ್ಲಿ ಯಾವ ರೋಗಗಳೂ ಇರದು.


ಅವನ ಗುಡಾರದಲ್ಲಿರುವ ಬೆಳಕು ಕತ್ತಲಾಗುವುದು; ಅವನ ಪಕ್ಕದಲ್ಲಿರುವ ದೀಪವು ಆರಿಹೋಗುವುದು.


ನೀನು ಶುದ್ಧನೂ ಒಳ್ಳೆಯವನೂ ಆಗಿದ್ದರೆ ಆತನು ಬಂದು ನಿನಗೆ ಸಹಾಯ ಮಾಡುತ್ತಾನೆ; ನಿನ್ನ ಕುಟುಂಬವನ್ನು ನಿನಗೆ ಮತ್ತೆ ದಯಪಾಲಿಸುತ್ತಾನೆ.


ಅವರಲ್ಲಿ ಕೆಲವರು ಮರುಭೂಮಿಯಲ್ಲಿ ಅಲೆದಾಡಿದರು. ತಾವು ನೆಲೆಸತಕ್ಕ ಪಟ್ಟಣಕ್ಕಾಗಿ ಅವರು ಹುಡುಕಿದರೂ ಅದು ಅವರಿಗೆ ಕಾಣಲಿಲ್ಲ.


ಇದು ಸತ್ಯ, ದುಷ್ಟನ ಮನೆಗೆ ಇದೇ ಸಂಭವಿಸುವುದು. ದೇವರ ಬಗ್ಗೆ ಗಮನಕೊಡದ ವ್ಯಕ್ತಿಗೆ ಇದೇ ಸಂಭವಿಸುವುದು.”


ನೀವು ಮಾಡುವ ಎಲ್ಲಾ ಕಾರ್ಯಗಳಲ್ಲಿ ಸಫಲ ಹೊಂದುವಂತೆ ಆಶೀರ್ವದಿಸುವನು.


ಆತನು ಅವರ ನಾಯಕರುಗಳಿಗೆ ಅವಮಾನ ಮಾಡಿದನು; ದಾರಿಗಳಿಲ್ಲದ ಅರಣ್ಯದಲ್ಲಿ ಅಲೆದಾಡುವಂತೆ ಅವರನ್ನು ತೊರೆದುಬಿಟ್ಟನು.


ಅವನು ಸುಖದಿಂದಿರುವನು. ಆತನು ವಾಗ್ದಾನ ಮಾಡಿದ ದೇಶವನ್ನು ಅವನ ಮಕ್ಕಳು ಅನುಭವಿಸುವರು.


ಅವನ ಮನೆಯಲ್ಲಿ ಅವನದೇನೂ ಉಳಿದಿರುವುದಿಲ್ಲ. ಉರಿಯುವ ಗಂಧಕವು ಅವನ ಆಸ್ತಿಯಲ್ಲೆಲ್ಲಾ ಹರಡಿಕೊಂಡಿರುತ್ತದೆ.


ದಾವೀದನು ಮತ್ತು ಅವನ ಜನರು ಚಿಕ್ಲಗಿಗೆ ಬಂದರು. ನಗರವು ಸುಡುತ್ತಿರುವುದನ್ನು ಅವರು ನೋಡಿದರು. ಅವರ ಹೆಂಡತಿಯರಾಗಲಿ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಅಲ್ಲಿರಲಿಲ್ಲ. ಅಮಾಲೇಕ್ಯರು ಅವರನ್ನು ಎಳೆದುಕೊಂಡು ಹೋಗಿದ್ದರು.


ಇದಲ್ಲದೆ ಯೆಹೋವನು ಅವನಿಗೆ, “ನೀನು ಹೋಗಿ ಇಸ್ರೇಲರ ನಾಯಕರನ್ನು ಒಟ್ಟುಗೂಡಿಸಿ ಅವರಿಗೆ, ‘ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನನಗೆ ಕಾಣಿಸಿಕೊಂಡನು. ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಹೇಳುವುದೇನೆಂದರೆ, ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದವುಗಳನ್ನು ನಾನು ಲಕ್ಷ್ಯವಿಟ್ಟು ನೋಡಿದ್ದೇನೆ.


ಅವನ ಕುಟುಂಬದವರು ಐಶ್ವರ್ಯವಂತರಾಗುವರು. ಅವನ ನೀತಿಯು ಶಾಶ್ವತವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು