Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:25 - ಪರಿಶುದ್ದ ಬೈಬಲ್‌

25 ನೀನು ಅನೇಕ ಮಕ್ಕಳನ್ನು ಪಡೆದುಕೊಳ್ಳುವೆ. ಅವರು ಭೂಮಿಯ ಮೇಲಿರುವ ಹುಲ್ಲಿನ ಗರಿಗಳಷ್ಟಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಿನ್ನ ಸಂತಾನವು ದೊಡ್ಡದ್ದೆಂದೂ, ನಿನ್ನ ಸಂತತಿಯವರು ಭೂಮಿಯ ಹುಲ್ಲಿನಂತೆ ಲೆಕ್ಕವಿಲ್ಲದವರು ಎಂದೂ ನಂಬಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಿನ್ನ ಸಂತತಿ ದೊಡ್ಡದೆಂಬುದನು ನೀನು ತಿಳಿಯುವೆ ಅದು ಇಳೆಯ ಹುಲ್ಲಿನಂತೆ ಹುಲುಸಾಗಿ ಬೆಳೆವುದನು ಕಾಣುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಿನ್ನ ಸಂತಾನವು ದೊಡ್ಡದ್ದೆಂದೂ ನಿನ್ನ ಸಂತತಿಯವರು ಭೂವಿುಯ ಹುಲ್ಲಿನಂತೆ [ಲೆಕ್ಕವಿಲ್ಲದವರು] ಎಂದೂ ನಂಬಿರುವಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಿನ್ನ ಸಂತತಿಯು ಬಹಳವಾಗಿದೆ ಎಂದೂ, ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:25
11 ತಿಳಿವುಗಳ ಹೋಲಿಕೆ  

ಅವನ ಸಂತತಿಗಳವರು ಭೂಮಿಯ ಮೇಲೆ ಪ್ರಬಲರಾಗುವರು; ನೀತಿವಂತನ ಸಂತತಿಗಳವರು ಆಶೀರ್ವಾದವನ್ನು ಹೊಂದಿಕೊಳ್ಳುವರು.


ಹೊಲಗಳು ಯಥೇಚ್ಚವಾಗಿ ಧಾನ್ಯಬೆಳೆಯಲಿ. ಬೆಟ್ಟಗಳು ಬೆಳೆಗಳಿಂದ ತುಂಬಿಹೋಗಲಿ. ಹೊಲಗಳು ಲೆಬನೋನಿನಲ್ಲಿರುವ ಹೊಲಗಳಂತೆ ಫಲವತ್ತಾಗಿರಲಿ. ಬಯಲುಗಳು ಹುಲ್ಲಿನಿಂದ ಆವೃತಿಯಾಗಿರುವಂತೆ ಪಟ್ಟಣಗಳು ಜನರಿಂದ ತುಂಬಿಹೋಗಲಿ.


ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಹೊಲಗಳನ್ನು ಆಶೀರ್ವದಿಸಿ ಒಳ್ಳೆಯ ಬೆಳೆಯನ್ನು ಅನುಗ್ರಹಿಸುವನು. ನಿಮ್ಮ ಪಶುಪ್ರಾಣಿಗಳನ್ನು ಆಶೀರ್ವದಿಸಿ ಅವು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಆತನು ನಿಮ್ಮ ಎಲ್ಲಾ ದನಕರು, ಕುರಿಮರಿಗಳನ್ನು ಆಶೀರ್ವದಿಸುವನು.


ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು.


“ಬಳಿಕ ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವೆನು. ನಾನು ನಿಮ್ಮೊಡನೆ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ನೆರವೇರಿಸುವೆನು.


ನೀವು ನನಗೆ ವಿಧೇಯರಾಗಿದ್ದರೆ, ನಿಮ್ಮ ಸಂತಾನವು ಅಭಿವೃದ್ಧಿಯಾಗುತ್ತಿತ್ತು. ಅವರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿರುತ್ತಿದ್ದರು. ನೀವು ನನಗೆ ವಿಧೇಯರಾಗಿದ್ದರೆ, ನೀವು ನಾಶವಾಗಿರುತ್ತಿರಲಿಲ್ಲ ಮತ್ತು ನನ್ನೆದುರಿನಿಂದ ನಿಮ್ಮ ಹೆಸರು ತೆಗೆದುಹಾಕಲ್ಪಡುತ್ತಿರಲಿಲ್ಲ.”


ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು