Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:27 - ಪರಿಶುದ್ದ ಬೈಬಲ್‌

27 “ಯೋಬನೇ, ನಾವು ಈ ಸಂಗತಿಗಳನ್ನು ವಿಚಾರಿಸಿದ್ದೇವೆ; ಅವು ಸತ್ಯವೆಂದು ನಮಗೆ ತಿಳಿದಿದೆ. ಆದ್ದರಿಂದ ನೀನು ಸಹ ಕಿವಿಗೊಟ್ಟು ಅವುಗಳನ್ನು ತಿಳಿದುಕೊ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇಗೋ, ಇದನ್ನು ವಿಚಾರಿಸಿದ್ದೇವೆ, ಯಥಾರ್ಥವಾಗಿಯೇ ಇದೆ; ಇದನ್ನು ಕೇಳು, ನಿನ್ನಷ್ಟಕ್ಕೆ ನೀನೇ ತಿಳಿದುಕೋ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇದನು ನಾವು ಪರಿಶೋಧಿಸಿದ್ದೇವೆ, ಇದು ಯಥಾರ್ಥ ಇದನು ಕೇಳಿ ತಿಳಿದುಕೊ - ಇದು ನಿನಗೆ ಹಿತಕರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇಗೋ, ಇದನ್ನು ವಿಚಾರಿಸಿದ್ದೇವೆ, ಯಥಾರ್ಥವಾಗಿಯೇ ಇದೆ; ಇದನ್ನು ಕೇಳು, ನಿನ್ನಷ್ಟಕ್ಕೆ ನೀನೇ ತಿಳಿದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಇದನ್ನು ನಾವು ಪರಿಶೋಧಿಸಿದ್ದೇವೆ; ಇದು ಸತ್ಯವಾದದ್ದು, ಇದನ್ನು ನೀನು ಕೇಳಿ ತಿಳಿದುಕೋ, ಇದನ್ನು ನೀನು ಅನ್ವಯಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:27
13 ತಿಳಿವುಗಳ ಹೋಲಿಕೆ  

ಯೆಹೋವನು ಮಹತ್ಕಾರ್ಯಗಳನ್ನು ಮಾಡುವನು. ಜನರು ಅವುಗಳಲ್ಲಿ ಸಂತೋಷಿಸುತ್ತಾ ಅವುಗಳನ್ನೇ ಧ್ಯಾನಿಸುವರು.


ನೀನು ಜ್ಞಾನಿಯಾಗಿದ್ದರೆ ನಿನ್ನ ಜ್ಞಾನವು ನಿನಗೇ ಲಾಭಕರ. ಆದರೆ ನೀನು ದುರಾಭಿಮಾನದಿಂದ ಬೇರೆಯವರನ್ನು ಗೇಲಿಮಾಡಿದರೆ ನಿನ್ನನ್ನೇ ಕಷ್ಟಕ್ಕೆ ಗುರಿಮಾಡಿಕೊಳ್ಳುವೆ.


ಆದ್ದರಿಂದ ನಾನು ನಿಮಗೆ ಕೊಡುವ ಆತನ ಕಟ್ಟಳೆ, ವಿಧಿನಿಯಮಗಳಿಗೆ ವಿಧೇಯರಾಗಿರಿ. ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ ಇರುತ್ತದೆ.


“ಯಾವನೂ ದೇವರಿಗೆ ಸಹಾಯಮಾಡಲಾರನು. ಮಹಾ ಜ್ಞಾನಿಯು ಸಹ ದೇವರಿಗೆ ಉಪಯುಕ್ತನಾಗಲಾರನು.


“ಯೋಬನೇ, ನನಗೆ ಕಿವಿಗೊಡು, ಆಗ ನಾನು ನಿನಗೆ ಅದನ್ನು ವಿವರಿಸುವೆನು. ನಾನು ನೋಡಿರುವುದನ್ನೇ ನಿನಗೆ ತಿಳಿಸುವೆನು.


“ನೀವು ನಿಮ್ಮನ್ನೇ ಜ್ಞಾನಿಗಳೆಂದು ಆಲೋಚಿಸಿಕೊಂಡಿದ್ದೀರಿ. ನೀವು ಸಾಯುವಾಗ ಜ್ಞಾನವು ನಿಮ್ಮೊಡನೆಯೇ ಸಾಯುವುದು.


ಸುಗ್ಗಿಕಾಲದವರೆಗೂ ಬೆಳೆದು ಬಲಿಯುವ ಗೋಧಿಯಂತೆ ನೀನಿರುವೆ. ಹೌದು, ನೀನು ವೃದ್ಧಾಪ್ಯದ ಕೊನೆಯವರೆಗೂ ಜೀವಿಸುವೆ.


ಆಗ ಯೋಬನು ಹೀಗೆ ಉತ್ತರಿಸಿದನು: “ನನ್ನ ಸಂಕಟವನ್ನು ತೂಕಮಾಡುವುದಕ್ಕೂ ನನ್ನ ಕಷ್ಟವನ್ನೆಲ್ಲಾ ತಕ್ಕಡಿಯ ಮೇಲಿಡುವುದಕ್ಕೂ ಸಾಧ್ಯವಿದ್ದರೆ,


ಯೋಬನು ಹೇಳಿದನು: “ಇಗೋ, ಇವುಗಳನ್ನೆಲ್ಲ ನನ್ನ ಕಣ್ಣುಗಳು ಕಂಡಿವೆ; ಕಿವಿಗಳು ಕೇಳಿ ಗ್ರಹಿಸಿಕೊಂಡಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು