Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:3 - ಪರಿಶುದ್ದ ಬೈಬಲ್‌

3 ಅಭಿವೃದ್ಧಿಯಾಗುತ್ತಿರುವ ಮೂರ್ಖನನ್ನು ನಾನು ನೋಡಿದ್ದೇನೆ. ಇದ್ದಕ್ಕಿದ್ದಂತೆ ಅವನ ಮನೆಯು ಶಾಪಗ್ರಸ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೂರ್ಖನು ಬೇರೂರುವುದನ್ನು ನಾನು ನೋಡಿದೆನು. ಕೂಡಲೆ ಅವನ ನಿವಾಸವು ಶಾಪಗ್ರಸ್ತವೆನ್ನುವುದಕ್ಕೆ ಆಸ್ಪದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮೂರ್ಖನು ಬೇರೂರುವುದನು ನೋಡಿದೆ ಕೂಡಲೆ ಅವನ ನಿವಾಸ ಶಾಪಕ್ಕೀಡಾಗುವುದನು ಕಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೂರ್ಖನು ಬೇರೂರುವದನ್ನು ನಾನು ನೋಡಿದೆನು; ಕೂಡಲೆ ಅವನ ನಿವಾಸವು ಶಾಪಗ್ರಸ್ತವೆನ್ನುವದಕ್ಕೆ ಆಸ್ಪದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮೂಢನು ಬೇರೂರುವುದನ್ನು ನಾನು ನೋಡಿದೆನು, ಕೂಡಲೇ ಅವನ ಮನೆ ಶಾಪಕ್ಕಿಡಾಗುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:3
12 ತಿಳಿವುಗಳ ಹೋಲಿಕೆ  

‘ಅವನ ಮನೆ ಹಾಳಾಗಲಿ! ಅಲ್ಲಿ ಯಾರೂ ವಾಸಿಸದಂತಾಗಲಿ!’ ಎಂದು ಕೀರ್ತನೆಗಳ ಪುಸ್ತಕದಲ್ಲಿ ಯೂದನ ಬಗ್ಗೆ ಬರೆದಿದೆ. ಅಲ್ಲದೆ ‘ಬೇರೊಬ್ಬನು ಅವನ ಕೆಲಸವನ್ನು ಪಡೆದುಕೊಳ್ಳಲಿ’ ಎಂದು ಸಹ ಬರೆದಿದೆ.


ದುಷ್ಟರು ಹುಲ್ಲಿನಂತೆಯೂ ಕೆಡುಕರು ಹೂವಿನಂತೆಯೂ ಬದುಕಿ ಸಾಯುವರು. ಅವರ ನಿರರ್ಥಕ ಕಾರ್ಯಗಳು ನಿತ್ಯ ನಾಶವಾಗುತ್ತವೆ.


ಅವರ ಮನೆಗಳು ಬರಿದಾಗಲಿ; ಅವುಗಳಲ್ಲಿ ಯಾರೂ ವಾಸಿಸದಂತಾಗಲಿ.


ದೈವಿಕನಲ್ಲದವನ ಜೀವವನ್ನು ದೇವರು ತೆಗೆದುಹಾಕುವಾಗ ಅವನಿಗೆ ನಿರೀಕ್ಷೆಯೇ ಇರುವುದಿಲ್ಲ.


“ನೀವು ಹೇಳುವುದೇನೆಂದರೆ, ‘ಪ್ರವಾಹವು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ನಾಶನವು ದುಷ್ಟರನ್ನು ಕೊಚ್ಚಿಕೊಂಡು ಹೋಗುವುದು. ಅವರ ಜಮೀನು ಶಾಪಗ್ರಸ್ತವಾಗಿದೆ. ಆದ್ದರಿಂದ ಅವರು ದ್ರಾಕ್ಷಿಹಣ್ಣುಗಳನ್ನು ತಮ್ಮ ತೋಟಗಳಿಂದ ಸಂಗ್ರಹಿಸಲಾರರು.


ನನ್ನ ವೈರಿಗಳನ್ನು ಶಪಿಸಿ, ಅವರಿಗೆ ಸಾವನ್ನು ಕೋರಲು ನಾನೆಂದೂ ನನ್ನ ಬಾಯಿಗೆ ಅವಕಾಶ ಕೊಡಲಿಲ್ಲ.


ನೀತಿವಂತರು ಆಶೀರ್ವದಿಸಿದರೆ, ವಾಗ್ದಾನಮಾಡಲ್ಪಟ್ಟ ಭೂಮಿಯನ್ನು ಜನರು ಪಡೆದುಕೊಳ್ಳುವರು. ಆದರೆ ಅವರು ಶಪಿಸಿದರೆ, ಜನರು ನಾಶವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು