Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:5 - ಪರಿಶುದ್ದ ಬೈಬಲ್‌

5 ಹಸಿದಿರುವವರು ಆ ಮೂರ್ಖನ ಬೆಳೆಗಳನ್ನು ತಿಂದುಬಿಟ್ಟರು. ಅವರು ಬೇಲಿಗಳ ಮಧ್ಯದಲ್ಲಿ ಬೆಳೆಯುತ್ತಿರುವ ಧಾನ್ಯವನ್ನು ಸಹ ತಿಂದುಬಿಟ್ಟರು. ದುರಾಶೆಯುಳ್ಳವರು ಅವರ ಆಸ್ತಿಯನ್ನೆಲ್ಲಾ ಕಸಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಸಿದವನು ಅವರ ಬೆಳೆಯನ್ನು ಮುಳ್ಳುಬೇಲಿಹಾಕಿದ್ದರೂ ತಿಂದುಬಿಡುವನು. ಅವರ ಸೊತ್ತನ್ನು ನುಂಗಲು ಬಾಯಿ ತೆರೆದು ಕಾದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹಸಿದವರು ಅವನ ಬೆಳೆಯನು ತಿಂದುಬಿಡುವರು ಮುಳ್ಳುಬೇಲಿ ಹಾಕಿದ್ದರೂ ಅದನು ತಿಂದುಬಿಡುವರು ಅವನ ಸೊತ್ತನು ನುಂಗಲು ಬಾಯ್ದೆರೆದು ಕಾದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹಸಿದವನು ಅವರ ಬೆಳೆಯನ್ನು ಮುಳ್ಳು ಬೇಲಿಯೊಳಗಿಂದಲೇ ತಿಂದುಬಿಡುವನು. ಅವರ ಸೊತ್ತನ್ನು ನುಂಗಲು ಬೋನು ಬಾಯಿ ತೆರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಸಿದವರು ಅವನ ಪೈರನ್ನು ತಿಂದುಬಿಡುವರು; ಮುಳ್ಳುಬೇಲಿ ಹಾಕಿದ್ದರೂ ಅದನ್ನು ತೆಗೆದುಕೊಳ್ಳುವರು; ಅವನ ಆಸ್ತಿಯನ್ನು ಬಾಯಾರಿಕೆಯಾದವರು ನುಂಗಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:5
20 ತಿಳಿವುಗಳ ಹೋಲಿಕೆ  

ನಿನ್ನ ಎಲ್ಲ ವೈರಿಗಳು ನಿನ್ನನ್ನು ನೋಡಿ ಬಾಯಿ ತೆರೆದು ಸಿಳ್ಳುಹಾಕಿ ಹಲ್ಲು ಕಡಿಯುತ್ತಾರೆ. “ನಾವು ಅವರನ್ನು ಸಂಪೂರ್ಣವಾಗಿ ನುಂಗಿದೆವು! ನಿಜವಾಗಿ ನಾವು ಈ ದಿನವನ್ನೇ ನಿರೀಕ್ಷಿಸುತ್ತಿದ್ದೆವು. ಅಂತೂ ಕೊನೆಗೆ ಇದು ನೆರವೇರುವುದನ್ನು ನಾವು ಕಂಡೆವು” ಎಂದು ಅವರು ಅನ್ನುತ್ತಾರೆ.


ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.


ನಾನು ಬಾಬಿಲೋನಿನ ಬೇಲ್ ದೇವರನ್ನು ದಂಡಿಸುವೆನು. ಅವನು ನುಂಗಿದ ಜನರನ್ನು ಅವನು ಕಕ್ಕುವಂತೆ ಮಾಡುವೆನು. ಬೇರೆ ಜನಾಂಗಗಳು ಬಾಬಿಲೋನಿಗೆ ಬರಲಾರವು. ಬಾಬಿಲೋನಿನ ಸುತ್ತಲಿನ ಗೋಡೆಯು ಬೀಳುವುದು.


“ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಠ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು.


ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.


ದುಷ್ಟನು ಐಶ್ವರ್ಯವನ್ನು ನುಂಗಿಕೊಂಡಿದ್ದರೂ ಅದನ್ನು ಕಕ್ಕಿಬಿಡುವನು. ಹೌದು, ದೇವರು ಅದನ್ನು ದುಷ್ಟನ ಹೊಟ್ಟೆಯೊಳಗಿಂದ ಕಕ್ಕಿಸಿಬಿಡುವನು.


ಕಳ್ಳರ ಗುಡಾರಗಳಿಗೆ ತೊಂದರೆಯಿಲ್ಲ; ತಮ್ಮ ದೇವರುಗಳನ್ನು ಕೈಗಳಲ್ಲಿ ಎತ್ತಿಕೊಂಡು ಹೋಗುತ್ತಾ ದೇವರನ್ನು ರೇಗಿಸುವವರು ಸಮಾಧಾನದಿಂದಿದ್ದಾರೆ.


ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.


ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ನಮ್ಮ ಮೇಲೆ ಆಕ್ರಮಣಮಾಡಿ, ಒಂಟೆಗಳನ್ನು ಹೊಡೆದುಕೊಂಡು ಹೋದರು! ಅಲ್ಲದೆ ನಿನ್ನ ಸೇವಕರುಗಳನ್ನು ಕೊಂದುಹಾಕಿದರು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು. ಇದನ್ನು ನಿನಗೆ ತಿಳಿಸುವುದಕ್ಕಾಗಿಯೇ ಬಂದೆನು” ಎಂದು ಹೇಳಿದನು.


ಆದರೆ ಶೆಬ ದೇಶದವರು ನಮ್ಮ ಮೇಲೆ ಆಕ್ರಮಣ ಮಾಡಿ ನಿನ್ನ ಪಶುಗಳನ್ನೆಲ್ಲಾ ಹೊಡೆದುಕೊಂಡು ಹೋದರು; ನಿನ್ನ ಸೇವಕರುಗಳನ್ನೆಲ್ಲಾ ಕೊಂದು ಹಾಕಿದರು; ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಈ ವಿಷಯವನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.


ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.


ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.


“ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.


ಆತನು ಒಬ್ಬ ಶತ್ರುವಿನಂತಾಗಿದ್ದಾನೆ. ಆತನು ಇಸ್ರೇಲನ್ನು ನಾಶಮಾಡಿದನು. ಆತನು ಅವಳ ಎಲ್ಲ ಅರಮನೆಗಳನ್ನು ನುಂಗಿಬಿಟ್ಟನು. ಆತನು ಅವಳ ಎಲ್ಲ ಕೋಟೆಗಳನ್ನು ನುಂಗಿಬಿಟ್ಟನು. ಯೆಹೂದ ಜನಾಂಗದಲ್ಲಿ ಆತನು ಹೆಚ್ಚಿನ ದುಃಖವನ್ನು ಉಂಟುಮಾಡಿ ಶೋಕವನ್ನು ಹರಡಿದ್ದಾನೆ.


ದುಷ್ಟನು ಸಮೃದ್ಧಿಯಿಂದಿರುವಾಗಲೇ ಇಕ್ಕಟ್ಟಿನಿಂದ ಕುಗ್ಗಿಸಲ್ಪಡುವನು; ಅವನ ಕಷ್ಟಗಳು ಅವನ ಮೇಲೆ ಬೀಳುವವು!


ಆದಕಾರಣ ನಿನ್ನ ಸುತ್ತಲೆಲ್ಲಾ ಉರುಲುಗಳಿವೆ; ಫಕ್ಕನೆ ಬರುವ ವಿಪತ್ತು ನಿನ್ನನ್ನು ಭಯಗೊಳಿಸುವುದು.


ಅವನಿಗೆ ಸಾಲಕೊಟ್ಟವರು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ. ಅವನು ದುಡಿದು ಸಂಪಾದಿಸಿದ್ದೆಲ್ಲವನ್ನು ಪರರು ಸುಲಿದುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು