Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:11 - ಪರಿಶುದ್ದ ಬೈಬಲ್‌

11 “ನನ್ನ ಬಲವು ಕುಗ್ಗಿಹೋಗಿದೆ; ಬದುಕುವ ನಿರೀಕ್ಷೆಯೇ ನನಗಿಲ್ಲ. ಕೊನೆಯಲ್ಲಿ ನನಗೇನಾಗುವುದೋ ತಿಳಿಯದು, ಆದ್ದರಿಂದ ನಾನು ತಾಳ್ಮೆಯಿಂದಿರುವುದೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ? ನನ್ನ ಅಂತ್ಯಸ್ಥಿತಿಯೇನು, ನಾನು ತಾಳ್ಮೆಯಿಂದಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾನು ನಿರೀಕ್ಷೆಯಿಂದಿರಲು ನನಗಾಧಾರವೇನು? ನಾನು ತಾಳ್ಮೆಯಿಂದಿರಲು ನನ್ನ ಅಂತ್ಯಸ್ಥಿತಿಯೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ? ನನ್ನ ಅಂತ್ಯಸ್ಥಿತಿಯೇನು, ನಾನು ತಾಳ್ಮೆಯಿಂದಿರುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನಾನು ನಿರೀಕ್ಷೆಯಿಂದಿರಲು, ನನಗೆ ಶಕ್ತಿ ಎಲ್ಲಿದೆ? ನಾನು ಸಹನೆಯಿಂದಿರಲು, ನನಗೆ ಭವಿಷ್ಯ ಏನಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:11
15 ತಿಳಿವುಗಳ ಹೋಲಿಕೆ  

ನನ್ನ ಬಲವು ಕುಂದಿಹೋಯಿತು. ನನ್ನ ಆಯುಷ್ಕಾಲವು ಕಡಿಮೆಯಾಯಿತು.


ನೀನು ನನಗೆ ಕೇವಲ ಅಲ್ಪಾಯುಷ್ಯವನ್ನು ಕೊಟ್ಟಿರುವೆ. ನನ್ನ ಅಲ್ಪ ಜೀವಿತವು ನಿನ್ನ ದೃಷ್ಟಿಯಲ್ಲಿ ಗಣನೆಗೂ ಬಾರದು. ಮನುಷ್ಯನ ಜೀವಿತವು ಕೇವಲ ಮೋಡದಂತೆ ಕ್ಷಣಿಕವಾಗಿದೆ. ಯಾವನೂ ಸದಾಕಾಲ ಬದುಕುವುದಿಲ್ಲ!


“ನನ್ನ ಆತ್ಮವು ಒಡೆದುಹೋಗಿದೆ; ನನ್ನ ಜೀವಿತವು ಮುಗಿದುಹೋಗಿದೆ; ಸಮಾಧಿಯು ನನಗೋಸ್ಕರ ಕಾಯುತ್ತಿದೆ.


“ನಾನು ಮನುಷ್ಯನ ವಿರೋಧವಾಗಿ ದೂರು ಹೇಳುತ್ತಿಲ್ಲ. ನನ್ನಲ್ಲಿ ತಾಳ್ಮೆಯಿಲ್ಲದಿರುವುದಕ್ಕೆ ಒಂದು ಒಳ್ಳೆಯ ಕಾರಣವಿದೆ.


ಆದ್ದರಿಂದ ನಾನು ಕೊಳೆತುಹೋದ ಪದಾರ್ಥದಂತೆಯೂ ನುಸಿಹಿಡಿದ ಬಟ್ಟೆಯ ಚೂರಿನಂತೆಯೂ ಕ್ಷಯಿಸಿಹೋಗುತ್ತಿದ್ದೇನೆ.”


ಒಣಗಿದ ಎಲೆಯಂತಿರುವ ನನ್ನನ್ನು ಹೆದರಿಸುವಿಯಾ? ಹುಲ್ಲುಕಡ್ಡಿಯಂತಿರುವ ನನ್ನ ಮೇಲೆ ಆಕ್ರಮಣ ಮಾಡುವಿಯಾ?


ನನ್ನ ಜೀವಿತವು ಬಹುಮಟ್ಟಿಗೆ ಮುಗಿದುಹೋಗಿದೆ. ಆದ್ದರಿಂದ ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡು!


ನಾನು ಬಂಡೆಯಂತೆ ಬಲಿಷ್ಠನಲ್ಲ. ನನ್ನ ದೇಹವು ತಾಮ್ರದಿಂದ ಮಾಡಿದ್ದಲ್ಲ.


“ನಿನ್ನಿಂದ ಬಲಹೀನನಿಗೆ ಎಷ್ಟೋ ಸಹಾಯವಾಯಿತು! ನೀನು ನನ್ನ ಬಲಹೀನವಾದ ತೋಳುಗಳನ್ನು ಮತ್ತೆ ಬಲಗೊಳಿಸಿದೆ!


ಯೆಹೋವನೇ, ನನ್ನ ಗತಿಯನ್ನು ತಿಳಿಸು! ನನ್ನ ಈ ಅಲ್ಪ ಜೀವಿತವು ಇನ್ನೆಷ್ಟು ಕಾಲವಿರುವುದು? ನಾನೆಷ್ಟು ಕಾಲ ಬದುಕುವೆ?


“ನಾನು ನಿರೀಕ್ಷಿಸುತ್ತಿರುವ ಮನೆಯು ಕೇವಲ ಸಮಾಧಿಯಾಗಿದ್ದರೆ, ನನ್ನ ಹಾಸಿಗೆಯನ್ನು ಕತ್ತಲೆಯಲ್ಲಿ ಹಾಸಿಕೊಂಡಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು