ಯೋಬ 6:15 - ಪರಿಶುದ್ದ ಬೈಬಲ್15 ಆದರೆ ನನ್ನ ಸಹೋದರರಾದ ನೀವು ನಂಬಿಗಸ್ತರಲ್ಲ. ನಾನು ನಿಮ್ಮನ್ನು ಆಶ್ರಯಿಸಿಕೊಳ್ಳಲಾರೆ. ಕೆಲವೊಮ್ಮೆ ಹರಿಯುವ, ಕೆಲವೊಮ್ಮೆ ಹರಿಯದಿರುವ ತೊರೆಗಳಂತೆ ನೀವು ದ್ರೋಹಿಗಳಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನನ್ನ ಸಹೋದರರಾದರೋ ತೊರೆಯ ಹಾಗೂ, ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ರೋಹಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹರಿದು ಓಡುವ ತೊರೆಯಂತೆ ಉಕ್ಕಿ ಹರಿಯುವ ಪ್ರವಾಹದಂತೆ ದ್ರೋಹವೆಸಗಿದ್ದಾರೆ ಸೋದರರು ನನಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನನ್ನ ಸಹೋದರರಾದರೋ ತೊರೆಯ ಹಾಗೂ ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ರೋಹಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ನನ್ನ ಸಹೋದರರಾದರೋ, ಉಕ್ಕಿ ಹರಿಯುವ ತೊರೆಯಂತೆಯೂ, ಬತ್ತಿದ ಹಳ್ಳದಂತೆಯೂ ಅಪನಂಬಿಗಸ್ತರಾಗಿದ್ದಾರೆ. ಅಧ್ಯಾಯವನ್ನು ನೋಡಿ |
ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.
ಯೆಹೂದದ ರಾಜನ ಅರಮನೆಯಲ್ಲಿ ಉಳಿದ ಎಲ್ಲಾ ಸ್ತ್ರೀಯರನ್ನು ಬಾಬಿಲೋನಿನ ಸೈನ್ಯಾಧಿಕಾರಿಗಳ ಬಳಿಗೆ ತರಲಾಗುವುದು. ನಿನ್ನ ಸ್ತ್ರೀಯರು ಹಾಡನ್ನು ಹಾಡಿ ನಿನ್ನನ್ನು ತಮಾಷೆ ಮಾಡುವರು. ಆ ಸ್ತ್ರೀಯರು ಹೀಗೆ ಹೇಳುವರು: ‘ನಿನಗಿಂತಲೂ ಪ್ರಬಲರಾಗಿದ್ದ ನಿನ್ನ ಒಳ್ಳೆಯ ಸ್ನೇಹಿತರು ನಿನ್ನನ್ನು ತಪ್ಪುದಾರಿಗೆ ಎಳೆದರು. ಆ ಸ್ನೇಹಿತರನ್ನು ನೀನು ತುಂಬಾ ನಂಬಿಕೊಂಡಿದ್ದೆ. ನಿನ್ನ ಪಾದಗಳು ಕೆಸರಿನಲ್ಲಿ ಹೂತಿವೆ. ನಿನ್ನ ಸ್ನೇಹಿತರು ನಿನ್ನಿದ ದೂರವಾಗಿದ್ದಾರೆ.’