Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:19 - ಪರಿಶುದ್ದ ಬೈಬಲ್‌

19 ತೇಮದ ವರ್ತಕರ ತಂಡಗಳು ನೀರಿಗಾಗಿ ನೋಡುವರು. ಶೆಬದ ಪ್ರಯಾಣಿಕರು ನಿರೀಕ್ಷೆಯಿಂದ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತೇಮದ ಗುಂಪಿನವರು ಕಣ್ಣೆತ್ತಿ ನೋಡಿದರು, ಶೆಬದ ಸಮೂಹದವರು ಆ ತೊರೆಗಳನ್ನು ಹಾರೈಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವುಗಳಿಗಾಗಿ ಹಂಬಲಿಸುತ್ತದೆ ಆ ತೇಮದ ಪ್ರಯಾಣಿಕರ ತಂಡ ಅವುಗಳಿಗಾಗಿ ಹಾತೊರೆಯುತ್ತದೆ ಶೆಬದ ವರ್ತಕರ ಪಂಗಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತೇಮದ ಗುಂಪಿನವರು ಕಣ್ಣೆತ್ತಿ ನೋಡಿದರು, ಶೆಬದ ಸಮೂಹದವರು ಆ ತೊರೆಗಳನ್ನು ಹಾರೈಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ತೇಮದ ವರ್ತಕರ ಗುಂಪುಗಳು ನೀರಿಗಾಗಿ ಹಂಬಲಿಸುತ್ತಾರೆ; ಶೆಬದ ವ್ಯಾಪಾರಿಗಳು ನಿರೀಕ್ಷೆಯಿಂದ ನೋಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:19
11 ತಿಳಿವುಗಳ ಹೋಲಿಕೆ  

ಬಾಯಾರಿದ ಪ್ರಯಾಣಿಕರಿಗೆ ಅವರು ಕುಡಿಯಲು ನೀರು ಕೊಟ್ಟರು. ತೇಮದ ಕೆಲವರು ಹಸಿದ ಪ್ರವಾಸಿಗಳಿಗೆ ಊಟ ಕೊಟ್ಟರು.


ಹದದ್, ತೇಮಾ, ಯಟೂರ್, ನಾಫೀಷ್ ಮತ್ತು ಕೇದ್ಮಾ.


ದೆದಾನ್ಯರು, ತೇಮಾದೇಶದವರು, ಬೂಜ್ ದೇಶದವರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ತಮ್ಮ ತಲೆಕೂದಲನ್ನು ಕತ್ತರಿಸಿಕೊಳ್ಳುವ ಎಲ್ಲಾ ಜನರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


ಶೆಬದ ರಾಣಿ ಸೊಲೊಮೋನನ ಬಗ್ಗೆ ಕೇಳಿದಳು. ಅವಳು ಒಗಟುಗಳಿಂದ ಅವನನ್ನು ಪರೀಕ್ಷಿಸಲು


ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ.


ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರ ತಂದೆ. ದೆದಾನನ ಸಂತತಿಯವರು: ಅಶ್ಶೂರ್ಯರು ಲೆಟೂಶ್ಯರು ಮತ್ತು ಲೆಯುಮ್ಯರು.


ಕೂಷನ ಗಂಡುಮಕ್ಕಳು: ಸೆಬಾ, ಹವೀಲ, ಸಬ್ತಾ, ರಗ್ಮ ಮತ್ತು ಸಬ್ತಕಾ. ರಗ್ಮನ ಗಂಡುಮಕ್ಕಳು: ಶೆಬಾ ಮತ್ತು ದೆದಾನ್.


ಆದರೆ ಶೆಬ ದೇಶದವರು ನಮ್ಮ ಮೇಲೆ ಆಕ್ರಮಣ ಮಾಡಿ ನಿನ್ನ ಪಶುಗಳನ್ನೆಲ್ಲಾ ಹೊಡೆದುಕೊಂಡು ಹೋದರು; ನಿನ್ನ ಸೇವಕರುಗಳನ್ನೆಲ್ಲಾ ಕೊಂದು ಹಾಕಿದರು; ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಈ ವಿಷಯವನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.


ಯೋಬನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹದ ಬಿಲ್ದದನು ಮತ್ತು ನಾಮಾಥದ ಚೋಫರನು. ಯೋಬನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಈ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಬನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು.


ವರ್ತಕರ ತಂಡಗಳು ಅವುಗಳ ದಾರಿಗಳಿಂದ ಬೇರೆ ಕಡೆಗೆ ತಿರುಗಿಕೊಳ್ಳುವರು. ಅವರು ಅಲೆಯುತ್ತಾ ಮರುಭೂಮಿಗೆ ಹೋಗಿ ಕಾಣದಂತಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು