Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:23 - ಪರಿಶುದ್ದ ಬೈಬಲ್‌

23 ‘ಶತ್ರುವಿನ ಶಕ್ತಿಯಿಂದ ನನ್ನನ್ನು ರಕ್ಷಿಸಿರಿ. ವೈರಿಯಿಂದ ನನ್ನನ್ನು ರಕ್ಷಿಸಲು ಪ್ರಾಯಶ್ಚಿತ್ತ ಕೊಡಿರಿ’ ಎಂದಾಗಲಿ ನಾನೆಂದೂ ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ವಿರೋಧಿಯ ಕೈಯಿಂದ, ‘ನನ್ನನ್ನು ರಕ್ಷಿಸಿರಿ’ ಎಂದು ಕೇಳಿಕೊಂಡೆನೋ? ಬಲಾತ್ಕರಿಸುವವರಿಂದ, ‘ನನ್ನನ್ನು ವಿಮೋಚಿಸಿರಿ’ ಎಂದು ಬೇಡಿಕೊಂಡೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ವಿರೋಧಿಯ ಕೈಯಿಂದ ನನ್ನನು ಬಿಡಿಸಿರೆಂದು ಕೇಳಿಕೊಂಡೆನೋ? ಹಿಂಸಕರಿಂದ ನನ್ನನು ವಿಮೋಚಿಸಿರೆಂದು ಬೇಡಿಕೊಂಡೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ವಿರೋಧಿಯ ಕೈಯಿಂದ ನನ್ನನ್ನು ರಕ್ಷಿಸಿರಿ ಎಂದು ಕೇಳಿಕೊಂಡೆನೋ? ಬಲಾತ್ಕರಿಸುವವರಿಂದ ನನ್ನನ್ನು ವಿಮೋಚಿಸಿರಿ ಎಂದು ಬೇಡಿಕೊಂಡೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ‘ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ,’ ಎಂದೂ, ‘ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರಿ,’ ಎಂದೂ ನಾನು ಕೇಳಿದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:23
9 ತಿಳಿವುಗಳ ಹೋಲಿಕೆ  

“ನಾನು ನಿನ್ನನ್ನು ಆ ದುಷ್ಟ ಜನರಿಂದ ರಕ್ಷಿಸುತ್ತೇನೆ. ಆ ಜನರು ನಿನ್ನನ್ನು ಬೆದರಿಸುತ್ತಾರೆ. ಆದರೆ ನಾನು ನಿನ್ನನ್ನು ಆ ಜನರಿಂದ ರಕ್ಷಿಸುತ್ತೇನೆ.”


ಯೆಹೋವನಿಂದ ರಕ್ಷಿಸಲ್ಪಟ್ಟ ಪ್ರತಿಯೊಬ್ಬರೂ ಆತನಿಗೆ ಕೃತಜ್ಞತಾಸ್ತುತಿ ಮಾಡಲಿ. ಯೆಹೋವನು ಅವರನ್ನು ವೈರಿಗಳಿಂದ ಬಿಡಿಸಿದನು.


ಆದರೆ ದೇವರು ಈಡುಕೊಟ್ಟು ನನ್ನ ಪ್ರಾಣವನ್ನು ರಕ್ಷಿಸುವನು. ಆತನು ನನ್ನನ್ನು ತನ್ನೊಂದಿಗಿರಲು ಕೊಂಡೊಯ್ಯುವಾಗ ನನ್ನನ್ನು ಸಮಾಧಿಯ ಬಲದಿಂದ ರಕ್ಷಿಸುವನು.


ಬರಗಾಲದಲ್ಲಿ ಮರಣದಿಂದಲೂ ಯುದ್ಧದಲ್ಲಿ ಕತ್ತಿಯಿಂದಲೂ ಆತನು ನಿನ್ನನ್ನು ಸಂರಕ್ಷಿಸುವನು.


“ನಮ್ಮ ಯೆಹೂದಿ ಜನರನ್ನು ಪರದೇಶಗಳಲ್ಲಿ ಗುಲಾಮರನ್ನಾಗಿ ಮಾರಿದ್ದರು. ಅಂಥವರನ್ನು ನಾವು ಕ್ರಯಕೊಟ್ಟು ಕೊಂಡುಕೊಂಡು ಅವರನ್ನು ಗುಲಾಮತನದಿಂದ ಬಿಡುಗಡೆ ಮಾಡಿಸಿದೆವು. ಆದರೆ ನೀವು ಈಗ ಮತ್ತೆ ಗುಲಾಮರನ್ನಾಗಿ ಮಾಡುತ್ತಿದ್ದೀರಿ” ಎಂದೆನು. ಸೇರಿಬಂದಿದ್ದ ಶ್ರೀಮಂತರೂ ಅಧಿಕಾರಿಗಳೂ ಸುಮ್ಮನೆ ಬಾಯಿ ಮುಚ್ಚಿಕೊಂಡರು. ಅವರಿಗೆ ಏನೂ ಹೇಳಲಿಕ್ಕೂ ಆಗಲಿಲ್ಲ.


ಅವನ ಸಂಬಂಧಿಕರಲ್ಲಿ ಯಾರಾದರೂ ಅವನನ್ನು ಮರಳಿ ಕೊಂಡುಕೊಳ್ಳಬಹುದು.


‘ನನಗೆ ಏನಾದರೂ ಕೊಡಿ’ ಎಂದಾಗಲಿ ‘ನನಗೋಸ್ಕರವಾಗಿ ನಿಮ್ಮ ಐಶ್ವರ್ಯದಿಂದ ಇಂಥವನಿಗೆ ಲಂಚಕೊಡಿ’ ಎಂದಾಗಲಿ ನಾನೆಂದೂ ಕೇಳಲಿಲ್ಲ.


“ಈಗ ನನಗೆ ಉಪದೇಶಿಸಿ ನನ್ನ ತಪ್ಪನ್ನು ತಿಳಿಸಿರಿ; ನಾನು ಮೌನವಾಗಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು