Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:24 - ಪರಿಶುದ್ದ ಬೈಬಲ್‌

24 “ಈಗ ನನಗೆ ಉಪದೇಶಿಸಿ ನನ್ನ ತಪ್ಪನ್ನು ತಿಳಿಸಿರಿ; ನಾನು ಮೌನವಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನನಗೆ ಉಪದೇಶಮಾಡಿ ನನ್ನ ತಪ್ಪನ್ನು ನನಗೆ ತಿಳಿಯಪಡಿಸಿರಿ, ನಾನು ಮೌನದಿಂದಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಾನು ಮಾಡಿದ ತಪ್ಪೇನೆಂಬುದನು ತಿಳಿಸಿರಿ ನನಗೆ ನಾನು ಮೌನದಿಂದಿರುವೆನು, ಉಪದೇಶಮಾಡಿರಿ ನನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನನಗೆ ಉಪದೇಶಮಾಡಿ ನನ್ನ ತಪ್ಪನ್ನು ನನಗೆ ತಿಳಿಯಪಡಿಸಿರಿ, ನಾನು ಮೌನದಿಂದಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ನನಗೆ ಬೋಧಿಸಿರಿ, ನಾನು ಮೌನವಾಗಿರುವೆನು; ನಾನು ಮಾಡಿದ ತಪ್ಪನ್ನು ನನಗೆ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:24
17 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ.


ನೀನು ಜ್ಞಾನಿಗೆ ಉಪದೇಶಿಸಿದರೆ ಅವನು ಮತ್ತಷ್ಟು ಜ್ಞಾನಿಯಾಗುವನು. ನೀನು ನೀತಿವಂತನಿಗೆ ಬೋಧಿಸಿದರೆ, ಅವನು ಮತ್ತಷ್ಟು ತಿಳುವಳಿಕೆಯನ್ನು ಪಡೆದುಕೊಳ್ಳುವನು.


ನಾನು ದೇವರಿಗೆ ಹೀಗೆ ಹೇಳುತ್ತೇನೆ: ‘ನನ್ನನ್ನು ಖಂಡಿಸದೆ ಹೇಳು! ನಾನೇನು ತಪ್ಪುಮಾಡಿರುವೆ? ನನಗೆ ವಿರೋಧವಾಗಿ ನಿನ್ನಲ್ಲಿರುವ ದೂರುಗಳೇನು?


ಯೆಹೋವನು ಹೀಗೆನ್ನುತ್ತಾನೆ: “ನಿನಗೆ ಜೀವಮಾರ್ಗವನ್ನು ಉಪದೇಶಿಸಿ ಮಾರ್ಗದರ್ಶನ ನೀಡುವೆನು; ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು.


ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.


ದೇವರೇ, ನೀನು ನನಗೆ ಅಗೋಚರವಾಗಿದ್ದರೂ ನೀತಿಮಾರ್ಗವನ್ನು ಬೋಧಿಸು, ನಾನು ತಪ್ಪು ಮಾಡಿದ್ದರೆ ಅದನ್ನು ಮತ್ತೆ ಮಾಡುವುದಿಲ್ಲ’ ಎಂದು ಹೇಳಬಹುದು.


“ಈಗಲಾದರೋ ಯೋಬನೇ, ನನ್ನ ಸಂದೇಶಕ್ಕೆ ಕಿವಿಗೊಡು. ನನ್ನ ಮಾತುಗಳಿಗೆ ಗಮನ ಕೊಡು.


“ಯೋಬನೇ, ನಾವು ಈ ಸಂಗತಿಗಳನ್ನು ವಿಚಾರಿಸಿದ್ದೇವೆ; ಅವು ಸತ್ಯವೆಂದು ನಮಗೆ ತಿಳಿದಿದೆ. ಆದ್ದರಿಂದ ನೀನು ಸಹ ಕಿವಿಗೊಟ್ಟು ಅವುಗಳನ್ನು ತಿಳಿದುಕೊ.”


ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆ ಬಾಳುತ್ತದೆ.


ನೀವು ಮಾತಾಡುತ್ತಿದ್ದಾಗ ನಾನು ತಾಳ್ಮೆಯಿಂದ ಕಾದುಕೊಂಡಿದ್ದೆನು. ನೀವು ಹೇಳಲು ಪದಗಳಿಗಾಗಿ ಆಲೋಚಿಸುತ್ತಿರುವಾಗ ನಾನು ನಿಮ್ಮ ವಾದಗಳನ್ನು ಆಲಿಸಿದೆನು.


ನನ್ನ ಸಹೋದರ ಸಹೋದರಿಯರೇ, ಯಾವಾಗಲೂ ಮಾತನಾಡುವುದಕ್ಕಿಂತ ಕೇಳುವುದರಲ್ಲಿ ಆಸಕ್ತರಾಗಿರಿ. ಸುಲಭವಾಗಿ ಕೋಪಗೊಳ್ಳದಿರಿ.


‘ಶತ್ರುವಿನ ಶಕ್ತಿಯಿಂದ ನನ್ನನ್ನು ರಕ್ಷಿಸಿರಿ. ವೈರಿಯಿಂದ ನನ್ನನ್ನು ರಕ್ಷಿಸಲು ಪ್ರಾಯಶ್ಚಿತ್ತ ಕೊಡಿರಿ’ ಎಂದಾಗಲಿ ನಾನೆಂದೂ ಕೇಳಲಿಲ್ಲ.


ಯಥಾರ್ಥಾವಾದ ನುಡಿಗಳು ಶಕ್ತಿಯುತವಾಗಿವೆ. ಆದರೆ ನಿಮ್ಮ ವಾದಗಳು ಏನನ್ನೂ ನಿರೂಪಿಸುವುದಿಲ್ಲ.


ನಾನು ಎಷ್ಟು ಪಾಪಗಳನ್ನು ಮಾಡಿರುವೆ? ನಾನೇನು ತಪ್ಪು ಮಾಡಿರುವೆ? ನನ್ನ ತಪ್ಪನ್ನೂ ಪಾಪವನ್ನೂ ನನಗೆ ತೋರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು