Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:25 - ಪರಿಶುದ್ದ ಬೈಬಲ್‌

25 ಯಥಾರ್ಥಾವಾದ ನುಡಿಗಳು ಶಕ್ತಿಯುತವಾಗಿವೆ. ಆದರೆ ನಿಮ್ಮ ವಾದಗಳು ಏನನ್ನೂ ನಿರೂಪಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀತಿಯ ನುಡಿಗಳು ಎಷ್ಟೋ ಖಂಡಿತವಾಗಿವೆ, ಆದರೆ ನಿಮ್ಮ ಖಂಡನೆಯು ನಿರಾರ್ಥಕ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನ್ಯಾಯವಾದ ಮಾತು ಎಷ್ಟೋ ಶಕ್ತಿಯುತ ನಿಮ್ಮ ತರ್ಕವಾದರೋ ನಿರರ್ಥಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀತಿಯ ನುಡಿಗಳು ಎಷ್ಟೋ ಖಂಡಿತವಾಗಿವೆ, ಆದರೆ ನಿಮ್ಮ ಖಂಡನೆಯು ಖಂಡಿಸುವದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯಥಾರ್ಥ ಮಾತುಗಳು ಎಷ್ಟೋ ನೋವನ್ನು ತರುತ್ತವೆ! ಆದರೆ ನಿಮ್ಮ ತರ್ಕವು ರುಜುಪಡಿಸುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:25
15 ತಿಳಿವುಗಳ ಹೋಲಿಕೆ  

ನೀನು ಸರಿಸಮಯದಲ್ಲಿ ಒಳ್ಳೆಯದನ್ನು ಹೇಳಿದರೆ, ಅದು ಬೆಳ್ಳಿಯ ತಟ್ಟೆಯಲ್ಲಿರುವ ಚಿನ್ನದ ಸೇಬಿನಂತಿರುವುದು.


ಒಬ್ಬನ ಮಾತುಗಳು ಜೀವವನ್ನು ಉಳಿಸಬಲ್ಲವು ಅಥವಾ ಮರಣವನ್ನು ತರಬಲ್ಲವು. ಜನರು ತಮ್ಮ ಮಾತಿನ ಫಲವನ್ನು ಅನುಭವಿಸಲೇಬೇಕು.


ದುಡುಕಿದ ಮಾತು ಖಡ್ಗದಂತೆ ನೋವು ಮಾಡುತ್ತದೆ; ಜ್ಞಾನಿಯ ಮಾತು ಗುಣಪಡಿಸುತ್ತದೆ.


ಎಲೀಹುವಿಗೆ ಯೋಬನ ಮೂವರ ಸ್ನೇಹಿತರ ಮೇಲೆಯೂ ಬಹು ಕೋಪಬಂದಿತು. ಯಾಕೆಂದರೆ ಯೋಬನ ಪ್ರಶ್ನೆಗಳಿಗೆ ಪರಿಣಾಮಕಾರಿಯಾದ ಉತ್ತರವನ್ನು ಕೊಟ್ಟು ಯೋಬನೇ ತಪ್ಪಿತಸ್ಥನೆಂದು ನಿರೂಪಿಸಲು ಯೋಬನ ಮೂವರು ಗೆಳೆಯರಿಗೆ ಗೊತ್ತಿರಲಿಲ್ಲ. ಆದಕಾರಣ, ದೇವರೇ ತಪ್ಪಿತಸ್ಥನೆಂದು ತೋರಿತು.


“ಇದು ನಿಜವಲ್ಲದಿದ್ದರೆ, ನಾನು ಸುಳ್ಳು ಹೇಳಿರುವುದಾಗಿ ಯಾರು ನಿರೂಪಿಸಬಲ್ಲರು? ನನ್ನ ಮಾತುಗಳು ತಪ್ಪಾದವುಗಳೆಂದು ಯಾರು ತೋರಿಸಬಲ್ಲರು?”


“ಆದ್ದರಿಂದ ನೀವು ನಿಮ್ಮ ಬರಿದಾದ ಮಾತುಗಳಿಂದ ನನ್ನನ್ನು ಸಂತೈಸಲಾರಿರಿ. ನಿಮ್ಮ ಉತ್ತರಗಳು ಕೇವಲ ಸುಳ್ಳೇ ಆಗಿವೆ.”


ನೀವು ಬಾಯಿಮುಚ್ಚಿಕೊಂಡು ಸುಮ್ಮನಿದ್ದರೆ ಎಷ್ಟೋ ಒಳ್ಳೆಯದು. ನೀವು ಮಾಡಬಹುದಾದ ಜ್ಞಾನದ ಕಾರ್ಯ ಅದೊಂದೇ.


ಎಡವಿಬಿದ್ದವರನ್ನು ನಿನ್ನ ಮಾತುಗಳಿಂದ ಉದ್ಧರಿಸಿರುವೆ; ಬಲಹೀನವಾದ ಮೊಣಕಾಲುಗಳನ್ನು ಪ್ರೋತ್ಸಾಹದಿಂದ ಬಲಗೊಳಿಸಿರುವೆ.


“ಈಗ ನನಗೆ ಉಪದೇಶಿಸಿ ನನ್ನ ತಪ್ಪನ್ನು ತಿಳಿಸಿರಿ; ನಾನು ಮೌನವಾಗಿರುವೆನು.


ನನ್ನನ್ನು ಟೀಕೆ ಮಾಡಬೇಕೆಂದಿದ್ದೀರೋ? ಇನ್ನೂ ಕಟುವಾದ ಮಾತುಗಳನ್ನು ಆಡಬೇಕೆಂದಿದ್ದೀರೋ?


ನೀವೆಲ್ಲರೂ ಇವುಗಳನ್ನು ಕಣ್ಣಾರೆ ನೋಡಿದ್ದೀರಿ. ಹೀಗಿರಲು ಅಂಥ ನಿಷ್ಪ್ರಯೋಜಕ ಸಂಗತಿಗಳನ್ನು ಯಾಕೆ ಹೇಳುವಿರಿ?


ಸಮರ್ಪಕವಾದ ಉತ್ತರ ಸಂತೋಷವನ್ನು ಉಂಟುಮಾಡುವುದು; ತಕ್ಕ ಸಮಯದಲ್ಲಿ ಸಮಯೋಚಿತವಾದ ಮಾತು ಅತ್ಯುತ್ತಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು