Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:17 - ಪರಿಶುದ್ದ ಬೈಬಲ್‌

17 ದೇವರೇ, ಮನುಷ್ಯನು ಎಷ್ಟರವನು? ನೀನು ಅವನ ಕಡೆಗೆ ಗಮನ ಕೊಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮಾನವನು ಎಷ್ಟರವನು, ಅವನನ್ನು ನೀನು ಏಕೆ ಲಕ್ಷಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮನುಷ್ಯನಾದವನು ಎಷ್ಟರವನು ನೀನವನಿಗೆ ಘನತೆ ನೀಡಲು? ನೀನವನ ಮೇಲೆ ಗಮನ ಹರಿಸಲು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮಾನವನು ಎಷ್ಟರವನು, ಅವನನ್ನು ನೀನು ಏಕೆ ಹೆಚ್ಚಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ದೇವರೇ, ಮಾನವನು ಎಷ್ಟರವನು? ನೀವು ಮಾನವನಿಗೆ ಬಹು ಗೌರವ ಕೊಡುತ್ತೀರಿ, ಅವನ ಕಡೆಗೆ ಗಮನಹರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:17
10 ತಿಳಿವುಗಳ ಹೋಲಿಕೆ  

ಅದನ್ನು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ: “ದೇವರೇ, ನೀನು ಮಾನವರನ್ನು ಏಕೆ ನೆನಪುಮಾಡಿಕೊಳ್ಳಬೇಕು? ನೀನು ಮನುಷ್ಯನಿಗೋಸ್ಕರ ಏಕೆ ಚಿಂತಿಸಬೇಕು? ಅವನು ಅಷ್ಟೊಂದು ಮುಖ್ಯನಾದವನೇ?


ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು? ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು? ಮನುಷ್ಯರು ಎಷ್ಟರವರು? ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು?


ಯೆಹೋವನೇ, ಮನುಷ್ಯರು ಎಷ್ಟು ಮಾತ್ರದವರು? ನೀನು ಅವರನ್ನು ಯಾಕೆ ನೆನಸಬೇಕು? ಮನುಷ್ಯರು ಎಷ್ಟರವರು? ನೀನು ಅವರನ್ನು ಯಾಕೆ ಗಮನಿಸಬೇಕು?


ದೇವರೇ, ನೀನು ನನ್ನನ್ನು ಕಾಯುವುದೇಕೆ? ನಾನೇನು ಸಮುದ್ರವೇ? ಭಯಂಕರವಾದ ಸಮುದ್ರ ಪ್ರಾಣಿಯೇ?


ನೀನು ಯಾರನ್ನು ಅಟ್ಟಿಸಿಕೊಂಡು ಹೋಗುತ್ತಿರುವೆ? ಇಸ್ರೇಲರ ರಾಜನಾದ ನೀನು ಯಾರೊಂದಿಗೆ ಹೋರಾಡಬೇಕೆಂದಿರುವೆ? ನಿನಗೆ ಕೇಡು ಮಾಡಬಹುದಾದವನನ್ನು ನೀನು ಅಟ್ಟಿಸಿಕೊಂಡು ಹೋಗುತ್ತಿಲ್ಲ! ನೀನು ಸತ್ತ ನಾಯಿಯನ್ನೋ ಇಲ್ಲವೆ ಚಿಟ್ಟೆಯನ್ನೋ ಅಟ್ಟಿಸಿಕೊಂಡು ಹೋಗುತ್ತಿರುವೆ!


“ಯಾವನೂ ದೇವರಿಗೆ ಸಹಾಯಮಾಡಲಾರನು. ಮಹಾ ಜ್ಞಾನಿಯು ಸಹ ದೇವರಿಗೆ ಉಪಯುಕ್ತನಾಗಲಾರನು.


ಹೀಗಿರಲು, ಮನುಷ್ಯನು ಎಷ್ಟೋ ಅಪರಿಶುದ್ಧನು! ಅವನು ಕೇವಲ ನಿಷ್ಪ್ರಯೋಜಕವಾದ ಹುಳವಿನಂತಿದ್ದಾನೆ!”


ದೇವರೇ, ಇಂಥವನಾದ ನನ್ನ ಮೇಲೆ ಕಣ್ಣಿಟ್ಟು ನ್ಯಾಯಾಲಯಕ್ಕೆ ಎಳೆದುಕೊಂಡು ಹೋಗುವಿಯಾ?


ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು