ಯೋಬ 7:2 - ಪರಿಶುದ್ದ ಬೈಬಲ್2 ಮನುಷ್ಯನು ಉರಿಬಿಸಿಲಿನಲ್ಲಿ ಪ್ರಯಾಸಪಟ್ಟು ದುಡಿದ ಮೇಲೆ ತಂಪಾದ ನೆರಳನ್ನು ಬಯಸುವ ಗುಲಾಮನಂತಿದ್ದಾನೆ. ಮನುಷ್ಯನು, ದಿನದ ಕೂಲಿಗಾಗಿ ಕಾಯುತ್ತಿರುವ ಕೂಲಿಯವನಂತಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ಸಂಜೆಯನ್ನು ಬಯಸುವ ದಾಸನಂತೆಯೂ, ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಾನಿರುವೆ ಸಂಜೆಯನು ಬಯಸುವ ದಾಸನಂತೆ ಕೂಲಿಯನು ನಿರೀಕ್ಷಿಸುವ ಕೂಲಿಯಾಳಿನಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ಸಂಜೆಯನ್ನು ಬಯಸುವ ದಾಸನಂತೆಯೂ ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಗುಲಾಮನು ಸಾಯಂಕಾಲದ ನೆರಳನ್ನು ಅಪೇಕ್ಷಿಸುವ ಪ್ರಕಾರವೂ, ನಾನು ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾರವೂ ಇದ್ದೇನೆ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.