ಯೋಬ 8:10 - ಪರಿಶುದ್ದ ಬೈಬಲ್10 ಅವರು ನಿನಗೆ ಉಪದೇಶಮಾಡಿ ಬುದ್ಧಿ ಹೇಳುವರು; ತಾವು ಕಲಿತುಕೊಂಡದ್ದನ್ನು ನಿನಗೆ ಹೇಳಿಕೊಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ನಿನಗೆ ಬೋಧಿಸಿ ಬುದ್ಧಿಹೇಳಿ, ಮನಃಪೂರ್ವಕವಾಗಿ ಮಾತನಾಡುವುದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿನಗೆ ಬೋಧಿಸಿ ಬುದ್ಧಿಹೇಳುವರು ಪೂರ್ವಜರು ಅವರ ಅನುಭವದಿಂದ ಬಂದ ವಚನಗಳಿವು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು ನಿನಗೆ ಬೋಧಿಸಿ ಬುದ್ಧಿಹೇಳಿ ಮನಃಪೂರ್ವಕವಾಗಿ ಮಾತಾಡುವದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಪೂರ್ವಿಕರು ನಿನಗೆ ಬೋಧಿಸಿ ಬುದ್ಧಿ ಹೇಳಲಿಲ್ಲವೋ? ಅವರು ತಮ್ಮ ತಿಳುವಳಿಕೆಯನ್ನು ಹೊರತರಲಿಲ್ಲವೋ? ಅಧ್ಯಾಯವನ್ನು ನೋಡಿ |
ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.
ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.