Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:20 - ಪರಿಶುದ್ದ ಬೈಬಲ್‌

20 ಆದರೆ ದೇವರು ಒಬ್ಬ ನಿರಪರಾಧಿಯನ್ನೂ ಕೈಬಿಡುವುದಿಲ್ಲ. ಆತನು ದುಷ್ಟರಿಗೆ ಸಹಾಯ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವುದಿಲ್ಲ, ಕೆಡುಕರನ್ನು ಕೈಹಿಡಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದೇವರು ನಿರ್ದೋಷಿಯನು ತ್ಯಜಿಸಿಬಿಡುವುದಿಲ್ಲ ಕೆಡುಕರಿಗೆ ನೆರವಾಗಲು ಆತ ಕೈ ನೀಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವದಿಲ್ಲ, ಕೆಡುಕರನ್ನು ಕೈಹಿಡಿಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ದೇವರು ನಿರ್ದೋಷಿಯನ್ನು ತಿರಸ್ಕರಿಸುವುದಿಲ್ಲ; ಕೆಡುಕರ ಕೈಗಳನ್ನು ದೇವರು ಬಲಪಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:20
10 ತಿಳಿವುಗಳ ಹೋಲಿಕೆ  

ಯೋಬನೇ, ಆಲೋಚಿಸು: ಎಂದಾದರೂ ನಿರಪರಾಧಿಯು ನಾಶವಾಗಿರುವನೇ? ಎಂದಾದರೂ ಯಥಾರ್ಥವಂತರು ನಾಶವಾಗಿರುವರೇ?


ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು. ಶಾಂತಿಪ್ರಿಯರು ಅನೇಕ ಸಂತಾನಗಳನ್ನು ಹೊಂದಿಕೊಳ್ಳುವರು.


ಅವನು ಎಡವಿದರೂ ಬೀಳುವುದಿಲ್ಲ; ಯಾಕೆಂದರೆ ಯೆಹೋವನು ಅವನ ಕೈಹಿಡಿದುಕೊಂಡಿದ್ದಾನೆ.


ತಾನು ಆರಿಸಿರುವ ಅರಸನಾದ ಸೈರಸನಿಗೆ ಯೆಹೋವನು ಹೇಳುವುದೇನೆಂದರೆ: “ನಾನು ಸೈರಸನ ಬಲಗೈಯನ್ನು ಹಿಡಿಯುವೆನು. ಅರಸರುಗಳಿಂದ ಅವರ ಅಧಿಕಾರವನ್ನು ತೆಗೆದುಬಿಡುವಂತೆ ಅವನಿಗೆ ಸಹಾಯ ಮಾಡುವೆನು. ನಗರದ್ವಾರಗಳು ಅವನ ಮುನ್ನುಗ್ಗುವಿಕೆಯನ್ನು ನಿಲ್ಲಿಸದು. ನಗರದ್ವಾರವನ್ನು ತೆರೆದು ಸೈರಸನು ಒಳಗೆ ಪ್ರವೇಶಿಸುವಂತೆ ಮಾಡುವೆನು.”


ಯೆಹೋವನು ತನ್ನ ಜನರನ್ನು ತೊರೆದುಬಿಡುವುದಿಲ್ಲ. ಆತನು ತನ್ನ ಜನರನ್ನು ನಿಸ್ಸಹಾಯಕರನ್ನಾಗಿ ಮಾಡುವುದಿಲ್ಲ.


ಅಪಾಯ ಬಂದಾಗ ದುಷ್ಟನು ಪಾರಾಗುವನು; ದೇವರ ಕೋಪವು ತೋರಿಬರುವ ದಿನದಲ್ಲಿ ಅವನು ತಪ್ಪಿಸಿಕೊಳ್ಳುವನು.


‘ಜೀವಿತದಲ್ಲಿ ಎಲ್ಲರೂ ಒಂದೇ. ಆದ್ದರಿಂದ ಆತನು ಅಪರಾಧಿಗಳನ್ನೂ ನಿರಪರಾಧಿಗಳನ್ನೂ ನಾಶಮಾಡುತ್ತಾನೆ’ ಎಂಬುದು ನನ್ನ ಆಲೋಚನೆ.


ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.


ಯೆಹೋವನಿಗೆ ಪ್ರಾರ್ಥಿಸಿರಿ, ಆತನು ನಿಮಗೆ ಕಿವಿಗೊಡುವನು; ನಿಮ್ಮನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸುವನು.


ಒಳ್ಳೆಯವನೂ ಯಥಾರ್ಥನೂ ಆದ ಮನುಷ್ಯನು ಕ್ಷೇಮವಾಗಿರುವನು. ಮೋಸಮಾಡುವ ಕುಟಿಲ ಮನುಷ್ಯನಾದರೋ ಸಿಕ್ಕಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು