Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:14 - ಪರಿಶುದ್ದ ಬೈಬಲ್‌

14 ಆದ್ದರಿಂದ ನಾನು ದೇವರೊಂದಿಗೆ ವಾದ ಮಾಡಲಾರೆ. ಆತನಿಗೆ ಉತ್ತರ ಕೊಡುವುದಕ್ಕೂ ನಾನು ಅಶಕ್ತನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನಾದರೋ ದೇವರೊಂದಿಗೆ ವಾದಿಸಿ, ಆತನಿಗೆ ಉತ್ತರಕೊಡುವುದಕ್ಕೆ ಮತ್ತೂ ಅಶಕ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇವರೊಂದಿಗೆ ವಾದಿಸಲು ನಾನು ಅಶಕ್ತನು ಆತನಿಗೆ ತಕ್ಕ ಉತ್ತರ ಕೊಡಲು ನಾನೆಷ್ಟರವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನಾದರೋ ದೇವರೊಂದಿಗೆ ವಾದಿಸಿ ಆತನಿಗೆ ಉತ್ತರಕೊಡುವದಕ್ಕೆ ಮತ್ತೂ ಅಶಕ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ದೇವರೊಂದಿಗೆ ವಾದಿಸಲು ನಾನು ಅಶಕ್ತನು; ದೇವರಿಗೆ ತಕ್ಕ ಉತ್ತರ ಕೊಡಲು ನಾನು ಎಷ್ಟರವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:14
10 ತಿಳಿವುಗಳ ಹೋಲಿಕೆ  

ಯೋಬನೇ, ಕಿವಿಗೊಡು! ನಿನಗೆ ಸಾಧ್ಯವೆನಿಸಿದರೆ ನನಗೆ ಉತ್ತರಕೊಡು. ನಿನ್ನ ವಾದವನ್ನು ಸಿದ್ಧಪಡಿಸಿಕೊ; ನನ್ನೆದುರಿನಲ್ಲಿ ನಿನ್ನ ಪರವಾಗಿ ಪ್ರತಿವಾದಿಸು!


ಹೀಗಿರಲು, ಮನುಷ್ಯನು ಎಷ್ಟೋ ಅಪರಿಶುದ್ಧನು! ಅವನು ಕೇವಲ ನಿಷ್ಪ್ರಯೋಜಕವಾದ ಹುಳವಿನಂತಿದ್ದಾನೆ!”


ನಾನು ಯಥಾರ್ಥನಾಗಿರುವೆ. ದೇವರು ನನ್ನ ವಿಷಯವನ್ನು ಕೇಳುವನು; ನನ್ನ ನ್ಯಾಯಾಧಿಪತಿಯು ನನ್ನನ್ನು ಬಿಡುಗಡೆ ಮಾಡುವನು.


ಆಗ ನಾನು ದೇವರಿಗೆ ನನ್ನ ವ್ಯಾಜ್ಯದ ಬಗ್ಗೆ ವಿವರಿಸುತ್ತಿದ್ದೆನು; ನಾನು ನಿರಪರಾಧಿಯೆಂದು ನಿರೂಪಿಸಲು ನನ್ನ ಬಾಯನ್ನು ವಾದಗಳಿಂದ ತುಂಬಿಸಿಕೊಳ್ಳುತ್ತಿದ್ದೆನು.


ಒಬ್ಬನು ದೇವರೊಂದಿಗೆ ವಾದಿಸಬಯಸಿದರೆ, ದೇವರ ಸಾವಿರ ಪ್ರಶ್ನೆಗಳಲ್ಲಿ ಮನುಷ್ಯನು ಒಂದಕ್ಕೂ ಉತ್ತರ ಕೊಡಲಾರನು.


ಹೀಗಿರಲು ದೇವರು ಮನುಷ್ಯರಲ್ಲಿ ಎಷ್ಟೋ ತಪ್ಪುಗಳನ್ನು ಕಂಡುಹಿಡಿಯುವನು; ಮನುಷ್ಯರು ಮಣ್ಣಿನ ಮನೆಗಳಲ್ಲಿ ವಾಸಿಸುತ್ತಾರೆ. ಈ ಮಣ್ಣಿನ ಮನೆಗಳ ಅಸ್ತಿವಾರಗಳು ಧೂಳಿನಲ್ಲಿವೆ. ಅವರು ಹುಳಕ್ಕಿಂತಲೂ ಸುಲಭವಾಗಿ ಸಾವಿಗೀಡಾಗುವರು!


“ದೇವರೇ, ನೀನು ನಿಜವಾಗಿಯೂ ನಮ್ಮೊಡನೆ ಭೂಲೋಕದಲ್ಲಿ ವಾಸಿಸುವೆಯಾ? ಆಕಾಶವೆಲ್ಲವೂ ಹಾಗೂ ಉನ್ನತೋನ್ನತವಾದ ಪರಲೋಕವೆಲ್ಲವೂ ನಿನ್ನನ್ನು ಹಿಡಿಸಲಾರವು. ಹೀಗಿರಲು, ನಾನು ನಿನಗಾಗಿ ನಿರ್ಮಿಸಿರುವ ಈ ಆಲಯವು ನಿನ್ನ ವಾಸಕ್ಕೆ ಖಂಡಿತವಾಗಿಯೂ ಸಾಲುವುದಿಲ್ಲ.


ದೇವರು ನನ್ನಂಥ ಮನುಷ್ಯನಲ್ಲ; ನಾನು ಆತನಿಗೆ ಉತ್ತರಿಸಲಾರೆ. ನಾವು ನ್ಯಾಯಾಲಯದಲ್ಲಿ ಒಬ್ಬರನ್ನೊಬ್ಬರು ಸಂಧಿಸಲಾರೆವು.


“ಯೋಬನೇ, ನಾವು ದೇವರಿಗೆ ಹೇಳಬೇಕಾದುದನ್ನು ನಮಗೆ ತಿಳಿಸು! ನಮಗೆ ಸಾಕಷ್ಟು ಗೊತ್ತಿಲ್ಲದಿರುವುದರಿಂದ ಏನು ಹೇಳಬೇಕೋ ನಮಗೆ ತಿಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು