Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:16 - ಪರಿಶುದ್ದ ಬೈಬಲ್‌

16 ನಾನು ಆತನಿಗೆ ಮೊರೆಯಿಟ್ಟಿದ್ದರೂ, ಆತನು ನನಗೆ ಉತ್ತರ ಕೊಟ್ಟಿದ್ದರೂ ಈಗ ಆತನು ನನಗೆ ಕಿವಿಗೊಡುತ್ತಾನೆ ಎಂಬುದರಲ್ಲಿ ನನಗೆ ನಂಬಿಕೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಕರೆದಾಗ ಆತನು ನನಗೆ ಕಾಣಿಸಿಕೊಂಡಿದ್ದರೂ, ನನ್ನ ವಿಜ್ಞಾಪನೆಯನ್ನು ಲಾಲಿಸುವನೆಂದು ನಂಬುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನು ಕರೆದಾಗ ಓಗೊಟ್ಟಿದ್ದರೂ ನನ್ನ ವಿಜ್ಞಾಪನೆಯನ್ನು ಆಲಿಸುವನೆಂದು ನಂಬುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಕರೆಸಿದಾಗ ಆತನು ನನಗೆ ಕಾಣಿಸಿಕೊಂಡಿದ್ದರೂ ನನ್ನ ವಿಜ್ಞಾಪನೆಯನ್ನು ಲಾಲಿಸುವನೆಂದು ನಂಬುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಕರೆಯಲು ದೇವರು ನನಗೆ ಉತ್ತರ ಕೊಟ್ಟರೂ, ನನ್ನ ವಿಜ್ಞಾಪನೆಗೆ ದೇವರು ಕಿವಿಗೊಡುವರೆಂದು ನಾನು ನಂಬುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:16
12 ತಿಳಿವುಗಳ ಹೋಲಿಕೆ  

ಶಿಷ್ಯರು ಅತ್ಯಾಶ್ಚರ್ಯಗೊಂಡರು ಮತ್ತು ಯೇಸುವನ್ನು ಜೀವಂತವಾಗಿ ಕಂಡು ಅತ್ಯಂತ ಸಂತೋಷಪಟ್ಟರು. ಆದರೆ ಅವರಿಗಿನ್ನೂ ನಂಬಲಾಗಲಿಲ್ಲ. ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದನು.


ಯೆಹೋವನು ನಮ್ಮನ್ನು ಸೆರೆಯಿಂದ ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸು ಕಂಡವರಂತಿದ್ದೆವು!


ಆಗ ನಾನು ಸಹಾಯಕ್ಕಾಗಿ ಯೆಹೋವನನ್ನು ಕೂಗಿಕೊಂಡೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಆತನು ತನ್ನ ಆಲಯದಲ್ಲಿ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಗೆ ಕಿವಿಗೊಟ್ಟನು.


ನಾನು ಅವರನ್ನು ಕಂಡು ಮುಗುಳ್ನಗೆ ಬೀರಿದಾಗ ಅವರಿಗೆ ನಂಬುವುದಕ್ಕೇ ಆಗುತ್ತಿರಲಿಲ್ಲ. ನನ್ನ ಸಂತೋಷದ ಮುಖವು ಅವರನ್ನು ಪ್ರೋತ್ಸಾಹಗೊಳಿಸಿತು.


ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮನ್ನು ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.


ಅಂತೆಯೇ ಮೋಶೆಯು ಇಸ್ರೇಲರಿಗೆ ತಿಳಿಸಿದನು. ಆದರೆ ಜನರು ಬಹು ಪ್ರಯಾಸಪಟ್ಟು ದುಡಿಯುತ್ತಿದ್ದುದರಿಂದ ಮೋಶೆಯ ಮಾತಿಗೆ ಕಿವಿಗೊಡುವಷ್ಟು ತಾಳ್ಮೆ ಅವರಿಗಿರಲಿಲ್ಲ.


ಯೋಬನಾದ ನಾನು ನಿರಪರಾಧಿಯಾಗಿದ್ದರೂ ಆತನಿಗೆ ಉತ್ತರವನ್ನು ಕೊಡಲಾರೆ. ನನಗೆ ಕರುಣೆ ತೋರುವಂತೆ ನ್ಯಾಯಾಧಿಪತಿಯಾದ ದೇವರನ್ನು ಬೇಡಿಕೊಳ್ಳುವೆನು.


ನನ್ನನ್ನು ಜಜ್ಜುವುದಕ್ಕಾಗಿ ದೇವರು ಬಿರುಗಾಳಿಯನ್ನು ಕಳುಹಿಸುವನು; ನಿಷ್ಕಾರಣವಾಗಿ ನನಗೆ ಗಾಯಮಾಡುವನು.


ಆಗ ನೀನು ಕರೆದರೆ, ನಾನು ಉತ್ತರಕೊಡುವೆನು. ಇಲ್ಲವೇ ನಾನು ಕರೆಯುವೆ, ನೀನು ಉತ್ತರಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು