Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:28 - ಪರಿಶುದ್ದ ಬೈಬಲ್‌

28 ನನ್ನ ಎಲ್ಲಾ ಸಂಕಟಗಳಿಂದ ಇನ್ನೂ ಭಯಗೊಂಡಿರುವೆ. ಯಾಕೆಂದರೆ ನನ್ನನ್ನು ಅಪರಾಧಿಯೆಂದು ದೇವರು ಹೇಳುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದು ಎಣಿಸುವುದಿಲ್ಲವೆಂದು ತಿಳಿದುಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸಮಸ್ತ ದುಃಖದುಗುಡಗಳ ನೆನಪು ನನಗೆ ತರುತ್ತವೆ ದಿಗಿಲು ನನಗೆ ಗೊತ್ತು, ನೀ ನನ್ನನು ನಿರಪರಾಧಿ ಎಂದೆಣಿಸಲಾರೆಯೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದೆಣಿಸುವದಿಲ್ಲವೆಂದು ತಿಳಿದುಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನನಗಾದ ವ್ಯಥೆಗಳಿಗೆಲ್ಲಾ ನಾನು ಇನ್ನೂ ಹೆದರುತ್ತಿದ್ದೇನೆ; ದೇವರು ನನ್ನನ್ನು ನಿರಪರಾಧಿ ಎಂದು ಎಣಿಸುವುದಿಲ್ಲವೆಂದು ಸಹ ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:28
13 ತಿಳಿವುಗಳ ಹೋಲಿಕೆ  

ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. ನಾನು ನಿನ್ನ ತೀರ್ಪುಗಳಿಗೆ ಅಂಜಿಕೊಂಡಿದ್ದೇನೆ.


ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ ಒಬ್ಬನೂ ಜೀವಂತವಾಗಿ ಉಳಿಯಲಾರ.


ನನಗೆ ಸಂಭವಿಸಿದ ಬಗ್ಗೆ ನಾನು ಯೋಚಿಸುವಾಗ ನನಗೆ ಭಯವಾಗುತ್ತದೆ; ನನ್ನ ದೇಹವು ನಡುಗುತ್ತದೆ.


ನಾನಿಡುವ ಪ್ರತಿ ಹೆಜ್ಜೆಯನ್ನೂ ನೀನು ಗಮನಿಸುವೆ. ಆದರೆ ನೀನು ನನ್ನ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ನಾನು ಪಾಪ ಮಾಡಿದರೆ ನೀನು ನನ್ನನ್ನು ಗಮನಿಸುವೆ; ನಾನು ಮಾಡಿದ ತಪ್ಪಿಗಾಗಿ ನನ್ನನ್ನು ಶಿಕ್ಷಿಸುವೆ.


“ಹೌದು, ನೀನು ಹೇಳಿದ್ದು ಸತ್ಯವೇ ಸರಿ! ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ?


ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.”


ಆಪತ್ತು ಸಂಭವಿಸಬಹುದೆಂದು ನಾನು ಭಯಗೊಂಡಿದ್ದೆನು. ನಾನು ಯಾವುದಕ್ಕೆ ಹೆದರಿಕೊಂಡಿದ್ದೆನೊ ಅದು ನನಗೆ ಸಂಭವಿಸಿದೆ!


“ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


“ಆದರೆ ನನ್ನ ಯಾವ ಮಾತೂ ನನ್ನ ನೋವನ್ನು ನಿವಾರಣೆ ಮಾಡಲಾರದು; ಮೌನವಾಗಿದ್ದರೂ ಅದರಿಂದ ಪ್ರಯೋಜನವೇನೂ ಇಲ್ಲ.


ನಾನು ತಪ್ಪು ಮಾಡಿಲ್ಲದಿದ್ದರೂ ದೇವರು ನನಗೆ ವಿರೋಧವಾಗಿದ್ದಾನೆ. ದೇವರು ನನ್ನನ್ನು ತನ್ನ ವೈರಿಯೆಂದು ಪರಿಗಣಿಸಿದ್ದಾನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು