Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:3 - ಪರಿಶುದ್ದ ಬೈಬಲ್‌

3 ಒಬ್ಬನು ದೇವರೊಂದಿಗೆ ವಾದಿಸಬಯಸಿದರೆ, ದೇವರ ಸಾವಿರ ಪ್ರಶ್ನೆಗಳಲ್ಲಿ ಮನುಷ್ಯನು ಒಂದಕ್ಕೂ ಉತ್ತರ ಕೊಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನೊಂದಿಗೆ ವ್ಯಾಜ್ಯಮಾಡಬೇಕೆಂದು ಇಷ್ಟಪಟ್ಟರೂ, ಆತನ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರಕೊಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯಾರಾದರೂ ಆತನೊಡನೆ ವಾದಿಸಲು ಇಷ್ಟಪಟ್ಟರೂ ಆತನ ಸಹಸ್ರ ಪ್ರಶ್ನೆಗಳೊಂದಕ್ಕೂ ಉತ್ತರಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನೊಂದಿಗೆ ವ್ಯಾಜ್ಯವಾಡಬೇಕೆಂದು ಇಷ್ಟಪಟ್ಟರೂ ಆತನ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರಕೊಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರ ಸಂಗಡ ವ್ಯಾಜ್ಯವಾಡಲು ಮನುಷ್ಯನು ಬಯಸಿದರೂ, ದೇವರ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರ ಕೊಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:3
18 ತಿಳಿವುಗಳ ಹೋಲಿಕೆ  

ನಾನು ದೇವರಿಗೆ ಹೀಗೆ ಹೇಳುತ್ತೇನೆ: ‘ನನ್ನನ್ನು ಖಂಡಿಸದೆ ಹೇಳು! ನಾನೇನು ತಪ್ಪುಮಾಡಿರುವೆ? ನನಗೆ ವಿರೋಧವಾಗಿ ನಿನ್ನಲ್ಲಿರುವ ದೂರುಗಳೇನು?


“ಸರ್ವಶಕ್ತನಾದ ದೇವರ ವಿರುದ್ಧ ವ್ಯಾಜ್ಯಹೂಡಿದವನು ಆತನನ್ನು ಸರಿಪಡಿಸಬಲ್ಲನೇ? ದೇವರ ಮೇಲೆ ಅಪವಾದ ಹೊರಿಸುವವನು ಆತನಿಗೆ ಉತ್ತರ ನೀಡಲಿ” ಎಂದನು.


ನಮ್ಮಲ್ಲಿ ಪಾಪವಿಲ್ಲವೆಂದು ಹೇಳಿಕೊಂಡರೆ, ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುವವರಾಗಿದ್ದೇವೆ ಮತ್ತು ನಮ್ಮಲ್ಲಿ ಸತ್ಯವೇ ಇಲ್ಲ.


ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ?


ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ.


ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.


ಯೋಬನೇ, ನೀನು ದೇವರೊಂದಿಗೆ ವಾದಿಸುವುದೇಕೆ? ದೇವರು ನಿನಗೆ ಪ್ರತಿಯೊಂದನ್ನೂ ವಿವರಿಸಬೇಕೆಂದು ಭಾವಿಸಿಕೊಂಡಿರುವೆಯೋ?


ನಾನು ನಿರಪರಾಧಿಯಾಗಿದ್ದರೂ ನನ್ನ ಬಾಯಿ ನನ್ನನ್ನು ಖಂಡಿಸುವುದು; ನಾನು ನಿರ್ದೋಷಿಯಾಗಿದ್ದರೂ ನನ್ನ ಬಾಯಿ ನನ್ನನ್ನು ದೋಷಿಯೆಂದು ಹೇಳುವುದು.


ಆದ್ದರಿಂದ ನಾನು ದೇವರೊಂದಿಗೆ ವಾದ ಮಾಡಲಾರೆ. ಆತನಿಗೆ ಉತ್ತರ ಕೊಡುವುದಕ್ಕೂ ನಾನು ಅಶಕ್ತನಾಗಿರುವೆ.


ನಾನು ತಪ್ಪಿತಸ್ಥನೆಂದು ಯಾವನೂ ನಿರೂಪಿಸಲಾರನು. ನಿರೂಪಿಸಬಲ್ಲವನಿದ್ದರೆ ಬಾಯಿ ಮುಚ್ಚಿಕೊಳ್ಳುವೆನು.


ನಾನು ಒಂದು ಸಲ ಮಾತಾಡಿದ್ದೇನೆ; ಆದರೆ ಪ್ರತಿವಾದ ಮಾಡಲಾರೆನು. ನಾನು ಎರಡು ಸಲ ಮಾತಾಡಿದ್ದೇನೆ; ಆದರೆ ನಾನು ಹೆಚ್ಚಿಗೆ ಏನೂ ಹೇಳಲಾರೆನು” ಅಂದನು.


ದೇವರು ಮನುಷ್ಯರನ್ನು ಪರೀಕ್ಷಿಸಲು ಸಮಯವನ್ನು ಗೊತ್ತು ಪಡಿಸಬೇಕಿಲ್ಲ; ನ್ಯಾಯತೀರ್ಪು ನೀಡಲು ಅವರನ್ನು ತನ್ನ ಮುಂದೆ ಕರೆಸಬೇಕಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು