Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:31 - ಪರಿಶುದ್ದ ಬೈಬಲ್‌

31 ದೇವರು ನನ್ನನ್ನು ಮಣ್ಣಿನ ಗುಂಡಿಗೆ ತಳ್ಳಿ ನನ್ನ ಬಟ್ಟೆಗಳಿಗೇ ನಾನು ಅಸಹ್ಯವಾಗುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀನು ನನ್ನನ್ನು ಗುಂಡಿಯಲ್ಲಿ ಮುಳುಗಿಸಿ, ನನ್ನ ಬಟ್ಟೆಗಳಿಗೆ ನಾನು ಅಸಹ್ಯನಾಗುವಂತೆ ಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಮುಳುಗಿಸಿಬಿಡುವೆ ನನ್ನನ್ನು ತಿಪ್ಪೆಗುಂಡಿಯಲ್ಲಿ ನನ್ನ ಉಡಿಗೆ ತೊಡಿಗೆಗಳೂ ಅಸಹ್ಯಪಡುವುವು ನನ್ನನು ನೋಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೀನು ನನ್ನನ್ನು ಗುಂಡಿಯಲ್ಲಿ ಮುಣುಗಿಸಿ ನನ್ನ ಬಟ್ಟೆಗಳಿಗೇ ನಾನು ಅಸಹ್ಯನಾಗುವಂತೆ ಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ದೇವರು ನನ್ನನ್ನು ಕುಣಿಯಲ್ಲಿ ಮುಳುಗಿಸಿ ಬಿಡುವರು; ನನ್ನ ಸ್ವಂತ ವಸ್ತ್ರಗಳೇ ನನ್ನನ್ನು ಅಸಹ್ಯಪಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:31
11 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ. ನಮ್ಮ ಸುಕಾರ್ಯಗಳೆಲ್ಲಾ ಹಳೇ ಕೊಳಕು ಬಟ್ಟೆಯಂತಿವೆ. ನಾವೆಲ್ಲಾ ಒಣಗಿಹೋದ ಎಲೆಗಳಂತಿದ್ದೇವೆ. ನಮ್ಮ ಪಾಪಗಳು ಬಿರುಗಾಳಿಯಂತೆ ನಮ್ಮನ್ನು ಬಡಿದುಕೊಂಡುಹೋಗಿವೆ.


ಜೇಡರ ಬಲೆಗಳ ನೂಲಿನಿಂದ ಬಟ್ಟೆ ನೇಯಲಾಗದು. ಆ ಬಲೆಯಿಂದ ನಿಮ್ಮ ಶರೀರವನ್ನು ಮುಚ್ಚಲಾಗುವದಿಲ್ಲ. ಕೆಲವರು ತಮ್ಮ ಕೈಗಳಿಂದ ಇತರರಿಗೆ ಕೇಡುಮಾಡುವರು.


ನೀನು ತಪ್ಪಿತಸ್ಥನೆಂದು ನಾನು ನಿರೂಪಿಸುವ ಅಗತ್ಯವಿಲ್ಲ. ಯಾಕೆಂದರೆ ನಿನ್ನ ಬಾಯ ಮಾತುಗಳೇ ನಿನ್ನನ್ನು ತಪ್ಪಿತಸ್ಥನೆಂದು ತೋರಿಸುತ್ತವೆ. ನಿನ್ನ ಸ್ವಂತ ತುಟಿಗಳೇ ನಿನ್ನ ವಿರುದ್ಧವಾಗಿ ಸಾಕ್ಷಿ ಕೊಡುತ್ತವೆ.


ನಾನು ನಿರಪರಾಧಿಯಾಗಿದ್ದರೂ ನನ್ನ ಬಾಯಿ ನನ್ನನ್ನು ಖಂಡಿಸುವುದು; ನಾನು ನಿರ್ದೋಷಿಯಾಗಿದ್ದರೂ ನನ್ನ ಬಾಯಿ ನನ್ನನ್ನು ದೋಷಿಯೆಂದು ಹೇಳುವುದು.


ನಾನು ಹಿಮದಿಂದ ಸ್ನಾನಮಾಡಿದರೂ ಸಾಬೂನಿನಿಂದ ಕೈತೊಳೆದುಕೊಂಡರೂ


ದೇವರು ನನ್ನಂಥ ಮನುಷ್ಯನಲ್ಲ; ನಾನು ಆತನಿಗೆ ಉತ್ತರಿಸಲಾರೆ. ನಾವು ನ್ಯಾಯಾಲಯದಲ್ಲಿ ಒಬ್ಬರನ್ನೊಬ್ಬರು ಸಂಧಿಸಲಾರೆವು.


ಅಲ್ಲದೆ ನೀನು ದೇವರಿಗೆ, ‘ಮನುಷ್ಯನು ಪಾಪ ಮಾಡದೆ ದೇವರನ್ನು ಮೆಚ್ಚಿಸುವುದರಿಂದ ಅವನಿಗೆ ಪ್ರಯೋಜನವೇನು? ನಾನು ಪಾಪಮಾಡದಿದ್ದರೆ ನನಗೇನು ಒಳಿತಾಗುವುದು’ ಎಂದು ಕೇಳು.


ನಿನ್ನ ಮೇಲೆ ಹೊಲಸನ್ನು ಬಿಸಾಡುವೆನು. ನಿನ್ನನ್ನು ದ್ವೇಷದಿಂದ ಕಾಣುವೆನು. ಜನರು ನಿನ್ನನ್ನು ನೋಡಿ ನಗಾಡುವರು.


ನನ್ನ ಪಾಪಗಳನ್ನು ಚೀಲದಲ್ಲಿಟ್ಟು ಮುದ್ರಿಸಿ ದೂರಕ್ಕೆ ಎಸೆದುಬಿಡುವೆ.


ನೀನು ಚೌಳನಿಂದ ತೊಳೆದುಕೊಂಡರೂ ಹೆಚ್ಚು ಸೋಪನ್ನು ಉಪಯೋಗಿಸಿದರೂ ನಾನು ನಿನ್ನ ದೋಷವನ್ನು ಕಂಡುಹಿಡಿಯಬಲ್ಲೆ” ಅನ್ನುತ್ತಾನೆ ಯೆಹೋವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು