ಯೋಬ 9:32 - ಪರಿಶುದ್ದ ಬೈಬಲ್32 ದೇವರು ನನ್ನಂಥ ಮನುಷ್ಯನಲ್ಲ; ನಾನು ಆತನಿಗೆ ಉತ್ತರಿಸಲಾರೆ. ನಾವು ನ್ಯಾಯಾಲಯದಲ್ಲಿ ಒಬ್ಬರನ್ನೊಬ್ಬರು ಸಂಧಿಸಲಾರೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವುದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ದೇವರು ನನ್ನಂಥ ನರನಲ್ಲ, ನಾನಾತನಿಗೆ ಉತ್ತರಿಸಲು ನಾವಿಬ್ಬರೂ ನ್ಯಾಯಾಲಯದಲ್ಲಿ ಕೂಡಿ ವಾದಿಸಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 “ದೇವರು ನನ್ನಂಥ ಕೇವಲ ಮನುಷ್ಯನಲ್ಲ, ನಾನು ದೇವರೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಲಯದ ಮುಂದೆ ಕೂಡಿ ವಾದಿಸುವುದು ಹೇಗೆ? ಅಧ್ಯಾಯವನ್ನು ನೋಡಿ |
“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”
“ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.