Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:4 - ಪರಿಶುದ್ದ ಬೈಬಲ್‌

4 ದೇವರ ಜ್ಞಾನವು ಅಗಾಧವಾದದ್ದು; ಆತನ ಶಕ್ತಿಯು ಮಹತ್ವವಾದದ್ದು; ಯಾವನೂ ದೇವರಿಗೆ ವಿರೋಧವಾಗಿ ಜಯಗಳಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು; ಆತನಿಗೆ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರ ಜ್ಞಾನವು ಆಳವಾದದ್ದು, ಶಕ್ತಿಯಲ್ಲಿ ದೇವರು ಪ್ರಬಲರೂ ಆಗಿದ್ದಾರೆ; ದೇವರ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:4
39 ತಿಳಿವುಗಳ ಹೋಲಿಕೆ  

“ದೇವರು ಮಹಾ ಶಕ್ತಿಶಾಲಿಯಾಗಿದ್ದರೂ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ಮಹಾ ಬಲಶಾಲಿಯೂ ಹೌದು, ಮಹಾ ಜ್ಞಾನಿಯೂ ಹೌದು!


ನಮ್ಮಲ್ಲಿ ಕಾರ್ಯಮಾಡುತ್ತಿರುವ ತನ್ನ ಶಕ್ತಿಯಿಂದ ನಾವು ಕೇಳುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಎಷ್ಟೋ ಹೆಚ್ಚೆಚ್ಚಾಗಿ ದೇವರು ಮಾಡಬಲ್ಲನು.


ತನ್ನ ನಾನಾ ವಿಧವಾದ ಜ್ಞಾನವು ಆಕಾಶಮಂಡಲದಲ್ಲಿರುವ ಎಲ್ಲಾ ಅಧಿಪತಿಗಳಿಗೂ ಅಧಿಕಾರಿಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶವಾಗಿತ್ತು.


ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


ಆತನನ್ನು ಸೋಲಿಸೋಣವೆಂದರೆ ಆತನೇ ಬಲಿಷ್ಠನಾಗಿದ್ದಾನೆ; ನ್ಯಾಯಾಲಯಕ್ಕೆ ಹೋಗೋಣವೆಂದರೆ ಆತನನ್ನು ನ್ಯಾಯಾಲಯಕ್ಕೆ ಬರಮಾಡುವವನು ಯಾರು?


ನಂಬಿಕೆಯಿಡುವಂಥ ನಮಗೆ ದೇವರ ಶಕ್ತಿಯು ಎಷ್ಟು ಮಹತ್ವವುಳ್ಳದ್ದಾಗಿದೆ ಎಂಬುದನ್ನೂ ಆಗ ನೀವು ತಿಳಿದುಕೊಳ್ಳುವಿರಿ. ಕ್ರಿಸ್ತನನ್ನು ಮರಣದಿಂದ ಜೀವಂತನಾಗಿ ಎಬ್ಬಿಸಲು ದೇವರು ಉಪಯೋಗಿಸಿದ ಮಹಾಶಕ್ತಿ ಅದೇ.


ದೇವರು ನಮಗೆ ಆ ಕೃಪೆಯನ್ನು ಸಂಪೂರ್ಣವಾಗಿಯೂ ಉಚಿತವಾಗಿಯೂ ತೋರಿದನು. ದೇವರು ತನ್ನ ರಹಸ್ಯವಾದ ಯೋಜನೆಯನ್ನು ನಮಗೆ ತಿಳಿಸುವುದರ ಮೂಲಕ ನಮಗೆ ಸಂಪೂರ್ಣವಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಟ್ಟನು.


ಪ್ರಭುವಿಗೆ ಅಸೂಯೆಯನ್ನು ಉಂಟುಮಾಡಬೇಕೆಂದಿದ್ದೀರೋ? ಆತನಿಗಿಂತಲೂ ನಾವು ಬಲಿಷ್ಠರಾಗಿದ್ದೇವೋ? ಇಲ್ಲ!


ಹೌದು, ದೇವರ ಐಶ್ವರ್ಯವು ಎಷ್ಟೋ ಅಪಾರವಾಗಿದೆ! ದೇವರ ವಿವೇಕಕ್ಕೂ ಜ್ಞಾನಕ್ಕೂ ಕೊನೆಯೇ ಇಲ್ಲ! ದೇವರು ನಿರ್ಧರಿಸುವ ಸಂಗತಿಗಳನ್ನು ಯಾವನೂ ವಿವರಿಸಲಾರನು. ದೇವರ ಮಾರ್ಗಗಳನ್ನು ಯಾವನೂ ಅರ್ಥಮಾಡಿಕೊಳ್ಳಲಾರನು.


“ದೇವರ ನಾಮವನ್ನು ಎಂದೆಂದಿಗೂ ಸ್ತುತಿಸಿರಿ! ಜ್ಞಾನವೂ ಸಾಮರ್ಥ್ಯವೂ ಆತನವೇ.


ಕೇಡನ್ನು ಮಾಡಲು ಭಯಪಡುವವನು ಆಶೀರ್ವಾದ ಹೊಂದುವನು. ಆದರೆ ಮೊಂಡನು ಆಪತ್ತಿಗೆ ಸಿಕ್ಕಿಬೀಳುವನು.


ಜ್ಞಾನದಿಂದ ಆಕಾಶವನ್ನು ನಿರ್ಮಿಸಿದ ಆತನೊಬ್ಬನನ್ನೇ ಸ್ತುತಿಸಿರಿ! ಆತನ ಪ್ರೀತಿ ಶಾಶ್ವತವಾದದ್ದು.


ಯೆಹೋವನೇ, ನೀನು ಅನೇಕ ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ನೀನು ಸೃಷ್ಟಿಸಿದ ವಸ್ತುಗಳಿಂದ ಭೂಮಿಯು ತುಂಬಿಹೋಗಿದೆ. ನಿನ್ನ ಪ್ರತಿಯೊಂದು ಕಾರ್ಯದಲ್ಲೂ ನಿನ್ನ ಜ್ಞಾನವನ್ನು ಕಾಣಬಲ್ಲವು.


ನಿನ್ನ ತೋಳುಗಳು ನನ್ನ ತೋಳುಗಳಂತೆ ಬಲಿಷ್ಠವಾಗಿವೆಯೋ? ನಿನ್ನ ಸ್ವರವನ್ನು ನನ್ನ ಸ್ವರದಂತೆ ಗಟ್ಟಿಯಾಗಿ ಗುಡುಗುಟ್ಟಿಸಬಲ್ಲೆಯಾ?


ಜ್ಞಾನವೂ ಶಕ್ತಿಯೂ ಆತನವೇ. ಆಲೋಚನೆಯೂ ವಿವೇಕವೂ ಆತನವೇ.


ಆತನು ನಿನಗೆ ಜ್ಞಾನದ ರಹಸ್ಯಗಳನ್ನು ತಿಳಿಸಿ ಜ್ಞಾನಕ್ಕೆ ಎರಡು ಮುಖಗಳಿವೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು. ದೇವರು ನಿನಗೆ ತಕ್ಕ ದಂಡನೆಯನ್ನು ವಿಧಿಸಿಲ್ಲವೆಂಬುದು ನಿನಗೆ ತಿಳಿದಿರಲಿ.


ಆಗ ನನಗೆ ಆದರಣೆಯಾಗುವುದು. ಮಿತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು; ಪವಿತ್ರವಾಗಿರುವಾತನ ಆಜ್ಞೆಗಳಿಗೆ ನಾನು ಅವಿಧೇಯನಾಗಲೇ ಇಲ್ಲ.


ದೇವರು ನಮ್ಮೊಂದಿಗಿದ್ದಾನೆ. ನಮ್ಮನ್ನು ಆಳುವವನು ಆತನೇ. ಅವನ ಯಾಜಕರು ನಮ್ಮೊಂದಿಗಿದ್ದಾರೆ. ದೇವರ ಯಾಜಕರು ತುತ್ತೂರಿಯನ್ನೂದಿ ನಿಮ್ಮನ್ನು ಆತನ ಬಳಿಗೆ ಬರಲು ಎಚ್ಚರಿಸುತ್ತಾರೆ. ಇಸ್ರೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಜನರೊಂದಿಗೆ ಕಾದಾಡಬೇಡಿರಿ. ನೀವು ಜಯಹೊಂದುವದಿಲ್ಲ” ಎಂದು ಹೇಳಿದನು.


ದೇವರು ತನ್ನ ಮಹಾಶಕ್ತಿಯನ್ನು ನನಗೆ ವಿರೋಧವಾಗಿ ಬಳಸುವನೇ? ಇಲ್ಲ, ಆತನು ನನಗೆ ಕಿವಿಗೊಡುವನು!


ಆದರೆ ದೇವರು ತನ್ನ ಶಕ್ತಿಯಿಂದ ಬಲಿಷ್ಠರನ್ನು ನಾಶಮಾಡುವನು; ದುಷ್ಟರು ಜೀವನದಲ್ಲಿ ಬೇರೂರಿಕೊಂಡಿದ್ದರೂ ತಮ್ಮ ಭವಿಷ್ಯತ್ತನ್ನು ತಿಳಿಯದವರಾಗಿದ್ದಾರೆ.


“ದೇವರು ಸರ್ವಾಧಿಪತಿ. ಎಲ್ಲರೂ ತನ್ನಲ್ಲಿ ಭಯಭಕ್ತಿಯುಳ್ಳವರಾಗುವಂತೆ ಆತನು ಮಾಡುತ್ತಾನೆ. ಆತನು ತನ್ನ ಪರಲೋಕರಾಜ್ಯದಲ್ಲಿ ಸಮಾಧಾನವನ್ನು ನೆಲೆಗೊಳಿಸುವನು.


“ಜ್ಞಾನದ ಮಾರ್ಗವನ್ನು ತಿಳಿದಿರುವವನು ದೇವರೊಬ್ಬನೇ. ಅದರ ವಾಸಸ್ಥಳವು ಗೊತ್ತಿರುವುದು ಆತನಿಗೊಬ್ಬನಿಗೇ.


“ಸರ್ವಶಕ್ತನಾದ ದೇವರು ಮಹೋನ್ನತನೇ ಸರಿ! ನಾವು ಆತನನ್ನು ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವಿಲ್ಲ. ದೇವರು ಮಹಾ ಬಲಿಷ್ಠನಾಗಿದ್ದರೂ ನಮಗೆ ಒಳ್ಳೆಯವನೂ ನ್ಯಾಯವಂತನೂ ಆಗಿದ್ದಾನೆ; ಆತನು ನಮ್ಮನ್ನು ಹಿಂಸಿಸಲು ಇಷ್ಟಪಡುವುದಿಲ್ಲ.


“ಯೋಬನೇ, ಮನುಷ್ಯರನ್ನು ಜ್ಞಾನಿಗಳನ್ನಾಗಿ ಮಾಡುವವರು ಯಾರು? ಅವರ ಅಂತರಾಳದಲ್ಲಿ ಜ್ಞಾನವನ್ನು ಇಡುವವರು ಯಾರು?


ಮೋಡಗಳನ್ನು ಲೆಕ್ಕಿಸಿ ಮಳೆ ಸುರಿಸಲು ಅವುಗಳನ್ನು ಮೊಗಚಿಹಾಕಿ


ಬಾಬಿಲೋನೇ, ನಾನು ನಿನಗಾಗಿ ಒಂದು ಬಲೆಯನ್ನು ಒಡ್ಡಿದೆ. ನೀನು ತಿಳಿಯದೆ ಸಿಕ್ಕಿಹಾಕಿಕೊಂಡೆ. ನೀನು ಯೆಹೋವನ ವಿರುದ್ಧ ಹೋರಾಡಿದೆ. ಆದ್ದರಿಂದ ನಿನ್ನನ್ನು ಹುಡುಕಿ ವಶಪಡಿಸಿಕೊಳ್ಳಲಾಯಿತು.


ಇಸ್ರೇಲರ ಯಾವ ಪಶುವಾದರೂ ಸತ್ತಿದೆಯೋ ಎಂದು ತಿಳಿದುಕೊಳ್ಳಲು ಫರೋಹನು ಜನರನ್ನು ಕಳುಹಿಸಿದನು. ಇಸ್ರೇಲರ ಪಶುಗಳಲ್ಲಿ ಒಂದಾದರೂ ಸತ್ತಿರಲಿಲ್ಲ. ಆದರೂ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡದ್ದರಿಂದ ಇಸ್ರೇಲರನ್ನು ಹೋಗಗೊಡಿಸಲಿಲ್ಲ.


ನೀನು ಅತ್ಯಧಿಕ ಮಹತ್ವವುಳ್ಳವನಾಗಿ, ನಿನಗೆದುರು ನಿಲ್ಲುವವರನ್ನು ನಾಶಗೊಳಿಸಿದೆ. ಬೆಂಕಿಯು ಹುಲ್ಲನ್ನು ಸುಡುವಂತೆ ನಿನ್ನ ಕೋಪವು ಅವರನ್ನು ನಾಶಮಾಡಿತು.


“ನಮ್ಮ ಪಿತೃಗಳ ದೇವರಾದ ಯೆಹೋವನೇ, ನೀನು ಪರಲೋಕದಲ್ಲಿರುವ ದೇವರು. ಲೋಕದ ಎಲ್ಲಾ ದೇಶಗಳನ್ನಾಳುವವನು ನೀನೇ. ಬಲಸಾಮರ್ಥ್ಯವುಳ್ಳವನು ನೀನೇ, ಯಾರೂ ನಿನಗೆದುರಾಗಿ ನಿಲ್ಲಲಾರರು.


ನೀನು ದೇವರ ಮೇಲೆ ಕೋಪಗೊಂಡು ನಿನ್ನ ಬಾಯಿಂದ ಅಂತಹ ಮಾತುಗಳನ್ನು ಸುರಿಸುತ್ತಿರುವೆ!


ಅದರ ಮೂಗಿನ ಮೂಲಕ ಹಗ್ಗವನ್ನಾಗಲಿ ದವಡೆಗಳ ಮೂಲಕ ಕೊಂಡಿಯನ್ನಾಗಲಿ ಹಾಕಬಲ್ಲೆಯಾ?


“ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.


ಯೆಹೋವನು ತಾಳ್ಮೆಯುಳ್ಳ ದೇವರು ಮತ್ತು ಬಲಿಷ್ಠನಾದ ದೇವರಾಗಿದ್ದಾನೆ! ಪಾಪಿಗಳನ್ನು ಆತನು ಶಿಕ್ಷಿಸುವನು. ಆತನಿಂದ ಅವರು ತಪ್ಪಿಸಿಕೊಳ್ಳಲಾರರು. ದುಷ್ಟಜನರನ್ನು ಶಿಕ್ಷಿಸಲು ಯೆಹೋವನು ಬರುವನು. ಆತನು ತನ್ನ ಸಾಮರ್ಥ್ಯವನ್ನು ಬಿರುಗಾಳಿಯಲ್ಲಿಯೂ ಸುಂಟರಗಾಳಿಯಲ್ಲಿಯೂ ತೋರ್ಪಡಿಸುವನು. ಮನುಷ್ಯನು ನೆಲದ ಧೂಳಿನ ಮೇಲೆ ನಡೆಯುತ್ತಾರೆ, ಯೆಹೋವನಾದರೋ ಮೋಡಗಳ ಮೇಲೆ ನಡೆಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು