Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:7 - ಪರಿಶುದ್ದ ಬೈಬಲ್‌

7 ಆತನು ಆಜ್ಞಾಪಿಸಿದರೆ, ಆತನ ಆಜ್ಞೆಯಂತೆಯೇ ಸೂರ್ಯೋದಯವಾಗದು. ನಕ್ಷತ್ರಗಳು ಪ್ರಕಾಶಿಸದಂತೆ ಆತನು ಅವುಗಳನ್ನು ಮುಚ್ಚಿಟ್ಟು ಮುದ್ರೆ ಹಾಕಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹುಟ್ಟಬೇಡವೆಂದು ಆತನು ಅಪ್ಪಣೆ ಕೊಟ್ಟರೆ ಸೂರ್ಯನು ಹುಟ್ಟುವುದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆತ ಆಜ್ಞೆ ಮಾಡಿದ್ದೇ ಆದರೆ ಸೂರ್ಯನು ಉದಯಿಸನು ಮುದ್ರೆ ಹಾಕಿದ್ದೇ ಆದರೆ ನಕ್ಷತ್ರವೂ ಮಿನುಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹುಟ್ಟಬೇಡವೆಂದು ಆತನು ಅಪ್ಪಣೆಕೊಟ್ಟರೆ ಸೂರ್ಯನು ಹುಟ್ಟುವದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ಸೂರ್ಯನಿಗೆ ಪ್ರಕಾಶಿಸದಂತೆ ಅಪ್ಪಣೆ ಕೊಟ್ಟರೆ, ಪ್ರಕಾಶಿಸುತ್ತಿರಲಿಲ್ಲ; ನಕ್ಷತ್ರಗಳಿಗೆ ಮುದ್ರೆ ಹಾಕಿದ್ದರೆ, ನಕ್ಷತ್ರವೂ ಮಿನುಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:7
13 ತಿಳಿವುಗಳ ಹೋಲಿಕೆ  

ಆಕಾಶವು ಕತ್ತಲಾಗುವದು; ಸೂರ್ಯ, ಚಂದ್ರ, ನಕ್ಷತ್ರಾದಿಗಳು ಪ್ರಕಾಶವನ್ನು ಕಳೆದುಕೊಳ್ಳುವವು.


ಯೆಹೋವನು ಹೀಗೆನ್ನುತ್ತಾನೆ, “ಆ ದಿವಸಗಳಲ್ಲಿ ನಡುಮಧ್ಯಾಹ್ನದಲ್ಲಿಯೇ ಸೂರ್ಯನನ್ನು ಮುಳುಗುವಂತೆ ಮಾಡುವೆನು. ಶುಭ್ರವಾದ ಹಗಲಿನಲ್ಲಿ ಕತ್ತಲು ಉಂಟಾಗುವಂತೆ ಮಾಡುವೆನು.


“ಆ ದಿನಗಳ ಸಂಕಟವು ತೀರಿದ ಕೂಡಲೇ, ‘ಸೂರ್ಯನು ಕತ್ತಲಾಗುವನು. ಚಂದ್ರನು ಕಾಂತಿಹೀನನಾಗುವನು. ನಕ್ಷತ್ರಗಳು ಆಕಾಶದಿಂದ ಕಳಚಿಬೀಳುವವು. ಆಕಾಶಮಂಡಲವು ಕಂಪಿಸುವುದು.’


ನಾನು ಯಾರು? ನಾನೇ ಪರ್ವತಗಳನ್ನು ನಿರ್ಮಿಸಿದಾತನು. ನಿಮ್ಮಲ್ಲಿ ಮನಸ್ಸನ್ನು ಉಂಟುಮಾಡಿದಾತನು ನಾನೇ. ನಾನು ಜನರಿಗೆ ಮಾತನಾಡಲು ಕಲಿಸಿದೆನು. ಕತ್ತಲೆಯನ್ನು ಬೆಳಕು ಮಾಡಿದೆನು. ಭೂಮಿಯ ಮೇಲಿರುವ ಪರ್ವತಗಳ ಮೇಲೆ ನಾನು ನಡಿಯುತ್ತೇನೆ. ನಾನು ಯಾರು? ನನ್ನ ಹೆಸರು ಸೈನ್ಯಗಳ ದೇವರಾದ ಯೆಹೋವನು.


ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!


ದೇವರು ತನ್ನ ಕಾರ್ಯವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು ಪ್ರತಿಯೊಬ್ಬರನ್ನು ಮನೆಯೊಳಗೆ ಕೂಡಿಹಾಕುತ್ತಾನೆ.


ಆ ದಿನ ಯೆಹೋವನ ಸಹಾಯದಿಂದ ಇಸ್ರೇಲರು ಅಮೋರಿಯರನ್ನು ಸೋಲಿಸಿದರು. ಅಂದು ಯೆಹೋಶುವನು ಎಲ್ಲ ಜನರ ಎದುರಿಗೆ ನಿಂತುಕೊಂಡು ಯೆಹೋವನಿಗೆ ಹೀಗೆ ಮೊರೆಯಿಟ್ಟನು: “ಸೂರ್ಯನೇ, ಗಿಬ್ಯೋನಿನ ಆಕಾಶದಲ್ಲಿ ನಿಂತಿರು, ಚಲಿಸಬೇಡ. ಚಂದ್ರನೇ, ಅಯ್ಯಾಲೋನ್ ಕಣಿವೆಯ ಆಕಾಶದಲ್ಲಿ ನಿಂತಿರು, ಚಲಿಸಬೇಡ.”


ಆದ್ದರಿಂದ ಅವರು ಶತ್ರುಗಳನ್ನು ಸೋಲಿಸುವವರೆಗೆ ಸೂರ್ಯನೂ ಚಲಿಸಲಿಲ್ಲ, ಚಂದ್ರನೂ ಚಲಿಸಲಿಲ್ಲ. ಈ ಕಥೆಯು ಯಾಷಾರ್ ಗ್ರಂಥದಲ್ಲಿ ಬರೆಯಲ್ಪಟ್ಟಿದೆ. ಸೂರ್ಯನು ಆಕಾಶದ ಮಧ್ಯದಲ್ಲಿ ನಿಂತನು. ಅವನು ಇಡೀ ದಿನ ಚಲಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು