Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:8 - ಪರಿಶುದ್ದ ಬೈಬಲ್‌

8 ಆಕಾಶಮಂಡಲವನ್ನು ಸೃಷ್ಟಿಸಿದವನು ಆತನೇ. ಆತನು ಭೋರ್ಗರೆಯುತ್ತಿರುವ ಸಮುದ್ರದ ಮೇಲೆ ನಡೆಯಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. ಅಲ್ಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಕಾಶಮಂಡಲವನ್ನು ಹರಡಿದವನು ದೇವರೇ ಕಡಲಿನ ತರಂಗಗಳನ್ನು ಮೆಟ್ಟಿದವನು ಆತನೊಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. ಅಲ್ಲೋಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರೊಬ್ಬರೇ ಆಕಾಶಗಳನ್ನು ಹರಡಿಸುತ್ತಾರೆ; ದೇವರು ಸಮುದ್ರದ ತೆರೆಗಳ ಮೇಲೆ ನಡೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:8
22 ತಿಳಿವುಗಳ ಹೋಲಿಕೆ  

ಯೆಹೋವನು ನಿನ್ನನ್ನು ರೂಪಿಸಿದನು. ನೀನು ನಿನ್ನ ತಾಯಿಯ ಗರ್ಭದಲ್ಲಿರುವಾಗಲೇ ಆತನು ನಿನ್ನನ್ನು ರೂಪಿಸಿದನು. ಆತನು ಹೇಳುವುದೇನೆಂದರೆ, “ಯೆಹೋವನಾದ ನಾನು ಸಮಸ್ತವನ್ನೂ ಸೃಷ್ಟಿಸಿದೆನು. ಆಕಾಶಮಂಡಲವನ್ನು ಅದರ ಸ್ಥಳದಲ್ಲಿ ಇಟ್ಟೆನು; ಭೂಮಿಯನ್ನು ನನ್ನ ಮುಂದೆ ಹರಡಿದೆನು.”


ಯೆಹೋವನು ಸತ್ಯವಾದ ದೇವರು. ಆತನು ಉನ್ನತವಾದ ಆಕಾಶದಲ್ಲಿ ಕುಳಿತುಕೊಳ್ಳುವನು. ಆತನಿಗೆ ಹೋಲಿಸಿದರೆ ಜನರು ಮಿಡತೆಗಳಂತಿರುವರು. ಆತನು ಬಟ್ಟೆಯಂತೆ ಆಕಾಶಮಂಡಲವನ್ನು ಸುರುಳಿಯಾಗಿ ಸುತ್ತುವನು. ಆಕಾಶಮಂಡಲವನ್ನು ಆತನು ಎಳೆದು ಗುಡಾರದಂತೆ ಅಗಲಮಾಡಿ ಅದರಡಿಯಲ್ಲಿ ಕುಳಿತುಕೊಳ್ಳುವನು.


ಇಸ್ರೇಲಿನ ಬಗ್ಗೆ ಯೆಹೋವನ ದುಃಖದ ಸಂದೇಶ. ಯೆಹೋವನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುತ್ತಾನೆ. ಮಾನವನಲ್ಲಿ ತನ್ನ ಆತ್ಮವನ್ನಿಟ್ಟನು. ಆ ಬಳಿಕ ಆತನು ಹೇಳಿದ್ದೇನೆಂದರೆ,


ಯೋಬನೇ, ಆಕಾಶಮಂಡಲವನ್ನು ಹರಡುವುದಕ್ಕಾಗಲಿ ಅದಕ್ಕೆ ಕಂಚಿನ ದರ್ಪಣದಂತೆ ಮೆರಗು ನೀಡುವುದಕ್ಕಾಗಲಿ ನೀನು ದೇವರಿಗೆ ಸಹಾಯಮಾಡಬಲ್ಲೆಯಾ?


ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’”


ಯೆಹೋವನು ಆಜ್ಞಾಪಿಸಲು ಆಕಾಶವು ಸೃಷ್ಟಿಯಾಯಿತು! ಆತನ ಉಸಿರು ಭೂಮಿಯ ಮೇಲಿರುವ ಸಮಸ್ತವನ್ನು ಸೃಷ್ಟಿಸಿತು.


ಅವರು ಹುಟ್ಟುಹಾಕುತ್ತಾ ಸುಮಾರು ಮೂರು ಅಥವಾ ನಾಲ್ಕು ಮೈಲಿಗಳವರೆಗೆ ದೋಣಿಯನ್ನು ನಡೆಸಿದ ನಂತರ ಯೇಸುವನ್ನು ಕಂಡರು. ಆತನು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುತ್ತಿರುವುದನ್ನು ಕಂಡು ಅವರಿಗೆ ಭಯವಾಯಿತು.


ನಿಜದೇವರಾದ ಯೆಹೋವನು ಹೀಗೆನ್ನುತ್ತಾನೆ: ಆಕಾಶವನ್ನು ನಿರ್ಮಿಸಿ ಅದನ್ನು ಭೂಮಿಯ ಮೇಲೆ ಹರಡಿದಾತನು ಯೆಹೋವನೇ. ಭೂಮಿಯ ಮೇಲಿರುವದನ್ನೆಲ್ಲಾ ಸೃಷ್ಟಿಸಿದಾತನು ಯೆಹೋವನೇ. ಭೂಮಿಯ ಮೇಲಿರುವ ಮನುಷ್ಯರಿಗೆಲ್ಲಾ ಜೀವಶ್ವಾಸವನ್ನು ಕೊಟ್ಟವನು ಆತನೇ. ಭೂಮಿಯ ಮೇಲೆ ನಡೆಯುವ ಪ್ರತಿಯೊಬ್ಬನಿಗೂ ಪ್ರಾಣವನ್ನು ಕೊಟ್ಟವನು ಆತನೇ.


“ಯೋಬನೇ, ಸಮುದ್ರವು ಆರಂಭವಾಗುವ ಅತ್ಯಂತ ಆಳವಾದ ಭಾಗಗಳಿಗೆ ನೀನು ಎಂದಾದರೂ ಹೋಗಿರುವಿಯಾ? ಸಾಗರದ ತಳದ ಮೇಲೆ ನೀನು ಎಂದಾದರೂ ನಡೆದಿರುವಿಯಾ?


ನಾನು ಸಮುದ್ರಕ್ಕೆ, ‘ನೀನು ಇಲ್ಲಿಯವರೆಗೆ ಬರಬಹುದು, ಆದರೆ ಇದಕ್ಕಿಂತ ಹೆಚ್ಚಿಗೆ ಬರಕೂಡದು. ನಿನ್ನ ಹೆಮ್ಮೆಯ ಅಲೆಗಳು ಇಲ್ಲೇ ನಿಲ್ಲಬೇಕು’ ಎಂದು ಅಪ್ಪಣೆಕೊಟ್ಟೆನು.


ನೀನು ಸಮುದ್ರದಲ್ಲಿ ಮಾರ್ಗಮಾಡಿದೆ; ಆಳವಾದ ಜಲರಾಶಿಗಳನ್ನು ದಾಟಿದೆ. ಆದರೆ ನಿನ್ನ ಹೆಜ್ಜೆಯ ಗುರುತು ಕಾಣಲೇ ಇಲ್ಲ.


ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.


ದೇವರು ಶೂನ್ಯದ ಮೇಲೆ ಉತ್ತರದಿಕ್ಕಿನ ಆಕಾಶವನ್ನು ವಿಸ್ತರಿಸಿದನು. ಆತನು ಭೂಮಿಯನ್ನು ಯಾವ ಆಧಾರವೂ ಇಲ್ಲದೆ ತೂಗುಹಾಕಿದ್ದಾನೆ.


ಆತನ ಉಸಿರು ಆಕಾಶಮಂಡಲವನ್ನು ಶುಭ್ರಗೊಳಿಸುವುದು. ಆತನ ಜ್ಞಾನವು ಓಡಿಹೋಗಲು ಪ್ರಯತ್ನಿಸಿದ ರಹಬನನ್ನು ನಾಶಮಾಡುವುದು.


ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.


ದೇವರು ತನ್ನ ಶಕ್ತಿಯಿಂದ ಭೂಲೋಕವನ್ನು ಸೃಷ್ಟಿಸಿದನು. ದೇವರು ತನ್ನ ಜ್ಞಾನದಿಂದ ಈ ಜಗತ್ತನ್ನು ನಿರ್ಮಿಸಿದನು. ತನ್ನ ವಿವೇಕದಿಂದ ದೇವರು ಈ ಭೂಮಂಡಲದ ಮೇಲೆ ಆಕಾಶವನ್ನು ಹೊದಿಸಿದ್ದಾನೆ.


ಯೆಹೋವನು ತನ್ನ ಅಪಾರ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದನು. ತನ್ನ ಜ್ಞಾನದಿಂದ ಈ ಲೋಕವನ್ನು ನಿರ್ಮಿಸಿದನು. ತನ್ನ ವಿವೇಕದಿಂದ ಆಕಾಶವನ್ನು ಹರಡಿದನು.


ಯಾಕೆಂದರೆ ಜನಾಂಗಗಳಲ್ಲಿರುವ ಬೇರೆ ದೇವರುಗಳೆಲ್ಲಾ ಜಡಮೂರ್ತಿಗಳೇ. ಯೆಹೋವನಾದರೋ ಆಕಾಶಮಂಡಲವನ್ನು ಸೃಷ್ಟಿಸಿದಾತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು