Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:10 - ಪರಿಶುದ್ದ ಬೈಬಲ್‌

10 ಹೊಲಗದ್ದೆಗಳೆಲ್ಲಾ ನಾಶವಾದವು. ಭೂಮಿಯೂ ಗೋಳಾಡುತ್ತಿರುವುದು. ಯಾಕೆಂದರೆ ಧಾನ್ಯವು ನಾಶವಾದವು. ಹೊಸ ದ್ರಾಕ್ಷಾರಸವು ಬತ್ತಿಹೋಯಿತು. ಎಣ್ಣೆಯು ಇಲ್ಲದೆಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬೆಳೆ ಬೆಳೆಯುವ ಹೊಲವು ಹಾಳಾಗಿದೆ, ನೆಲವು ದುಃಖದಲ್ಲಿ ಮುಳುಗಿದೆ. ಏಕೆಂದರೆ ಧಾನ್ಯವು ನಾಶವಾಗಿದೆ, ಹೊಸ ದ್ರಾಕ್ಷಾರಸವು ಒಣಗಿದೆ, ಎಣ್ಣೆಯು ಕೆಟ್ಟುಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೊಲಗದ್ದೆಗಳು ಹಾಳಾಗಿವೆ; ಧರೆ ದುಃಖಿಸುತ್ತಿದೆ; ಬಿತ್ತಿದ ದವಸಧಾನ್ಯ ಮಣ್ಣುಪಾಲಾಗಿದೆ; ದ್ರಾಕ್ಷಿಹಣ್ಣು ಒಣಗಿಹೋಗಿದೆ; ಎಣ್ಣೆ ಮರಗಳು ಬಾಡಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೊಲವು ಹಾಳಾಗಿದೆ, ದೇಶವು ದುಃಖಿಸುತ್ತದೆ, ಏಕಂದರೆ ಧಾನ್ಯವು ಸೂರೆಯಾಗಿದೆ, ದ್ರಾಕ್ಷಾರಸವು ತಗ್ಗಿದೆ, ಎಣ್ಣೆಯು ಕುಗ್ಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೊಲವು ಹಾಳಾಗಿದೆ; ಭೂಮಿಯು ಒಣಗಿದೆ, ಧಾನ್ಯವು ನಾಶವಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ತೀರಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:10
19 ತಿಳಿವುಗಳ ಹೋಲಿಕೆ  

ಹೀಗೆ ದೇಶವು ಸತ್ತವರಿಗಾಗಿ ಗೋಳಾಡುವ ಮನುಷ್ಯನಂತಿರುವದು. ಆದ್ದರಿಂದ ಅದರ ಜನರೆಲ್ಲಾ ಬಲಹೀನರಾಗತ್ತಾರೆ. ಅಡವಿಯಲ್ಲಿರುವ ಪ್ರಾಣಿಗಳೂ ಆಕಾಶದ ಪಕ್ಷಿಗಳೂ ಸಮುದ್ರದಲ್ಲಿರುವ ಮೀನುಗಳೂ ಸಾಯುತ್ತಿವೆ.


ಆದರೆ ಆ ಕಣದಲ್ಲಿ ತೂರಿದ ಧಾನ್ಯವು ಇಸ್ರೇಲಿಗೆ ಸಾಕಾಗುವಷ್ಟು ಆಹಾರವನ್ನು ಒದಗಿಸದು. ಇಸ್ರೇಲಿಗೆ ಬೇಕಾಗುವಷ್ಟು ದ್ರಾಕ್ಷಾರಸವಿರದು.


ಹೌದು, ಮರಳುಭೂಮಿಯನ್ನಾಗಿ ಮಾಡಿದ್ದಾರೆ. ಅದು ಒಣಗಿಹೋಗಿ ನಿಸ್ಸತ್ವವಾಗಿದೆ. ಅಲ್ಲಿ ಯಾರೂ ವಾಸಿಸುವದಿಲ್ಲ. ಇಡೀ ದೇಶವೇ ಬರಿದಾದ ಮರಳುಗಾಡಾಗಿದೆ. ಆ ತೋಟವನ್ನು ನೋಡಿಕೊಳ್ಳುವದಕ್ಕೆ ಯಾರೂ ಉಳಿದಿಲ್ಲ.


ಅಮಲೇರಿದವರೇ, ಎಚ್ಚರಗೊಂಡು ಅಳಿರಿ. ದ್ರಾಕ್ಷಾರಸವನ್ನು ಕುಡಿಯುವವರೇ, ಅಳಿರಿ. ಯಾಕೆಂದರೆ ನಿಮ್ಮ ಸಿಹಿಯಾದ ದ್ರಾಕ್ಷಾರಸವು ಮುಗಿದುಹೋಯಿತು. ಆ ದ್ರಾಕ್ಷಾರಸದ ಸವಿಯು ನಿಮಗೆ ಇನ್ನು ಸಿಗದು.


ಯೆಹೋವನು ಹೇಳುವುದೇನೆಂದರೆ, “ನಾನು ಭೂಮಿಗೂ ಪರ್ವತಗಳಿಗೂ ಒಣಗಿಹೋಗಲು ಆಜ್ಞಾಪಿಸಿದ್ದೇನೆ. ಬೆಳೆ, ಹೊಸ ದ್ರಾಕ್ಷಾರಸ, ಆಲೀವ್ ಎಣ್ಣೆ ಮತ್ತು ಭೂಮಿಯು ಫಲಿಸುವ ಯಾವ ವಸ್ತುವಾಗಲಿ ನಾಶವಾಗುವುದು. ಮತ್ತು ಎಲ್ಲಾ ಮನುಷ್ಯರೂ ಬಲಹೀನರಾಗುವರು; ಪ್ರಾಣಿಗಳೂ ಬಲಹೀನವಾಗುವವು.”


ದ್ರಾಕ್ಷಿಬಳ್ಳಿಗಳು ಒಣಗಿಹೋಗಿವೆ ಮತ್ತು ಅಂಜೂರದ ಮರವು ಸಾಯುತ್ತಲಿದೆ. ದಾಳಿಂಬದ ಮರ, ಖರ್ಜೂರದ ಮರ, ಸೇಬಿನ ಮರ, ತೋಟದಲ್ಲಿರುವ ಎಲ್ಲಾ ಮರಗಳು ಒಣಗಿಹೋಗಿವೆ. ಜನರಲ್ಲಿರುವ ಸಂತೋಷವೂ ಬತ್ತಿಹೋಗಿದೆ.


ಮೋವಾಬಿನ ದೊಡ್ಡದೊಡ್ಡ ದ್ರಾಕ್ಷಿತೋಟಗಳಿಂದ ಹರ್ಷವೂ ಆನಂದವೂ ಕಣ್ಮರೆಯಾಗಿವೆ. ದ್ರಾಕ್ಷಿಗಾಣದಿಂದ ದ್ರಾಕ್ಷಾರಸ ಹರಿಯುವದನ್ನು ನಾನು ನಿಲ್ಲಿಸಿದ್ದೇನೆ. ದ್ರಾಕ್ಷಾರಸವನ್ನು ಮಾಡಲು ದ್ರಾಕ್ಷಿಯನ್ನು ತುಳಿಯುವ ಜನರ ಹಾಡು ಮತ್ತು ನೃತ್ಯ ಕಂಡುಬರುವದಿಲ್ಲ. ಸಂತೋಷದ ಧ್ವನಿ ಕೇಳಿಬರುತ್ತಿಲ್ಲ.


ಎಷ್ಟು ಕಾಲದವರೆಗೆ ಭೂಮಿಯು ಒಣಗಿರಬೇಕು? ಎಷ್ಟು ಕಾಲದವರೆಗೆ ಹುಲ್ಲು ಒಣಗಿ ನಿರ್ಜೀವವಾಗಿರಬೇಕು? ದೇಶದಲ್ಲಿ ಪಶುಪಕ್ಷಿಗಳು ಸತ್ತುಹೋಗಿವೆ. ಇದು ದುಷ್ಟರ ತಪ್ಪಾದರೂ ಆ ದುಷ್ಟರು, “ನಮಗೆ ಏನಾಗುವದೆಂದು ನೋಡಲು ಯೆರೆಮೀಯನು ಬಹಳ ದಿವಸ ಬದುಕಿರಲಾರ” ಎಂದು ಹೇಳುತ್ತಿದ್ದಾರೆ.


ಮಾರುಕಟ್ಟೆಗಳಲ್ಲಿ ಜನರು ಈಗಲೂ ದ್ರಾಕ್ಷಾರಸವನ್ನು ಕೇಳುವರು. ಆದರೆ ಸಂತೋಷವೇ ಹೋಗಿಬಿಟ್ಟಿದೆ. ಹರ್ಷವು ಬಹುದೂರ ಒಯ್ಯಲ್ಪಟ್ಟಿದೆ.


ನೀವು ಕಷ್ಟಪಟ್ಟು ದುಡಿದರೂ ನಿಮಗೆ ಪ್ರಯೋಜನವಿರುವುದಿಲ್ಲ. ನಿಮ್ಮ ಭೂಮಿ ಯಾವ ಬೆಳೆಗಳನ್ನೂ ಫಲಿಸುವುದಿಲ್ಲ; ನಿಮ್ಮ ಮರಗಳೂ ಫಲಗಳನ್ನು ಬಿಡುವುದಿಲ್ಲ.


ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.


ಆದರೆ ನಿಮ್ರೀಮ್ ಹಳ್ಳವು ಒಣಗಿಹೋಗಿ ಮರುಭೂಮಿಗೆ ಸಮಾನವಾಗಿದೆ. ಹಸಿಹುಲ್ಲುಗಳೆಲ್ಲಾ ಬಾಡಿವೆ; ಸಸಿಗಳೆಲ್ಲಾ ಸತ್ತಿವೆ; ಎಲ್ಲಿಯೂ ಹಸಿರು ಕಾಣಿಸುವದಿಲ್ಲ.


ದ್ರಾಕ್ಷಿಬಳ್ಳಿಗಳು ಸಾಯುತ್ತಲಿವೆ. ಹೊಸ ದ್ರಾಕ್ಷಾರಸವು ಹುಳಿಯಾಗಿದೆ. ಹಿಂದಿನ ಕಾಲದಲ್ಲಿ ಜನರು ಹರ್ಷಭರಿತರಾಗಿದ್ದರು. ಆದರೆ ಈಗ ಆ ಜನರು ದುಃಖದಲ್ಲಿರುತ್ತಾರೆ.


ಯೆಹೋವನು ತನ್ನ ಜನರೊಂದಿಗೆ ಮಾತನಾಡಿ ಹೀಗೆ ಹೇಳಿದನು: “ನಾನು ನಿಮಗೆ ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕಳುಹಿಸುವೆನು. ನಿಮಗೆ ಬೇಕಾದಷ್ಟು ಇರುವದು. ಅನ್ಯ ಜನಾಂಗದವರೆದುರು ನಿಮ್ಮನ್ನು ಇನ್ನು ಮುಂದೆ ನಾಚಿಕೆಗೆ ಗುರಿಪಡಿಸುವುದಿಲ್ಲ.


ಅಂಜೂರದ ಮರಗಳಲ್ಲಿ ಅಂಜೂರದ ಹಣ್ಣು ಬೆಳೆಯದಿದ್ದರೂ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳು ಬೆಳೆಯದಿದ್ದರೂ ಎಣ್ಣೆಮರಗಳಲ್ಲಿ ಆಲೀವ್ ಕಾಯಿಗಳು ಬೆಳೆಯದಿದ್ದರೂ ಹೊಲದಲ್ಲಿ ಪೈರು ಬೆಳೆಯದಿದ್ದರೂ ಹಟ್ಟಿಯಲ್ಲಿ ಯಾವ ಕುರಿಗಳು ಇಲ್ಲದಿದ್ದರೂ ಕೊಟ್ಟಿಗೆಯೊಳಗೆ ಯಾವ ಪಶುಗಳು ಇಲ್ಲದಿದ್ದರೂ


“ನಿಮ್ಮ ಸಂತತಿಯವರನ್ನು ನಾನು ಶಿಕ್ಷಿಸುವೆನು. ಹಬ್ಬದ ದಿವಸಗಳಲ್ಲಿ ಯಾಜಕರೇ, ನೀವು ನನಗೆ ಯಜ್ಞಗಳನ್ನರ್ಪಿಸುತ್ತೀರಿ. ಪಶುವನ್ನು ಕೊಯಿದ ಬಳಿಕ ಅದರ ಒಳಗಿನ ಭಾಗಗಳನ್ನೂ ಅದರ ಮಲವನ್ನು ನಿಮ್ಮ ಮುಖಗಳಿಗೆ ಹಚ್ಚುವೆನು ಮತ್ತು ನೀವು ಅದರೊಂದಿಗೆ ಹೊರಗೆ ಬಿಸಾಡಲ್ಪಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು