ಯೋಯೇಲ 1:12 - ಪರಿಶುದ್ದ ಬೈಬಲ್12 ದ್ರಾಕ್ಷಿಬಳ್ಳಿಗಳು ಒಣಗಿಹೋಗಿವೆ ಮತ್ತು ಅಂಜೂರದ ಮರವು ಸಾಯುತ್ತಲಿದೆ. ದಾಳಿಂಬದ ಮರ, ಖರ್ಜೂರದ ಮರ, ಸೇಬಿನ ಮರ, ತೋಟದಲ್ಲಿರುವ ಎಲ್ಲಾ ಮರಗಳು ಒಣಗಿಹೋಗಿವೆ. ಜನರಲ್ಲಿರುವ ಸಂತೋಷವೂ ಬತ್ತಿಹೋಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದ್ರಾಕ್ಷಾಲತೆಯು ಆಶಾಭಂಗಪಟ್ಟಿದೆ; ಅಂಜೂರದ ಗಿಡವು ಕ್ಷೀಣವಾಗಿದೆ; ದಾಳಿಂಬ, ಖರ್ಜೂರ, ಸೇಬು, ಅಂತು ಸಕಲ ವನವೃಕ್ಷಗಳು ಒಣಗಿವೆ, ಆನಂದವು ತಗ್ಗಿ ನರಜನ್ಮದವರಿಗೆ ತಪ್ಪಿಹೋಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿ ಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ. ಅಧ್ಯಾಯವನ್ನು ನೋಡಿ |