Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:13 - ಪರಿಶುದ್ದ ಬೈಬಲ್‌

13 ಯಾಜಕರೇ, ನೀವು ನಿಮ್ಮ ಶೋಕವಸ್ತ್ರವನ್ನು ಧರಿಸಿ ಗಟ್ಟಿಯಾಗಿ ರೋಧಿಸಿರಿ. ವೇದಿಕೆಯಲ್ಲಿ ಸೇವೆಮಾಡುವವರೇ, ಗಟ್ಟಿಯಾಗಿ ರೋಧಿಸಿರಿ. ನನ್ನ ದೇವರ ಸೇವಕರೇ, ನೀವು ನಿಮ್ಮ ಶೋಕವಸ್ತ್ರಗಳಲ್ಲಿಯೇ ನಿದ್ರೆಮಾಡಿರಿ. ಯಾಕೆಂದರೆ ಇನ್ನು ದೇವಾಲಯದಲ್ಲಿ ಧಾನ್ಯ ಮತ್ತು ಪಾನಸಮರ್ಪಣೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಮೊರೆಯಿಡಿರಿ; ಯಜ್ಞವೇದಿಯ ಸೇವಕರೇ, ಗೋಳಾಡಿರಿ; ನನ್ನ ದೇವರ ದಾಸರೇ, ಬನ್ನಿರಿ, ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದಿರ್ರಿ; ಧಾನ್ಯಪಾನನೈವೇದ್ಯಗಳು ನಿಮ್ಮ ದೇವರ ಆಲಯಕ್ಕೆ ಒದಗವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:13
27 ತಿಳಿವುಗಳ ಹೋಲಿಕೆ  

ಆದ್ದರಿಂದ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ದೊಡ್ಡ ಧ್ವನಿಯಿಂದ ಗೋಳಾಡಿರಿ. ಏಕೆಂದರೆ ಯೆಹೋವನು ನಮ್ಮ ಮೇಲೆ ತುಂಬ ಕೋಪಗೊಂಡಿದ್ದಾನೆ.


ಯೆಹೋವನ ಸೇವಕರಾದ ಯಾಜಕರು ಮಂಟಪಕ್ಕೂ ವೇದಿಕೆಗೂ ಮಧ್ಯದಲ್ಲಿ ಗೋಳಾಡಲಿ. ಆ ಜನರೆಲ್ಲಾ ಹೀಗೆ ಹೇಳಬೇಕು, “ಯೆಹೋವನೇ, ನಿನ್ನ ಜನರ ಮೇಲೆ ಕರುಣೆ ಇಡು, ನಿನ್ನ ಜನರನ್ನು ನಾಚಿಕೆಗೆ ತುತ್ತಾಗುವಂತೆ ಮಾಡಬೇಡ. ನಿನ್ನ ಜನರ ವಿಷಯವಾಗಿ ಅನ್ಯಜನರು ಗೇಲಿ ಮಾಡದಿರಲಿ. ಇತರ ದೇಶದ ಜನರು ನಮಗೆ ಹಾಸ್ಯ ಮಾಡುತ್ತಾ, ‘ಅವರ ದೇವರು ಎಲ್ಲಿ?’ ಎಂದು ಹೇಳದ ಹಾಗೆ ಮಾಡು.”


ಅವರು ಶೋಕಬಟ್ಟೆಗಳನ್ನು ಧರಿಸಿ ಭಯಗ್ರಸ್ತರಾಗುವರು. ಪ್ರತೀ ಮುಖದಲ್ಲಿ ನಾಚಿಕೆಯು ಕಾಣಿಸುವುದು. ತಮ್ಮ ದುಃಖವನ್ನು ಪ್ರದರ್ಶಿಸಲು ತಮ್ಮ ತಲೆಗಳನ್ನು ಬೋಳಿಸುವರು.


ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.


ಎಲೀಯನು ಮಾತನಾಡಿದ ನಂತರ ಅಹಾಬನು ಬಹಳ ಶೋಕತಪ್ತನಾದನು. ಅವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡನು. ಅವನು ಊಟಮಾಡದೆ ಹಾಗೆಯೇ ಮಲಗಿಕೊಂಡನು; ದುಃಖದಿಂದ ತಳಮಳಗೊಂಡನು.


ಅವರು ಕ್ರಿಸ್ತನ ಸೇವೆಮಾಡುತ್ತಿದ್ದಾರೋ? ನಾನು ಸಹ ಅವರಿಗಿಂತಲೂ ಹೆಚ್ಚಾಗಿ ಸೇವೆಮಾಡುತ್ತಿದ್ದೇನೆ. (ನಾನು ಹುಚ್ಚನಂತೆ ಹೀಗೆ ಮಾತಾಡುತ್ತಿದ್ದೇನೆ.) ನಾನು ಅವರಿಗಿಂತಲೂ ಹೆಚ್ಚು ಕಷ್ಟಪಟ್ಟು ದುಡಿದಿದ್ದೇನೆ; ಹೆಚ್ಚು ಸಲ ಸೆರೆಮನೆಯಲ್ಲಿದ್ದೆನು. ಹೆಚ್ಚು ಏಟುಗಳನ್ನು ತಿಂದಿದ್ದೇನೆ, ನಾನು ಅನೇಕ ಸಲ ಮರಣದ ಸಮೀಪದಲ್ಲಿದ್ದೆನು.


ಆದರೆ ಪ್ರತಿಯೊಂದು ವಿಷಯದಲ್ಲಿಯೂ ನಾವು ದೇವರ ಸೇವಕರೆಂಬುದನ್ನು ತೋರ್ಪಡಿಸುತ್ತೇವೆ. ನಾವು ಸಂಕಟಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ


ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ದೇವರೇ ನಮಗೆ ಕೊಟ್ಟನು. ಈ ಹೊಸ ಒಡಂಬಡಿಕೆಯು ಲಿಖಿತ ರೂಪವಾದ ಧರ್ಮಶಾಸ್ತ್ರವಲ್ಲ. ಇದು ಪವಿತ್ರಾತ್ಮನದು. ಲಿಖಿತ ರೂಪವಾದ ಧರ್ಮಶಾಸ್ತ್ರವು ಮರಣವನ್ನು ತರುತ್ತದೆ, ಆದರೆ ಪವಿತ್ರಾತ್ಮನು ಜೀವವನ್ನು ಕೊಡುತ್ತಾನೆ.


ದೇವಾಲಯದಲ್ಲಿ ಸೇವೆಮಾಡುವ ಜನರು ದೇವಾಲಯದಿಂದಲೇ ತಮ್ಮ ಆಹಾರವನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಯಜ್ಞವೇದಿಕೆಯ ಬಳಿ ಸೇವೆ ಮಾಡುವವರು ಯಜ್ಞವೇದಿಕೆಯ ಮೇಲೆ ಅರ್ಪಿತವಾದದ್ದರಲ್ಲಿ ಸ್ವಲ್ಪಭಾಗವನ್ನು ಪಡೆದುಕೊಳ್ಳುವರು.


ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರು ತನ್ನ ರಹಸ್ಯವಾದ ಸತ್ಯಗಳನ್ನು ನಮಗೆ ವಹಿಸಿಕೊಟ್ಟಿದ್ದಾನೆಂತಲೂ ಎಣಿಸಬೇಕು.


ಆಗ ನಿಮ್ಮನ್ನು “ಯೆಹೋವನ ಯಾಜಕರು” ಎಂತಲೂ “ದೇವರ ಸಹಾಯಕರು” ಎಂತಲೂ ಕರೆಯುವರು. ಭೂಲೋಕದ ಎಲ್ಲಾ ದೇಶಗಳ ಐಶ್ವರ್ಯವು ನಿಮ್ಮ ಕೈಸೇರುವುದರಿಂದ ನೀವು ಹೆಚ್ಚಳಪಡುವಿರಿ.


ದಾವೀದನು ಮಗುವಿಗಾಗಿ ದೇವರಲ್ಲಿ ಪ್ರಾರ್ಥಿಸಿದನು. ಅವನು ಉಪವಾಸ ಮಾಡಿದನು. ಅವನು ತನ್ನ ಮನೆಯೊಳಗೇ ಇದ್ದನು. ಅವನು ರಾತ್ರಿಯೆಲ್ಲ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.


ಅಮಾವಾಸ್ಯೆಯಲ್ಲಿ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆ ಇವುಗಳಲ್ಲದೆ ಈ ಅರ್ಪಣೆಗಳನ್ನು ಅರ್ಪಿಸಬೇಕು. ಇವುಗಳನ್ನು ನಿಯಮಗಳ ಪ್ರಕಾರವಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇವೆ.


ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.”


ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರಗಳನ್ನು ಧರಿಸುವರು.


“‘ಬೊಬ್ಬೆಹಾಕು, ಕಿರುಚು, ಓ ನರಪುತ್ರನೇ, ಯಾಕೆಂದರೆ ಖಡ್ಗವು ನನ್ನ ಜನರ ಮೇಲೆ ಮತ್ತು ಇಸ್ರೇಲಿನ ಎಲ್ಲಾ ಅಧಿಪತಿಗಳ ಮೇಲೆ ಉಪಯೋಗಿಸಲ್ಪಡುವುದು. ಇಸ್ರೇಲನ್ನು ಆಳುವವರಿಗೆ ಯುದ್ಧವು ಬೇಕು. ಆಗ ಅವರು ಖಡ್ಗವು ಬಂದಾಗ ನನ್ನ ಜನರೊಂದಿಗೆ ಇರಬಹುದು. ಆದ್ದರಿಂದ ನಿನ್ನ ತೊಡೆಗೆ ಬಡಿದು ಗಟ್ಟಿಯಾದ ಸ್ವರದಿಂದ ನಿನ್ನ ದುಃಖವನ್ನು ಪ್ರದರ್ಶಿಸು.


ಯೆಹೋವನ ಹಬ್ಬಗಳನ್ನಾಗಲಿ ವಿಶ್ರಾಂತಿ ದಿನವನ್ನಾಗಲಿ ಅವರಿಗೆ ಆಚರಿಸಲಾಗದು.


ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನಸಮರ್ಪಣೆ ಮಾಡುವಿರಿ.


ನೀವು ಒಂದು ಕುರಿಮರಿಯನ್ನು ಹೊತ್ತಾರೆಯಲ್ಲಿಯೂ ಇನ್ನೊಂದನ್ನು ನಸುಸಂಜೆಯಲ್ಲಿಯೂ ಅರ್ಪಿಸಬೇಕು.


ಪ್ರತಿಯೊಂದು ಕುರಿಮರಿಯೊಂದಿಗೆ ಒಂದೂವರೆ ಸೇರು ದ್ರಾಕ್ಷಾರಸವನ್ನು ಪಾನದ್ರವ್ಯದ ಕಾಣಿಕೆಯಾಗಿ ಅರ್ಪಿಸಬೇಕು. ಯೆಹೋವನಿಗೆ ಪಾನದ್ರವ್ಯವಾಗಿ ಅರ್ಪಿಸತಕ್ಕ ದ್ರಾಕ್ಷಾರಸವನ್ನು ಪವಿತ್ರಸ್ಥಳದಲ್ಲಿ ಸುರಿಯಿರಿ.


ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆಗಳನ್ನು ಮಾಡಬೇಕು. ಅವು ಯಾವುವೆಂದರೆ: ಒಂದು ಹೋರಿಯೊಡನೆ ಮೂರು ಸೇರು ದ್ರಾಕ್ಷಾರಸವನ್ನೂ ಟಗರಿನೊಡನೆ ಎರಡು ಸೇರು ದ್ರಾಕ್ಷಾರಸವನ್ನೂ ಕುರಿಮರಿಯೊಡನೆ ಒಂದೂವರೆ ಸೇರು ದ್ರಾಕ್ಷಾರಸವನ್ನೂ ಅರ್ಪಿಸಬೇಕು. ವರ್ಷದ ಪ್ರತಿತಿಂಗಳು ಅಮಾವಾಸ್ಯೆಯಲ್ಲಿ ಅರ್ಪಿಸತಕ್ಕ ಮಾಸಿಕ ಸರ್ವಾಂಗಹೋಮಗಳು ಇವುಗಳೇ.


ನಿನಗಾಗಿ ಶೋಕದಿಂದ ತಮ್ಮ ತಲೆಗಳನ್ನು ಬೋಳಿಸುವರು. ಶೋಕದ ಬಟ್ಟೆಗಳನ್ನು ಧರಿಸುವರು. ತಮ್ಮ ಪ್ರಿಯರು ಸತ್ತಾಗ ಅಳುವಂತೆ ನಿನಗಾಗಿ ಅಳುವರು.


ಇದು ಯೆಹೋವನ ಸಂದೇಶ: “ನಿಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಬನ್ನಿರಿ, ನೀವು ದುಷ್ಟತ್ವವನ್ನು ನಡಿಸಿರುವದರಿಂದ ದುಃಖಿಸಿರಿ, ಅಳಿರಿ, ಉಪವಾಸ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು