ಯೋಯೇಲ 1:15 - ಪರಿಶುದ್ದ ಬೈಬಲ್15 ಶೋಕಿಸಿರಿ. ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರಸ್ವಾಮಿಯ ದಿನ ಸಮೀಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೋವನ ದಿನವು ಸಮೀಪಿಸಿತು; ಅಯ್ಯೋ, ದಿನವೇ! ಅದು ಸರ್ವಶಕ್ತನಿಂದ ನಾಶನದಿನವಾಗಿಯೇ ಬರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆ ದಿನ ಭಯಂಕರವಾದದ್ದು! ಏಕೆಂದರೆ ಯೆಹೋವ ದೇವರ ದಿವಸವು ಸಮೀಪವಾಗಿದೆ. ಸರ್ವಶಕ್ತರ ಕಡೆಯಿಂದ ಇದು ನಾಶವಾದಂತೆ ಬರುವುದು. ಅಧ್ಯಾಯವನ್ನು ನೋಡಿ |
“ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.