Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:2 - ಪರಿಶುದ್ದ ಬೈಬಲ್‌

2 ನಾಯಕರೇ, ಈ ಸಂದೇಶಕ್ಕೆ ಕಿವಿಗೊಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರೇ, ನನ್ನ ಮಾತುಗಳನ್ನು ಆಲೈಸಿರಿ. ನಿಮ್ಮ ಜೀವಮಾನಕಾಲದಲ್ಲಿ ಇಂಥಾ ಸಂಗತಿ ಎಂದಾದರೂ ಸಂಭವಿಸಿದೆಯೋ? ಇಲ್ಲ! ನಿಮ್ಮ ತಂದೆಗಳ ಕಾಲದಲ್ಲಿಯಾದರೂ ಇಂಥಾ ಸಂಗತಿಗಳು ಸಂಭವಿಸಿದೆಯೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ವೃದ್ಧರೇ, ಇದನ್ನು ಕೇಳಿರಿ, ದೇಶದ ನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ. ಇಂಥ ಬಾಧೆಯು ನಿಮ್ಮ ಕಾಲದಲ್ಲಾಗಲಿ ನಿಮ್ಮ ಪೂರ್ವಿಕರ ಕಾಲದಲ್ಲಿಯಾಗಲಿ ಸಂಭವಿಸಿತ್ತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ವೃದ್ಧರೇ ಕೇಳಿ: ನಾಡಿನ ನಿವಾಸಿಗಳೇ ಕಿವಿಗೊಡಿ. ನಿಮ್ಮ ಕಾಲದಲ್ಲಾಗಲೀ ನಿಮ್ಮ ಪೂರ್ವಿಕರ ಕಾಲದಲ್ಲಾಗಲೀ, ಇಂಥ ದುರ್ಘಟನೆ ಸಂಭವಿಸಿದ್ದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ವೃದ್ಧರೇ, ಕೇಳಿರಿ! ದೇಶನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ! ಇಂಥ ಬಾಧೆಯು ನಿಮ್ಮ ಕಾಲದಲ್ಲಿಯಾಗಲಿ ನಿಮ್ಮ ತಂದೆಗಳ ಕಾಲದಲ್ಲಿಯಾಗಲಿ ಸಂಭವಿಸಿತ್ತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹಿರಿಯರೇ, ಇದನ್ನು ಕೇಳಿರಿ: ದೇಶದ ನಿವಾಸಿಗಳೇ, ಕಿವಿಗೊಡಿರಿ. ಇಂಥ ದುರ್ಘಟನೆಯು ನಿಮ್ಮ ದಿವಸಗಳಲ್ಲಾದರೂ ನಿಮ್ಮ ಪೂರ್ವಿಕರ ದಿವಸಗಳಲ್ಲಾದರೂ ಉಂಟಾಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:2
24 ತಿಳಿವುಗಳ ಹೋಲಿಕೆ  

ಆ ದಿನವು ಕರಾಳ ದಿನ. ಮೋಡದಿಂದ ತುಂಬಿದ ದಿನವಾಗಿದೆ. ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀವು ನೋಡುವಿರಿ. ಅದು ಬಲಿಷ್ಠವಾದ ಮಹಾಸೈನ್ಯ. ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.


“ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ.


“ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ. ಇದು ಬಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಬ್ ಇದರಿಂದ ಪಾರಾಗುವುದು.”


“ಪೂರ್ವಿಕರನ್ನು ವಿಚಾರಿಸಿ ಅವರ ಪಿತೃಗಳು ಕಲಿತುಕೊಂಡದ್ದನ್ನು ತಿಳಿದುಕೊ.


ಏಕೆಂದರೆ ಆ ಸಮಯದಲ್ಲಿ ಮಹಾ ಸಂಕಟ ಇರುವುದು. ಲೋಕವು ಸೃಷ್ಟಿಯಾದಂದಿನಿಂದ ಇಂಥ ಸಂಕಟವು ಎಂದೂ ಸಂಭವಿಸಿಲ್ಲ. ಇನ್ನು ಮುಂದೆಯೂ ಸಂಭವಿಸುವುದಿಲ್ಲ.


ನನಗೆ ಕಿವಿಗೊಡುವ ಜನರೇ, ಲಾಲಿಸಿರಿ!”


ಯಾಕೋಬಿನ ನಾಯಕರೇ, ಇಸ್ರೇಲಿನ ಪ್ರಧಾನರೇ, ನನಗೆ ಕಿವಿಗೊಡಿರಿ! ಸರಿಯಾದ ಜೀವಿತವನ್ನು ನೀವು ದ್ವೇಷಿಸುತ್ತೀರಿ. ನೆಟ್ಟಗಿರುವದನ್ನು ಡೊಂಕಾಗಿ ನೀವು ಮಾಡುವಿರಿ.


ಆಗ ನಾನು ಹೇಳಿದ್ದೇನೆಂದರೆ, “ಯಾಕೋಬಿನ ನಾಯಕರೇ, ಇಸ್ರೇಲಿನ ಅಧಿಪತಿಗಳೇ, ನನ್ನ ಮಾತನ್ನು ಕೇಳಿರಿ. ನ್ಯಾಯ ಏನು ಎಂದು ನಿಮಗೆ ತಿಳಿದಿರಬೇಕು.


ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು.


ಇಸ್ರೇಲಿನ ಜನರೇ, ಈ ಹಾಡನ್ನು ಕೇಳಿರಿ. ಇದು ನಿಮ್ಮ ಮರಣದ ಗೀತೆ.


ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ.


ಇಸ್ರೇಲಿನ ಜನರೇ, ಈ ಸಂದೇಶಕ್ಕೆ ಕಿವಿಗೊಡಿರಿ! ನಿಮ್ಮ ವಿಷಯವಾಗಿ ಯೆಹೋವನು ಹೀಗೆ ಹೇಳಿದ್ದಾನೆ. ಇಸ್ರೇಲೇ, ಇದು ನಾನು ಈಜಿಪ್ಟ್‌ನಿಂದ ಬಿಡಿಸಿಕೊಂಡು ಬಂದ ಎಲ್ಲಾ ಕುಟುಂಬಗಳವರ (ಇಸ್ರೇಲ್) ವಿಷಯವಾದ ಸಂದೇಶ.


ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ.


ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ಈ ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ. ನಿಷ್ಠಾವಂತರೂ ಅಲ್ಲ.


“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.


ಬುದ್ಧಿ ಇಲ್ಲದ ಮೂರ್ಖಜನರೇ, ಈ ಸಂದೇಶವನ್ನು ಕೇಳಿರಿ. ನಿಮಗೆ ಕಣ್ಣುಗಳಿವೆ ಆದರೆ ನೀವು ನೋಡುವದಿಲ್ಲ, ನಿಮಗೆ ಕಿವಿಗಳಿವೆ ಆದರೆ ನೀವು ಕೇಳುವದಿಲ್ಲ.


ಎಲ್ಲಾ ಜನಾಂಗಗಳೇ, ಹತ್ತಿರ ಬಂದು ಕೇಳಿರಿ; ಜನಗಳೇ ಸ್ಪಷ್ಟವಾಗಿ ಕೇಳಿಸಿಕೊಳ್ಳಿರಿ. ಭೂಮಿಯೂ ಭೂಮಿಯ ಮೇಲಿರುವ ಸಮಸ್ತವೂ ಅವುಗಳಿಗೆ ಕಿವಿಗೊಡಬೇಕು. ಲೋಕವೂ ಅದರಲ್ಲಿರುವ ಸಮಸ್ತವೂ ಆಲಿಸಲಿ.


“ಆದರೆ ನೀವು ಯೆಹೋವನಿಗೆ ಭಯಪಡುವವರಾಗಿರಬೇಕು. ಯಾಕೆಂದರೆ ಆತನು ನಿಮಗೆ ಸಂಕಟದ ಕಾಲವನ್ನು ತಂದೊಡ್ಡುವನು. ಅದು ಎಫ್ರಾಯೀಮ್ ಯೆಹೂದದಿಂದ ಅಗಲಿಹೋದ ಸಮಯದಲ್ಲಾದ ಸಂಕಟದಂತಿರುವುದು. ಆ ಸಂಕಟವು ನಿಮ್ಮ ಜನಗಳಿಗೂ ನಿಮ್ಮ ಪೂರ್ವಿಕರ ಕುಟುಂಬಕ್ಕೂ ಬರುವದು. ದೇವರು ಏನು ಮಾಡುವನು? ಆತನು ಅಶ್ಶೂರದ ರಾಜನನ್ನು ನಿಮಗೆ ವಿರುದ್ಧವಾಗಿ ಯುದ್ಧಕ್ಕೆ ಬರಮಾಡುವನು.


ಸರ್ವಜನಾಂಗಗಳೇ, ಕೇಳಿರಿ, ಭೂನಿವಾಸಿಗಳೆಲ್ಲರೇ, ಆಲಿಸಿರಿ.


ದುಷ್ಟರು ದೀರ್ಘಕಾಲ ಜೀವಿಸುವುದೇಕೆ? ಅವರು ವೃದ್ಧರಾಗುವವರೆಗೂ ಅಭಿವೃದ್ಧಿಯಾಗುತ್ತಾ ಬಾಳುವುದೇಕೆ?


ನಿನ್ನ ತಂದೆಗಿಂತಲೂ ವಯಸ್ಸಾಗಿರುವ, ಕೂದಲು ಬೆಳ್ಳಗಾಗಿರುವ ವೃದ್ಧನು ನಮ್ಮಲ್ಲಿದ್ದಾನೆ.


‘ಜ್ಞಾನವು ವೃದ್ಧರಲ್ಲಿಲ್ಲವೇ? ದೀರ್ಘಾಯುಷ್ಯವು ತಿಳಿವಳಿಕೆಯನ್ನು ಉಂಟುಮಾಡುವುದಿಲ್ಲವೇ?’


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಈ ಮರವು ದೇವರ ತೋಟದಲ್ಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು