Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:20 - ಪರಿಶುದ್ದ ಬೈಬಲ್‌

20 ಕಾಡುಪ್ರಾಣಿಗಳೂ ಬಾಯಾರಿ ನಿನ್ನ ಕಡೆಗೆ ನೋಡುತ್ತಿವೆ. ನೀರಿನ ತೊರೆಗಳು ಬತ್ತಿಹೋಗಿವೆ. ನೀರೇ ಇಲ್ಲ. ನಮ್ಮ ಹಸಿರು ಹುಲ್ಲುಗಾವಲು ಬೆಂಕಿಯ ದೆಸೆಯಿಂದ ಮರುಭೂಮಿಯಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. ನೀರಿನ ಹೊಳೆಗಳು ಬತ್ತಿಹೋಗಿವೆ. ಕಾಡಿನ ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕಾಡುಮೃಗಗಳು ನಿನ್ನ ಕಡೆಗೆ ತಲೆಯೆತ್ತಿವೆ; ಹಳ್ಳಕೊಳ್ಳಗಳು ಬತ್ತಿಹೋಗಿವೆ; ಹುಲ್ಲುಗಾವಲನ್ನು ಕಾಳ್ಗಿಚ್ಚು ದಹಿಸಿಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಭೂಜಂತುಗಳೂ ನಿನ್ನ ಕಡೆಗೆ ತಲೆಯೆತ್ತುತ್ತವೆ; ತೊರೆಗಳು ಬತ್ತಿಹೋಗಿವೆ, ಕಾಡಿನ ಹುಲ್ಗಾವಲನ್ನು ಕಿಚ್ಚು ನುಂಗಿಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕಾಡುಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. ನೀರಿನ ಹೊಳೆಗಳು ಬತ್ತಿ ಹೋಗಿವೆ. ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:20
9 ತಿಳಿವುಗಳ ಹೋಲಿಕೆ  

ಸಿಂಹಗಳು ಬೇಟೆಯಾಡುವಾಗ ಆಹಾರಕ್ಕಾಗಿ ದೇವರನ್ನು ಕೇಳಿಕೊಳ್ಳುತ್ತಿವೆಯೊ ಎಂಬಂತೆ ಬರ್ಜಿಸುತ್ತವೆ.


ಅಲ್ಲಿಯೂ ಮಳೆಯಿಲ್ಲದ್ದರಿಂದ, ಸ್ವಲ್ಪಕಾಲದ ಬಳಿಕ ಹಳ್ಳವೂ ಬತ್ತಿಹೋಯಿತು.


ದೇವರು ಪ್ರಾಣಿಗಳಿಗೂ ಪಕ್ಷಿಯ ಮರಿಗಳಿಗೂ ಆಹಾರ ಕೊಡುವನು.


ಎಲ್ಲಾ ಜೀವಿಗಳು ತಮ್ಮ ಆಹಾರಕ್ಕಾಗಿ ನಿನ್ನನ್ನೇ ನೋಡುತ್ತವೆ. ನೀನು ಸಮಯಕ್ಕೆ ಸರಿಯಾಗಿ ಅವುಗಳಿಗೆ ಆಹಾರವನ್ನು ಕೊಡುವೆ.


ಕಾಗೆಗಳು ಆಹಾರವಿಲ್ಲದೆ ಅಲೆದಾಡುತ್ತಿರುವ ಅವುಗಳ ಮರಿಗಳು ದೇವರಿಗೆ ಮೊರೆಯಿಡುವಾಗ ಅವುಗಳಿಗೆ ಆಹಾರವನ್ನು ಒದಗಿಸುವವರು ಯಾರು?


ರಾಜನಾದ ಅಹಾಬನು ಓಬದ್ಯನಿಗೆ, “ನನ್ನ ಜೊತೆಯಲ್ಲಿ ಬಾ. ನಾವು ದೇಶದಲ್ಲಿರುವ ಪ್ರತಿಯೊಂದು ನೀರಿನ ಬುಗ್ಗೆಗಳಿಗೂ ತೊರೆಗಳಿಗೂ ಹೋಗಿ ನಮ್ಮ ಕುದುರೆಗಳಿಗೂ ಹೇಸರಕತ್ತೆಗಳಿಗೂ ಸಾಕಷ್ಟು ಹುಲ್ಲು ಸಿಕ್ಕುತ್ತದೆಯೋ ನೋಡಿಕೊಂಡು ಬರೋಣ. ಸಿಕ್ಕುವುದಾದರೆ, ನಮ್ಮ ಪಶುಗಳು ಸಾಯುವುದಿಲ್ಲ” ಎಂದು ಹೇಳಿದನು.


ಭೂಮಿಗೆ ಮಳೆ ಬೀಳುವದಿಲ್ಲ. ಯಾರೂ ಬಿತ್ತನೆಗಾಗಿ ಭೂಮಿಯನ್ನು ಉಳುವದಿಲ್ಲ. ರೈತರು ಎದೆಗುಂದುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.


ಹನನ್ಯನೇ, ನಾನು ಮತ್ತು ನೀನು ಪ್ರವಾದಿಗಳಾಗುವದಕ್ಕಿಂತ ಬಹಳ ಮುಂಚೆ ಪ್ರವಾದಿಗಳು ಇದ್ದರು. ಯುದ್ಧ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳು ಅನೇಕ ದೇಶಗಳಿಗೆ ಮತ್ತು ದೊಡ್ಡದೊಡ್ಡ ರಾಜ್ಯಗಳಿಗೆ ಬರುತ್ತವೆ ಎಂದು ಅವರು ಪ್ರವಾದಿಸಿದ್ದಾರೆ.


ಪ್ರಾಣಿಗಳು ಹಸಿವಿನಿಂದ ನರಳಾಡುತ್ತಿವೆ. ಪ್ರಾಣಿಗಳ ಹಿಂಡು ಗಲಿಬಿಲಿಗೊಂಡು ಅಡ್ಡಾಡುತ್ತವೆ. ಅವುಗಳಿಗೆ ತಿನ್ನಲು ಹುಲ್ಲು ಇಲ್ಲ. ಕುರಿಗಳು ಸಾಯುತ್ತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು